Rain Alert: ಈ ಜಿಲ್ಲೆಗಳಲ್ಲಿಂದು ಭಾರೀ ಮಳೆಯ ಮುನ್ಸೂಚನೆ; ಆಗಸ್ಟ್ 26ರ ತನಕ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್-karnataka rains heavy thunderstrom alert for people of these districts yellow alert for coastal karnataka prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Rain Alert: ಈ ಜಿಲ್ಲೆಗಳಲ್ಲಿಂದು ಭಾರೀ ಮಳೆಯ ಮುನ್ಸೂಚನೆ; ಆಗಸ್ಟ್ 26ರ ತನಕ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್

Rain Alert: ಈ ಜಿಲ್ಲೆಗಳಲ್ಲಿಂದು ಭಾರೀ ಮಳೆಯ ಮುನ್ಸೂಚನೆ; ಆಗಸ್ಟ್ 26ರ ತನಕ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್

Rain Alert: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್​ 28ರ ತನಕ ಕೆಲವೆಡೆ ಭಾರಿ ಪ್ರಮಾಣದಲ್ಲಿ ಆಗಲಿದೆ. ಹೀಗಾಗಿ ಆಗಸ್ಟ್​ 26ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯ ಮುನ್ಸೂಚನೆ
ಮಳೆಯ ಮುನ್ಸೂಚನೆ

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು (ಆಗಸ್ಟ್​ 23) ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಆಗಸ್ಟ್​ 26ರ ತನಕ ಯಲ್ಲೋ ಆಲರ್ಟ್ ಘೋಷಿಸಲಾಗಿದೆ. ಕೆಲವು ಕಡೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಮಾತ್ರವಲ್ಲ, ಆಗಸ್ಟ್​ 28ರ ತನಕವೂ ಇದೇ ಮಳೆ ಮುಂದುವರೆಯಲಿದೆ. 24ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜೊತೆಗೆ ಬಾಗಲಕೋಟೆ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 25ರಂದು ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿಯಾಗುವ ಸಾಧ್ಯತೆ ಇದೆ. ಆಗಸ್ಟ್​ 26ರಂದು ಸಹ ಇದೇ ಜಿಲ್ಲೆಗಳಲ್ಲಿ ವರುಣನ ಆರ್ಭಟ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗದ ಗಂಟೆಗೆ 45 ಕಿಮೀನಿಂದ 55 ಕಿಮೀ ವೇಗದದಲ್ಲಿ 65 ಕಿಮೀವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆ ಇದೆ. ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವಾರಣ ಇರಲಿದೆ. ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಆಗಿರಬಹುದು.

ಆಗಸ್ಟ್​ 22ರಂದು ಎಲ್ಲಿಲ್ಲಿ ಮಳೆಯಾಯ್ತು?

ಆಗಸ್ಟ್​ 22ರ ಗುರುವಾರ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಗಾಳಿಯ ವೇಗ 40-50 ಕಿಮೀ ವೇಗ ಇತ್ತು. ಬಾಗಲಕೋಟೆ, ವಿಜಯಪುರ, ಬೀದರ್​ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಮಳೆಯಾಗಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಿದೆ.

ಅತಿ ಹೆಚ್ಚು ಮಳೆಯ ಪ್ರಮಾಣ

ಆಗಸ್ಟ್​ 22ರಂದು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಗುತ್ತಲ್ (ಹಾವೇರಿ), ನಲ್ವತ್ವಾಡದಲ್ಲಿ (ವಿಜಯಪುರ) ತಲಾ 6 ಸೆಂ.ಮೀ ಮಳೆಯಾಗಿದೆ. ತಿಕ್ಕೋಟ (ಉಡುಪಿ), ದೇವರಹಿಪ್ಪರಗಿ (ವಿಜಯಪುರ), ಭಾಗಮಂಡಲ (ಕೊಡಗು)ದಲ್ಲಿ ತಲಾ 4 ಸೆಂ.ಮೀ, ಸಿದ್ಧಾಪುರ (ಉಡುಪಿ), ಕೊಲ್ಲೂರು (ಉಡುಪಿ), ಇಳಕಲ್ (ಬಾಗಲಕೋಟೆ), ರಾಯಚೂರು, ಸೇಡಂ, ಹಾವೇರಿ, ಸೇರಿದಂತೆ ಹಲವೆಡೆ ತಲಾ 3 ಸೆಂ.ಮೀ ಮಳೆಯಾಗಿದೆ.