SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ; ವೇಳಾಪಟ್ಟಿ, ವಿದ್ಯಾರ್ಥಿಗಳಿಗೆ ಅಂತಿಮ ಸೂಚನೆ ಏನೇನು
SSLC Exam 2025: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರ ಶುಕ್ರವಾರದಿಂದ ಆರಂಭವಾಗಲಿದ್ದು. ಇದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳಲಾಗಿದೆ.

SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಮಾರ್ಚ್ 21ರ ಶುಕ್ರವಾರದಿಂದ ಆರಂಭವಾಗಲಿವೆ. ಕರ್ನಾಟಕದ ಜಿಲ್ಲಾ, ತಾಲ್ಲೂಕು, ಹೋಬಳಿ ಸೇರಿದಂತೆ ಗ್ರಾಮ ಮಟ್ಟದಲ್ಲಿರುವ ಸರ್ಕಾರಿ, ಖಾಸಗಿ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಶುರುವಾಗಲಿವೆ. ಮೊದಲ ದಿನವೇ ವಿದ್ಯಾರ್ಥಿಗಳು ಭಾಷಾ ವಿಷಯದ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಸುಸೂತ್ರ ಪರೀಕ್ಷೆ ಆಯೋಜನೆಗಾಗಿ ಸಿದ್ದತೆಗಳನ್ನೂ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಮಾಡಿಕೊಂಡಿದೆ. ಅಲ್ಲದೇ ಪರೀಕ್ಷೆ ಎದುರಿಸಲು ಅಣಿಯಾಗಿರುವ ವಿದ್ಯಾರ್ಥಿಗಳಿಗೂ ಸೂಚನೆಗಳನ್ನು ನೀಡಿದೆ. ಮೂರು ತಿಂಗಳ ಹಿಂದೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮಂಡಳಿ ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ 15,881 ಶಾಲೆಗಳಲ್ಲಿ ಒಟ್ಟು 8,42,817 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. ಇವರೊಟ್ಟಿಗೆ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಇದ್ದಾರೆ. ಪುನರಾವರ್ತಿತ ಹಾಗೂ ಖಾಸಗಿ ನೋಂದಣಿಯೂ ಸೇರಿ ಸುಮಾರು 9 ಲಕ್ಷ ಮಂದಿ ಪರೀಕ್ಷೆಯನ್ನು ಬರೆಯಲಿದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
2025ರ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 21, 2025 (ಶುಕ್ರವಾರ): ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (NCERT), ಸಂಸ್ಕೃತ (ಪ್ರಥಮ ಭಾಷೆ)
ಮಾರ್ಚ್ 24, 2025 (ಸೋಮವಾರ): ಗಣಿತ, ಸಮಾಜಶಾಸ್ತ್ರ
ಮಾರ್ಚ್ 26, 2025 (ಬುಧವಾರ): ಇಂಗ್ಲೀಷ್, ಕನ್ನಡ (ದ್ವಿತೀಯ ಭಾಷೆ).
ಮಾರ್ಚ್ 29, 2025 (ಶನಿವಾರ): ಸಮಾಜ ವಿಜ್ಞಾನ
ಏಪ್ರಿಲ್ 01, 2025 (ಮಂಗಳವಾರ): ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಪ್ರೋಗ್ರಾಮಿಂಗ್ ಇನ್ ANSI ‘C’, ಅರ್ಥಶಾಸ್ತ್ರ
ಏಪ್ರಿಲ್ 02, 2025 (ಬುಧವಾರ): ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
ಏಪ್ರಿಲ್ 04, 2025 (ಶುಕ್ರವಾರ): ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ತೃತೀಯ ಭಾಷೆ)
ಏಪ್ರಿಲ್ 04, 2025 (ಶುಕ್ರವಾರ): ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್ವೇರ್ (NSQF ವಿಷಯಗಳು)
ಈ ಸೂಚನೆಗಳನ್ನುಗಮನಿಸಿ
- ಮಾಚ್೯ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಲು ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
- ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿದ್ದು, ಅವರಲ್ಲಿ ಪರೀಕ್ಷೆಯ ಬಗ್ಗೆ ಯಾವುದೇ ಭಯ ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಬೇಕು. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸುವಂತೆಯೂ ಸೂಚಿಸಲಾಗಿದೆ.
- ಪೂರ್ಣ ಪರೀಕ್ಷೆ ವೆಬ್ ಕ್ಯಾಸ್ಟಿಂಗ್ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲಾಗುವುದು. ಪರೀಕ್ಷೆಯ ಚಲನ- ವಲನಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು
- ಮೂಲ ವ್ಯವಸ್ಥೆಗಳು ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಪರೀಕ್ಷಿಸಿಕೊಳ್ಳಿ ಎಂದು ತಿಳಿಸಲಾಗಿದೆ.
- ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರನ್ನು ಹಾಗೂ ಪೇಪರ್ ಕಸ್ಟೋಡಿಯನ್ ಗಳನ್ನು , ಪ್ರತಿ ಬ್ಲಾಕ್ ಗೆ ಒಬ್ಬರೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ
- ಆರೋಗ್ಯ ಇಲಾಖೆ ಅವರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗತ್ಯ ಔಷಧಿಗಳು ಹಾಗೂ ಒಆರ್‌ಎಸ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ.
- ಪರೀಕ್ಷೆ ನಡೆಯುವ ದಿನಗಳಂದು ಕೆಎಸ್ಆರ್‌ಟಿಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಸೂಚನೆಯನ್ನು ನೀಡಲಾಗಿದೆ.
- ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು.
- ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ ತೆರೆಯಲು ಅವಕಾಶ ಇರುವುದಿಲ್ಲ.
