SSLC Exam Faqs: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಕುರಿತಾದ 12 ಸಂದೇಹಗಳಿಗೆ ಇಲ್ಲಿದೆ ಉತ್ತರ, ವಾರ್ಷಿಕ ಪರೀಕ್ಷೆ ಪ್ರಶ್ನೋತ್ತರ
ಕನ್ನಡ ಸುದ್ದಿ  /  ಕರ್ನಾಟಕ  /  Sslc Exam Faqs: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಕುರಿತಾದ 12 ಸಂದೇಹಗಳಿಗೆ ಇಲ್ಲಿದೆ ಉತ್ತರ, ವಾರ್ಷಿಕ ಪರೀಕ್ಷೆ ಪ್ರಶ್ನೋತ್ತರ

SSLC Exam Faqs: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಕುರಿತಾದ 12 ಸಂದೇಹಗಳಿಗೆ ಇಲ್ಲಿದೆ ಉತ್ತರ, ವಾರ್ಷಿಕ ಪರೀಕ್ಷೆ ಪ್ರಶ್ನೋತ್ತರ

sslc exam guide 2024 25: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ಕುರಿತು ವಿದ್ಯಾರ್ಥಿಗಳು ಸಾಕಷ್ಟು ಮಾಹಿತಿ ತಿಳಿದಿರಬೇಕಾಗುತ್ತದೆ. ವಿಶೇಷವಾಗಿ ಖಾಸಗಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಸಾಕಷ್ಟು ಸಂದೇಹಗಳು ಇರಬಹುದು.

SSLC Exam Faqs: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಾದ ಸಂದೇಹಗಳಿಗೆ ಇಲ್ಲಿದೆ ಉತ್ತರ
SSLC Exam Faqs: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಾದ ಸಂದೇಹಗಳಿಗೆ ಇಲ್ಲಿದೆ ಉತ್ತರ

SSLC exam guide 2024 25: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ಕುರಿತು ವಿದ್ಯಾರ್ಥಿಗಳು ಸಾಕಷ್ಟು ಮಾಹಿತಿ ತಿಳಿದಿರಬೇಕಾಗುತ್ತದೆ. ವಿಶೇಷವಾಗಿ ಖಾಸಗಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಸಾಕಷ್ಟು ಸಂದೇಹಗಳು ಇರಬಹುದು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತು ಎಲ್ಲರಲ್ಲಿಯೂ ಇರಬಹುದಾದ 12 ಸಂದೇಹಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025: ಈ ಮಾಹಿತಿ ನಿಮಗೆ ತಿಳಿದಿರಲಿ

  1. 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ಎಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತದೆ?

ಉತ್ತರ: 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ ವರ್ಷಕ್ಕೆ ಒಟ್ಟು ಮೂರು ಪರೀಕ್ಷೆ ನಡೆಸಲಾಗುತ್ತದೆ. ಇವುಗಳನ್ನು ವಾರ್ಷಿಕ ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ 3 ಎಂದು ಕರೆಯಲಾಗುತ್ತದೆ.

2. ಮಂಡಲಿಯಿಂದ ನಡೆಸಲಾಗುವ ಪರೀಕ್ಷೆಗಳನ್ನು ವಾರ್ಷಿಕ ಮತ್ತು ಪೂರಕ ಪರೀಕ್ಷೆ ಎಂದು ಕರೆಯಲಾಗುತ್ತದೆಯೇ?

ಉತ್ತರ: ಪೂರಕ ಪರೀಕ್ಷೆಗೆ ಬದಲಾಗಿ ವಾರ್ಷಿಕವಾಗಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಗಳನ್ನು ಕ್ರಮವಾಗಿ ವಾರ್ಷಿಕ ಪರೀಕ್ಷೆ -1, 2 ಮತ್ತು 3 ಎಂದು ಕರೆಯಲಾಗುತ್ತದೆ.

3. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆ ಎಂಬ ಹೆಸರಿನ ಬದಲಾಗಿ ವಾರ್ಷಿಕ ಪರೀಕ್ಷೆ 1, 2, 3 ಎಂದು ಬದಲಾಯಿಸಿರುವುದರ ಉದ್ದೇಶವೇನು?

ಉತ್ತರ: ಪೂರಕ ಪರೀಕ್ಷೆ ತೇರ್ಗಡೆ ವಿಚಾರವಾಗಿ ವಿದ್ಯಾರ್ಥಿಗಳಿಗೆ ಉಂಟಾಗುತ್ತಿದ್ದ ಕೀಳರಿಮೆ ನಿವಾರಿಸುವುದು ಮಮತ್ತು ಹೆಚಚುವರಿ ಪರೀಕ್ಷೆ ನಡೆಸುವ ಮೂಲಕ ಒಂದು ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಕೀಳರಿಮೆ ನಿವಾರಿಸುವುದು ಇದರ ಉದ್ದೇಶವಾಗಿದೆ.

4. ಈ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯ ಪ್ರಶ್ನೆಪತ್ರಿಕೆಗಳ ವಿನ್ಯಾಸ ಬದಲಾಗಿದೆಯೇ?

ಉತ್ತರ: ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಇಲ್ಲ.

5. ಮೂರು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಏಕರೂಪತೆಯನ್ನು ಹೊಂದಿರುತ್ತವೆಯೇ?

ಉತ್ತರ: ಹೌದು. ಮೂರು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆ ಇರುತ್ತವೆ

6. ಪರೀಕ್ಷೆ 1ಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳು ಪರೀಕ್ಷೆ 2 ಮತ್ತು ಪರೀಕ್ಷೆ-3ನ್ನು ತೆಗೆದುಕೊಳ್ಳಬಹುದೇ?

ಉತ್ತರ: ಹೌದು, ಪರೀಕ್ಷೆ ತೆಗೆದುಕೊಳ್ಳಬಹುದು.

7. ಎಲ್ಲಾ ವಿದ್ಯಾರ್ಥಿಗಳು ಎಲ್ಲಾ ಮೂರು ಪರೀಕ್ಷೆಗಳನ್ನು ಬರೆಯುವುದು ಕಡ್ಡಾಯವೇ?

ಉತ್ತರ: ಇಲ್ಲ, ಪರೀಕ್ಷೆ-1 ಕ್ಕೆ ನೋಂದಾಯಿಸುವುದು ಕಡ್ಡಾಯ. ವಿದ್ಯಾರ್ಥಿಗಳು ತಾವು ಇಚ್ಛಿಸಿದ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯಬಹುದು.

8. ಪ್ರಶ್ನೆ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುನ: ಪರೀಕ್ಷೆ ಬರೆಯಲು ಎಷ್ಟು ಅವಕಾಶಗಳಿರುತ್ತವೆ?

ಉತ್ತರ: ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುನ: ಪರೀಕ್ಷೆ ಬರೆಯಲು ಪರೀಕ್ಷೆ-1 ಸೇರಿದಂತೆಒಟ್ಟು ಸತತ ಆರು (06) ಅವಕಾಶಗಳಿರುತ್ತವೆ.

9. ಆರು ಪ್ರಯತ್ನಗಳು ಮುಕ್ತಾಯವಾದ ನಂತರ ಪುನಃ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶವಿದೆಯೇ?

ಉತ್ತರ: ಹೌದು, ಅವಕಾಶವಿದೆ. ಆರು ಪ್ರಯತ್ನಗಳು ಮುಕ್ತಾಯವಾದ ನಂತರ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡು, ಸದರಿ ಸಂದರ್ಭದಲ್ಲಿ ಚಾಲ್ತಿಯಲ್ಲಿರುವ ಪಠ್ಯಕ್ರಮವನ್ನು ವ್ಯಾಸಂಗ ಮಾಡಿ, ಪರೀಕ್ಷೆಗೆ ಹಾಜರಾಗಬಹುದು.

10. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯವೇ?

ಉತ್ತರ: ಹೌದು. ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ.

11. ಪರೀಕ್ಷೆ-1ರಲ್ಲಿ ತೇರ್ಗಡೆ ಹೊಂದಿದ ವಿಷಯಗಳ ಫಲಿತಾಂಶವನ್ನು/ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿದೆಯೇ?

ಉತ್ತರ: ಅವಕಾಶವಿದೆ. ಪರೀಕ್ಷೆ-1ರಲ್ಲಿ ಎಲ್ಲಾ ವಿಷಯಗಳಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಯು ಎರಡು ವರ್ಷಗಳ ಅವಧಿಯಲ್ಲಿ ವಿದ್ಯಾರ್ಥಿಯುು ಇಚ್ಛಿಸಿದಲ್ಲಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿದೆ. ಅತ್ಯುತ್ತಮ ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸಲಾಗುವುದು.

12. ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನದಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿದೆಯೇ?

ಉತ್ತರ: ಇಲ್ಲ, ಒಮ್ಮೆ ಆಂತರಿಕ ಮೌಲ್ಯಮಾಪನದಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿಲ್ಲ.

Whats_app_banner