SSLC ಪರೀಕ್ಷೆ-2025: ಏಪ್ರಿಲ್ 15 ರಿಂದ ಮೌಲ್ಯಮಾಪನ ಆರಂಭ; ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟ
ಎಸ್ ಎಸ್ ಎಲ್ ಸಿ ಪರೀಕ್ಷೆ-2025; ಏಪ್ರಿಲ್ 15 ರಿಂದ ಮೌಲ್ಯಮಾಪನ ಆರಂಭವಾಗಲಿದೆ. ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟ. ಆತಂಕ ಬೇಡ, ಫಲಿತಾಂಶ ಸುಧಾರಣೆಗೆ ವಿದ್ಯಾರ್ಥಿಗಳಿಗೆ ನಡೆಯಲಿವೆ ಇನ್ನೂ ಎರಡು ಪರೀಕ್ಷೆಗಳು. (ವರದಿ: ಎಚ್ ಮಾರುತಿ)

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಏಪ್ರಿಲ್ 4, 2025 ರವರೆಗೆ ನಡೆದಿದೆ. ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಮೇ 15 ರಿಂದ ಆರಂಭವಾಗುತ್ತಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯದಲ್ಲಿ 35 ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಉಪ ಮೌಲ್ಯಮಾಪಕರು ಏಪ್ರಿಲ್ 12 ರಂದು ಹಾಜರಾಗಿದ್ದರೆ ಸಹಾಯಕ ಮೌಲ್ಯಮಾಪಕರು ಏಪ್ರಿಲ್ 15 ರಂದು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ -1ಕ್ಕೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ಈ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ 2ನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ. 2024 ರಲ್ಲಿ ನಡೆದ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಶೇ.81.11ರಷ್ಟು ಬಾಲಕಿಯರು ಮತ್ತು ಶೇ.65.90 ರಷ್ಟು ಬಾಲಕರು ತೇರ್ಗಡೆ ಹೊಂದಿದ್ದರು. 2024 ರಲ್ಲಿ ಮೇ 9 ರಂದು ಫಲಿತಾಂಶ ಪ್ರಕಟವಾಗಿತ್ತು. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ/ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬೇಕು.
ನಿರಾಶರಾಗಬೇಡಿ ಮತ್ತೆ ಎರಡು ಅವಕಾಶಗಳಿರುತ್ತವೆ: ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಲಭಿಸದಿದ್ದರೆ ನಿರಾಶರಾಗಬೇಡಿ. ಪರೀಕ್ಷೆ ಬರೆದು ಉತ್ತೀರ್ಣರಾಗಲು ನಿಮಗೆ ಇನ್ನೂ ಎರಡು ಅವಕಾಶಗಳಿರುತ್ತದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ಜರುಗಲಿವೆ.
ಫಲಿತಾಂಶ ನೋಡುವುದು ಹೇಗೆ?
ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ sslc.karnataka.gov.in ಮತ್ತು karresults.nic.in ಮೂಲಕ ಪಡೆಯಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಫಲಿತಾಂಶ ಲಾಗಿನ್ ವಿಂಡೋದಲ್ಲಿ ನಮೂದಿಸಬೇಕು. ಫಲಿತಾಂಶವನ್ನು karresults.nic.in ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.
ಆನ್‌ಲೈನ್ ಮೋಡ್‌ನಲ್ಲಿ ಪರಿಶೀಲಿಸಲು ಈ ಸೂಚನೆಗಳನ್ನು ಪಾಲಿಸಿ.
ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ' ಕರ್ನಾಟಕ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳು 2025 ' ಲಿಂಕ್ಅನ್ನು ಕ್ಲಿಕ್ ಮಾಡಿ.
ಹಂತ 3: SSLC ಪರೀಕ್ಷೆಯ ಫಲಿತಾಂಶ 2025 ಲಾಗಿನ್ ವಿಂಡೋ.
ಹಂತ 4: ಸೂಕ್ತ ಕ್ಷೇತ್ರಗಳಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 5: ಕರ್ನಾಟಕ ಮಂಡಳಿಯ SSLC ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ.
ಹಂತ 6: ಭವಿಷ್ಯದ ಉಲ್ಲೇಖಕ್ಕಾಗಿ SSLC.karnataka.gov.in ಆನ್‌ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.
ಡಿಜಿಲಾಕರ್ ಮೂಲಕ ಹೀಗೆ ಫಲಿತಾಂಶ ಪರಿಶೀಲಿಸಿ:
ವಿದ್ಯಾರ್ಥಿಗಳು ಡಿಜಿಲಾಕರ್ ಮೂಲಕವೂ ಫಲಿತಾಂಶವನ್ನು ಪರಿಶೀಲಿಸಬಹುದು.
ಹಂತ 1: ಡಿಜಿಲಾಕರ್ ಅಧಿಕೃತ ವೆಬ್‌ಸೈಟ್‌ಗೆ digilocker.gov.in ಅಥವಾ
ಅಪ್ಲಿಕೇಶನ್‌ಗೆ ಭೇಟಿ ನೀಡಿ.
ಹಂತ 2: ಅಪ್ಲಿಕೇಶನ್ ತೆರೆಯಿರಿ ಮತ್ತು ಸೈನ್ ಅಪ್ ಮಾಡಿ.
ಹಂತ 3: ಹೆಸರು, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಮತ್ತು ಆಧಾರ್
ಸಂಖ್ಯೆಯಂತಹ ಎಲ್ಲಾ ವಿವರಗಳನ್ನು ನಮೂದಿಸಿ.
ಹಂತ 4: ಆರು-ಅಂಕಿಯ ಸೆಕ್ಯೂರಿಟಿ ಕೋಡ್ ರಚಿಸಿ.
ಹಂತ 5: " ಸಲ್ಲಿಸು " ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಬಳಕೆದಾರ ಹೆಸರು ಮತ್ತು
ಪಾಸ್ ವರ್ಡ್ ಅನ್ನು ಹೊಂದಿಸಿ.
ಹಂತ 6: ಶಿಕ್ಷಣ ಟ್ಯಾಬ್ ಅಡಿಯಲ್ಲಿ " ಕರ್ನಾಟಕ ಬೋರ್ಡ್ " ಮೇಲೆ ಕ್ಲಿಕ್ ಮಾಡಿ.
ಹಂತ 7: " ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ 2025 " ಮೇಲೆ ಕ್ಲಿಕ್ ಮಾಡಿ .
ಹಂತ 8: ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು ಸೈನ್ ಇನ್ ಮಾಡಿ.
ಹಂತ 9: ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2025 ರ ಅಂಕಪಟ್ಟಿಯನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಹಂತ 10: ಭವಿಷ್ಯದ ಉಲ್ಲೇಖಕ್ಕಾಗಿ ಕರ್ನಾಟಕ SSLC ಫಲಿತಾಂಶ 2025 ಅನ್ನು ಡೌನ್ ಲೋಡ್ ಮಾಡಿ.
SMS ಮೂಲಕ ಪರಿಶೀಲಿಸುವುದು ಹೇಗೆ?
KAR10<ಸ್ಪೇಸ್>ರೋಲ್ ಸಂಖ್ಯೆ ನಂತಹ ಸಂದೇಶವನ್ನು ಟೈಪ್ ಮಾಡಿ .
56263 ಗೆ ಸಂದೇಶ ಕಳುಹಿಸಿ.
ಫಲಿತಾಂಶವನ್ನು ವಿದ್ಯಾರ್ಥಿಗಳ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ವಿಭಾಗ