SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21 ರಿಂದ ಆರಂಭ, ಕೇಂದ್ರಗಳಲ್ಲಿ ಸಿದ್ದತೆ ಹೇಗಿವೆ; 10 ಅಂಶಗಳು
ಕನ್ನಡ ಸುದ್ದಿ  /  ಕರ್ನಾಟಕ  /  Sslc Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21 ರಿಂದ ಆರಂಭ, ಕೇಂದ್ರಗಳಲ್ಲಿ ಸಿದ್ದತೆ ಹೇಗಿವೆ; 10 ಅಂಶಗಳು

SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21 ರಿಂದ ಆರಂಭ, ಕೇಂದ್ರಗಳಲ್ಲಿ ಸಿದ್ದತೆ ಹೇಗಿವೆ; 10 ಅಂಶಗಳು

SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಂದಿನ ವಾರ ಶುರುವಾಗಲಿದೆ. ಇದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳಲು ವಿದ್ಯಾರ್ಥಿಗಳು, ಪೋಷಕರಿಗೆ ಪ್ರಮುಖ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಮುಂದಿನ ವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ.
ಕರ್ನಾಟಕದಲ್ಲಿ ಮುಂದಿನ ವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ.

SSLC Exam 2025: ಕರ್ನಾಟಕದಲ್ಲಿ ಇನ್ನೇನು 2025ನೇ ಸಾಲಿನ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಇದಾದ ಮರುದಿನವೇ ಅಂದರೆ ಮಾರ್ಚ್‌ 21 ರ ಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ. ಇದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಸಿದ್ದತೆಗಳನ್ನು ಮಾಡಿಕೊಂಡಿದೆ. ಕರ್ನಾಟದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ಏಪ್ರಿಲ್‌ ಮೊದಲನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಹಿಂದಿನ ವರ್ಷದಂತೆಯೇ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಹಲವು ಮಹತ್ವದ ಸೂಚನೆಗಳನ್ನು ನೀಡಿದೆ. ಪರೀಕ್ಷೆಗೆ ಹೋಗುವವರು, ಪೋಷಕರು, ಶಿಕ್ಷಕರಿಗೂ ಸೂಚನೆಗಳಿವೆ.

  1. ಮಾಚ್೯21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಲು ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
  2. ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ 15,881 ಶಾಲೆಗಳಲ್ಲಿ ಒಟ್ಟು 8,42,817 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. ಇವರೊಟ್ಟಿಗೆ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಇದ್ದಾರೆ. ಪುನರಾವರ್ತಿತ ಹಾಗೂ ಖಾಸಗಿ ನೋಂದಣಿಯೂ ಸೇರಿ ಸುಮಾರು 9 ಲಕ್ಷ ಮಂದಿ ಪರೀಕ್ಷೆಯನ್ನು ಬರೆಯಲಿದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
  3. ಪ್ರತಿ‌ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರನ್ನು ಹಾಗೂ ಪೇಪರ್ ಕಸ್ಟೋಡಿಯನ್ ಗಳನ್ನು , ಪ್ರತಿ ಬ್ಲಾಕ್ ಗೆ ಒಬ್ಬರೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ
  4. ಪೂರ್ಣ ಪರೀಕ್ಷೆ ವೆಬ್ ಕ್ಯಾಸ್ಟಿಂಗ್ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ‌.ವಿ ಅಳವಡಿಸಲಾಗುವುದು. ಪರೀಕ್ಷೆಯ ಚಲನ- ಕವನಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು
  5. ಮೂಲ ವ್ಯವಸ್ಥೆಗಳು ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ‌ ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಪರೀಕ್ಷಿಸಿಕೊಳ್ಳಿ ಎಂದು ತಿಳಿಸಲಾಗಿದೆ.
  6. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ‌ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು.
  7. ಪರೀಕ್ಷೆ ನಡೆಯುವ ದಿನಗಳಂದು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಸೂಚನೆಯನ್ನು ನೀಡಲಾಗಿದೆ.
  8. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ ಗಳು ತೆರೆಯಲು ಅವಕಾಶವಿರುವುದಿಲ್ಲ
  9. ಆರೋಗ್ಯ ಇಲಾಖೆ ಅವರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗತ್ಯ ಔಷಧಿಗಳು ಹಾಗೂ ಒ.ಆರ್. ಎಸ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ.
  10. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿದ್ದು, ಅವರಲ್ಲಿ ಪರೀಕ್ಷೆಯ ಬಗ್ಗೆ ಯಾವುದೇ ಭಯ ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಿ. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸುವಂತೆಯೂ ಸೂಚನೆ ನೀಡಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner