SSLC Exam Result 2023: ನಾಳೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ
ಕರ್ನಾಟಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಬೆಂಗಳೂರು: 2022-2023ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ (ಮೇ 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದ ಕುರಿತಾಗಿ ಸುದ್ದಿಗೋಷ್ಠಿ ನಡೆಸಲಾಗುತ್ತದೆ. ಆ ಬಳಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
11 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ಬಳಿಕ ಶಾಲೆಗಳಲ್ಲೂ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ, ಇದರ ಜೊತೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೂ ಎಸ್‌ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
ಈ ಬಾರಿ ರಾಜ್ಯದಲ್ಲಿ 8.42 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.
ಈ ವರ್ಷ ಮಾರ್ಚ್ 31, 2023ಕ್ಕೆ ಪರೀಕ್ಷೆ ಆರಂಭವಾಗಿದ್ದು, ಏಪ್ರಿಲ್ 15 2023ಕ್ಕೆ ಕೊನೆಯ ಪರೀಕ್ಷೆ ಇತ್ತು. ಕಳೆದ ವರ್ಷ, ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಮೇ 19, 2022 ರಂದು ಫಲಿತಾಂಶ ಪ್ರಕಟವಾಗಿತ್ತು. ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಅದರಲ್ಲಿ ಶೇಕಡಾ 85.63 ರಷ್ಟು ಉತ್ತೀರ್ಣರಾಗಿದ್ದರು.
ವಿಭಾಗ