ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ
ಕನ್ನಡ ಸುದ್ದಿ  /  ಕರ್ನಾಟಕ  /  ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶುರುವಾಗಿದ್ದು, ಈ ತಿಂಗಳ ಕೊನೆಯೊಳಗೆ ಪೂರ್ಣಗೊಳ್ಳಲಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆ ಮುಗಿದು ಮೌಲ್ಯಮಾಪನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಮುಗಿದ ಬಳಿಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಈ ಸಲದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈ ಬಾರಿ ಮೇ ಮೊದಲ ವಾರದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಏಪ್ರಿಲ್ 16) ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜಿಲ್ಲಾ ಕೇಂದ್ರಗಳಲ್ಲಿ ಪ್ರಗತಿಯಲ್ಲಿದೆ. ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆ 1 ಕ್ಕೆ 15,881 ಶಾಲೆಗಳ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪರೀಕ್ಷೆ 1ರ ಫಲಿತಾಂಶದಲ್ಲಿ ಅಂಕ ಕಡಿಮೆ ಬಂದರೆ ಅಥವಾ ಫೇಲಾದರೆ ಅಂಕ ಸುಧಾರಣೆಗೆ ಪರೀಕ್ಷೆ 2 ಮತ್ತು ಪರೀಕ್ಷೆ 3 ಬರೆಯುವುದಕ್ಕೆ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರ ಫಲಿತಾಂಶ ಮೇ 9 ರಂದು ಪ್ರಕಟವಾಗಿತ್ತು. ಈ ಸಲವೂ ಇದೇ ದಿನಾಂಕದ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗಬಹುದು. ಪರೀಕ್ಷೆ 1 ರ ಫಲಿತಾಂಶ ಬಂದಾಗ ನೋಡುವುದು ಹೇಗೆ, ಯಾವ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಹುಡುಕಾಡುತ್ತಿದ್ದೀರಾ, ಹಾಗಾದರೆ ಆ ಮಾಹಿತಿ ಇಲ್ಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್​ಲೈನ್​ನಲ್ಲಿ ನೋಡುವುದು ಹೇಗೆ?

ಕರ್ನಾಟಕ ಎಸ್‌ಎಸ್‌ಎಲ್‌ಸಿ (10ನೇ ತರಗತಿ ) ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಅಂದರೆ https://kseab.karnataka.gov.in ಅಥವಾ https://karresults.nic.in/ ಗಳಲ್ಲಿ ಪ್ರಕಟಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

1) ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನೋಡುವುದಕ್ಕೆ karresults.nic.in ನಲ್ಲಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ಕೊಡಿ.

2) ಮುಖಪುಟದಲ್ಲಿರುವ 2025ರ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಎಂಬ ಲಿಂಕ್​ ಮೇಲೆ ಕ್ಲಿಕ್​ ಮಾಡಿ

3) ಆಗ ತೆರೆದುಕೊಳ್ಳುವ ಪುಟವು ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್​ ಪೇಜ್ ಆಗಿರುತ್ತದೆ. ಅಲ್ಲಿ ವಿದ್ಯಾರ್ಥಿಯ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

4) ಆನ್​ಲೈನ್​ ಫಲಿತಾಂಶ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ, ಮುದ್ರಿಸಿ ಇಟ್ಟುಕೊಳ್ಳಿ.

ಎಸ್‌ಎಂಎಸ್‌ ಮೂಲಕ ಕೂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪಡೆಯಬಹುದು. ಇದಕ್ಕಾಗಿ, KAR 10 ಅಂತ ಬರೆದು ಸ್ಪೇಸ್​ ಬಿಟ್ಟು ನೋಂದಣಿ ಸಂಖ್ಯೆ ಟೈಪ್​ ಮಾಡಿ 56263ಗೆ ಸಂದೇಶ ಕಳುಹಿಸಬೇಕು. ಆಗ, ವಿದ್ಯಾರ್ಥಿಗಳು ಯಾವ ನಂಬರ್‌ನಿಂದ ಮೆಸೇಜ್ ಕಳುಹಿಸಿರುತ್ತಾರೋ ಅದೇ ಮೊಬೈಲ್​ ಸಂಖ್ಯೆಗೆ ಫಲಿತಾಂಶದ ಸಂದೇಶ ಬರುತ್ತದೆ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner