ಶಿಕ್ಷಣ ಇಲಾಖೆಯಿಂದ ಆದೇಶ ಜಾರಿ, 2025-26 ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ
ಕನ್ನಡ ಸುದ್ದಿ  /  ಕರ್ನಾಟಕ  /  ಶಿಕ್ಷಣ ಇಲಾಖೆಯಿಂದ ಆದೇಶ ಜಾರಿ, 2025-26 ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಶಿಕ್ಷಣ ಇಲಾಖೆಯಿಂದ ಆದೇಶ ಜಾರಿ, 2025-26 ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬೇಸಿಗೆ ನಂತರ ತರಗತಿ ಆರಂಭ, ದಸರಾ ರಜೆ, ಮುಂದಿನ ಬೇಸಿಗೆ ರಜೆ ವಿವರಗಳಿವೆ.

ಕರ್ನಾಟಕದ 2025-26ನೇ ಶೈಕ್ಷಣಿಕ ವರ್ಷದ ಶಾಲಾ ವೇಳಾಪಟ್ಟಿ ಬಿಡುಗಡೆಯಾಗಿದೆ.
ಕರ್ನಾಟಕದ 2025-26ನೇ ಶೈಕ್ಷಣಿಕ ವರ್ಷದ ಶಾಲಾ ವೇಳಾಪಟ್ಟಿ ಬಿಡುಗಡೆಯಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಈಗಾಗಲೇ ಈ ಬಾರಿಯ ಎಲ್ಲಾ ಪರೀಕ್ಷೆಗಳು ಮುಗಿದು ಫಲಿತಾಂಶ ಪ್ರಕಟಣೆ ಮಾತ್ರ ಬಾಕಿ ಇದೆ. ಈ ಶೈಕ್ಷಣಿಕ ವರ್ಷದ ಬೇಸಿಗೆ ರಜೆಗಳು ಆರಂಭವಾಗುವ ಮುನ್ನವೇ ಮುಂದಿನ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಮುಂದಿನ ಸಾಲಿನ ತಿಂಗಳುವಾರು ಶಾಲೆಗಳು ಹಾಗೂ ರಜೆ ದಿನಗಳು, ಶೈಕ್ಷಣಿಕ ಚಟುವಟಿಕೆಗಳ ವಿವರಗಳನ್ನು ಆದೇಶದಲ್ಲಿ ವಿವರಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಂದಿನ ಶೈಕ್ಷಣಿಕ ವರ್ಷದ ಶೈಕ್ಷಣಿಕ ಅವಧಿ ಹಾಗೂ ರಜಾ ಅವಧಿಗಳನ್ನು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಪತ್ರ ಆಧರಿಸಿ ರೂಪಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಶಾಲಾ ಶಿಕ್ಷಣ ಚಟುವಟಿಕೆಗಳಿಗೆ ಸಂಬಂದಿಸಿದಂತೆ ಈಗಾಗಲೇ 2024- 25 ನೇ ಸಾಲಿನ ಚಟುವಟಿಕೆಗಳು ಮುಕ್ತಾಯದ ಹಂತದಲ್ಲಿವೆ. ಮುಂದಿನ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿಲು ಎಂದಿನಂತೆ ಅಗತ್ಯ ಪೂರ್ವ ಸಿದ್ದತೆಗಳನ್ನು 2025ರ ಮೇ 29ರಿಂದಲೇ ಶಾಲೆ ಆರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ. ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ಏಕ ರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂಎ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಹಾಗೂ ರಜಾ ದಿನಗಳನ್ನಾಧರಿಸಿ ಶೈಕ್ಷಣಿಕ ಚಟುವಟಿಕೆ ರೂಪಿಸಲಾಗಿದೆ ಅದಕ್ಕೆ ಅನುಗುಣವಾಗಿಯೇ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಇದನ್ನು ಅನುಷ್ಠಾನಗೊಳಿಸಿ ಅನುಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ಶಾಲಾ ಶೈಕ್ಷಣಿಕ ಅವಧಿಯು 2025ರ ಮೇ 29 ರಂದು ಆರಂಭಗೊಂಡು ಸೆಪ್ಟಂಬರ್‌ 19ರವರಗೆ ಇರಲಿದೆ. ಅಲ್ಲಿಂದ ದಸರಾ ರಜೆ ಶುರುವಾಗಲಿದೆ. ಇದಾದ ನಂತರ 2025ರ ಅಕ್ಟೋಬರ್ 8ರಿಂದ ಶಾಲೆಗಳು ಪುನಾರಂಭಗೊಂಡು 2026 ರ ಏಪ್ರಿಲ್‌ 10ರವರಗೆ ಕಾರ್ಯನಿರ್ವಹಿಸಲಿವೆ.

