ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮೇ 28 ರವರೆಗೆ ವಿಸ್ತರಣೆ, ಆನ್‌ಲೈನ್‌ ಸ್ವಯಂ ಘೋಷಣೆಗೂ ಅವಕಾಶ
ಕನ್ನಡ ಸುದ್ದಿ  /  ಕರ್ನಾಟಕ  /  ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮೇ 28 ರವರೆಗೆ ವಿಸ್ತರಣೆ, ಆನ್‌ಲೈನ್‌ ಸ್ವಯಂ ಘೋಷಣೆಗೂ ಅವಕಾಶ

ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮೇ 28 ರವರೆಗೆ ವಿಸ್ತರಣೆ, ಆನ್‌ಲೈನ್‌ ಸ್ವಯಂ ಘೋಷಣೆಗೂ ಅವಕಾಶ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಗಣತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಗಣತಿ ಅವಧಿಯನ್ನು ಮೇ 28ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಗಣತಿ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಗಣತಿ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಠ ಜಾತಿ ಮನೆ ಮನೆ ಸಮೀಕ್ಷೆ ಅವಧಿಯನ್ನು ಮೇ 25 ವರೆಗೆ ವಿಸ್ತರಿಸಿ ಆದೇಶ ಮಾಡಿದೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ.ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ 28 ಮೇ ವರೆಗೂ ನಿಗದಿಗೊಳಿಸಿದೆ.. ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಿದೆ

ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ. 05 ರಿಂದ ಆರಂಭಗೊಂಡಿದ್ದು, ಸರ್ಕಾರದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ಸೂಚನೆ ನೀಡಿರುವಂತೆ, ಇದೀಗ ಸಮೀಕ್ಷಾ ಕಾರ್ಯವನ್ನು ಮೇ. 28 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿಯಂತೆ ಒಟ್ಟಾರೆ ಸಮೀಕ್ಷಾ ಕಾರ್ಯ ಮೇ. 23 ರವರೆಗೆ ನಡೆಸಬೇಕಾಗಿತ್ತು. ಇದೀಗ ಮೇ. 28 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 25 ರವರೆಗೆ ಜರುಗಲಿದೆ. ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮೇ. 28 ರವರೆಗೆ ಜರುಗಲಿದ್ದು, ಮೂರನೆ ಹಂತದಲ್ಲಿ ಸ್ವಯಂ ಘೋಷಣೆ ಮಾಡಿ, ಆನ್‍ಲೈನ್ ಮೂಲಕ ಸಮೀಕ್ಷೆ ಕಾರ್ಯವು ಮೇ. 28 ರವರೆಗೆ ಜರುಗಲಿದೆ.

ಸಾರ್ವಜನಿಕರು ಪರಿಷ್ಕೃತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೋರಿದ್ದಾರೆ.

ಸಮೀಕ್ಷೆ ಹೇಗೆ

ಮೊಬೈಲ್ ಅಪ್ಲಿಕೇಷನ್ ಮೂಲಕ ಮಾಹಿತಿ ತುಂಬುವ ಬಗ್ಗೆ ಪರಿಶೀಲಿಸಿದರು. ಸಮೀಕ್ಷೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಮೀಕ್ಷೆ ಅಪ್ಲಿಕೇಷನ್‍ಗೆ ಲಾಗಿನ್ ಆಗುವುದು. ಸಮೀಕ್ಷೆದಾರರ ಮೊಬೈಲ್ ಸಂಖ್ಯೆಗೆ ಒಟಿಪಿ ನಮೂದಿಸಿ ಲಾಗಿನ್ ಆಗುವುದು, ಸಮೀಕ್ಷೆ ಪ್ರಾರಂಭಿಸಿ ಎಂಬ ಟ್ಯಾಗ್‍ನ್ನು ಒಳಗೊಂಡು ಸಮೀಕ್ಷೆಗೆ ಕ್ಲಿಕ್ ಮಾಡುವುದು, ಹಾಗೆಯೇ ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷೆ ಪ್ರಾರಂಭಿಸುವುದು.