2025ರ ಸೆಪ್ಟಂಬರ್‌ 20ರಿಂದ ಅಕ್ಟೋಬರ್‌ 7 ರವರೆಗೆ ದಸರಾ ರಜೆ ಇರಲಿದೆ. 2026 ರ ಏಪ್ರಿಲ್‌ 11ರಿಂದ ಮೇ 28ರವರಗೆ ಬೇಸಿಗೆ ರಜೆಗಳು ಇರಲಿವೆ.ಮುಂದಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜೆ ದಿನಗಳು ಇರಲಿವೆ. ಒಟ್ಟು 242 ಶಾಲಾ ದಿನಗಳು ಇರಲಿವೆ. ಇದಲ್ಲದೇ ತಿಂಗಳವಾರು ರಜೆ ದಿನಗಳು ಹಾಗೂ ಶಾಲಾ ದಿನಗಳ ವಿವರಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ವರ್ಷದಲ್ಲಿ ಬರುವ ಪ್ರಮುಖ ದಿನಗಳ ಆಚರಣೆ, ನಿರ್ವಹಣೆಯನ್ನು ಮಾಡಬೇಕು. ಇದಲ್ಲದೇ ಇಡೀ ವರ್ಷದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಿ ಜಾರಿಗೊಳಿಸಬೇಕು. ಎಲ್ಲಾ ವರ್ಷಗಳ ಮೌಲ್ಯಾಂಕನ ಪರೀಕ್ಷೆಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ ಇಲಾಖೆಯ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು.ಕಾಲಕಾಲಕ್ಕೆ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನಗಳನ್ನು ಕೂಡ ನೀಡಲಾಗಿದೆ.

ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ನೀಡುವ ಊಟದ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಬರಪೀಡಿತ ಪ್ರದೇಶಗಳಲ್ಲಿ ಬೇಸಿಗೆ ರಜೆ ವೇಳೆಯೂ ಬಿಸಿಯೂಟದ ವ್ಯವಸ್ಥೆ ಮಾಡುವ ಆದೇಶ ಸರ್ಕಾರದಿಂದ ಬಂದರೆ ಅದನ್ನು ಜಾರಿಗೊಳಿಸಬೇಕು ಎಂದೂ ತಿಳಿಸಲಾಗಿದೆ.

ಈ ಬಾರಿ ಬೇಸಿಗೆ ರಜೆ ಮುಗಿದ ತಕ್ಷಣ ಶೈಕ್ಷಣಿಕ ವರ್ಷದ ಆರಂಭವನ್ನು ಶಾಲಾ ಹಂತದಲ್ಲಿ ಕಾರ್ಯಕ್ರಮಗಳ ಮೂಲಕ ನಡೆಸಲು ಯೋಜಿಸಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.

ಕರ್ನಾಟಕ ಶಾಲಾ ಶೈಕ್ಷಣಿಕ ಪಟ್ಟಿ
ಕರ್ನಾಟಕ ಶಾಲಾ ಶೈಕ್ಷಣಿಕ ಪಟ್ಟಿ
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.