ಮನೆಯ ಮುಖ್ಯಸ್ಥರ ಮತದಾರರ ಪಟ್ಟಿಯಲ್ಲಿನ ಕ್ರಮಸಂಖ್ಯೆಯನ್ನು ನಮೂದು ಮಾಡುವುದು, ಪರಿಶಿಷ್ಟ ಜಾತಿಗೆ ಸೇರಿದವರೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವುದು, ನಂತರ ಪರಿಶಿಷ್ಟ ಜಾತಿ ಕುಟುಂಬದವರ ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆ ನಮೂದಿಸಿ ಸಲ್ಲಿಸುವುದು, ಕುಟುಂಬದ ಸದಸ್ಯರ ವಿವರಗಳು, ಸದಸ್ಯರ ಹೆಸರು, ಜನ್ಮ ದಿನಾಂಕ, ಲಿಂಗ ವಿವರವನ್ನು ಸಲ್ಲಿಸುವುದು, ಪ್ರಮಾಣ ಪತ್ರ ನೀಡುವುದು, ಪಡಿತರ ಚೀಟಿ ನಮೂದಿಸಿ ಕುಟುಂಬದ ಡೇಟಾದಲ್ಲಿರುವ ವಿವರವನ್ನು ಸ್ವಯಂ ಚಾಲಿತವಾಗಿ ಗಮನಿಸುವುದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದೀರ ಎಂಬ ಬಗ್ಗೆ ಮಾಹಿತಿ ಪಡೆಯುವುದು.

ಲಿಂಗ, ವಯಸ್ಸು, ಆಧಾರ್ ಕಾರ್ಡ್ ಸಂಖ್ಯೆ, ಮತ್ತಿತರವನ್ನು ಭರ್ತಿ ಮಾಡುವುದು, ಶಿಕ್ಷಣ, ವಿದ್ಯಾಭ್ಯಾಸ, ಅಕ್ಷರಸ್ಥ, ಅನಕ್ಷರಸ್ಥ, ಶಾಲೆ ಬಿಟ್ಟ ತರಗತಿ, ಉದ್ಯೋಗ ಮಾಹಿತಿ, ಸರ್ಕಾರಿ ಅಥವಾ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ, ಮತ್ತಿತರ ಭರ್ತಿ ಮಾಡುವ ಸಂಬಂಧ ಸ್ಥಳದಲ್ಲಿಯೇ ಮಾಹಿತಿಯನ್ನು ಒದಗಿಸಬೇಕು.

ಜಮೀನು, ಸಾಲ ಸಹಾಯಧನ, ಜಾನುವಾರು, ಕೃಷಿ ಸಂಬಂಧಿಸಿದ ಚಟುವಟಿಕೆಗಳು, ಸ್ಥಿರಾಸ್ತಿ ಮತ್ತು ಚರಾಸ್ತಿ, ಸರ್ಕಾರದಿಂದ ಪಡೆದಿರುವ ಸೌಲಭ್ಯಗಳು, ವಾಸವಿರಲು ಮನೆ, ಕುಡಿಯುವ ನೀರಿನ ಮೂಲ, ಇಂಧನ ಮೂಲ, ಮನೆಯ ಮಾಲೀಕತ್ವದ ಸ್ವರೂಪ, ನಿವೇಶನ, ಶೌಚಾಲಯ ಮಾಹಿತಿ ಪಡೆದು ಸಂಬಂಧಪಟ್ಟ ಕುಟುಂಬದವರಿಂದ ಒಪ್ಪಿಗೆ ಪಡೆಯುವುದು, ಸಮೀಕ್ಷೆಯ ಮಾಹಿತಿ ಒದಗಿಸಿದ ನಂತರ ಮಾಹಿತಿದಾರರಿಗೆ ಅಪ್ಲಿಕೇಶನ್ ಜನರೇಟ್ ಮಾಡುವುದ ಪ್ರಕ್ರಿಯೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.