ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಪ್ರಗತಿಪರ ಹೋರಾಟಗಾರ, ದಲಿತ ಮುಖಂಡ ಲಕ್ಷ್ಮೀನಾರಾಯಣ ನಾಗವಾರ ನಿಧನರಾಗಿದ್ದಾರೆ. ನಾಳೆ (ಜನವರಿ 1) ನಾಗವಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ

ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ಅನಾರೋಗ್ಯ ಕಾರಣದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ, ಪ್ರಗತಿಪರ ಹೋರಾಟವನ್ನೇ ಉಸಿರಾಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ನಾಗವಾರ ತಮ್ಮ 58ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರಿನ ಕನಕ ನಗರದಲ್ಲಿ ವಾಸವಾಗಿದ್ದ ಅವರು ಕೆಲವು ವರ್ಷಗಳಿಂದಲೂ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಡಿಸೆಂಬರ್ 31 ಮಂಗಳವಾರದಂದು ಅವರು ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ನಾಳೆ ಅಂತ್ಯಸಂಸ್ಕಾರ

ಹೆಬ್ಬಾಳದ ನಾಗವಾರದ ಅಂಬೇಡ್ಕರ್ ಮೈದಾನದಲ್ಲಿ ನಾಳೆ (ಬುಧವಾರ, ಜನವರಿ 1) ಬೆಳಿಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ಅಂತ್ಯಸಂಸ್ಕಾರವನ್ನು ನಾಗವರದಲ್ಲೇ ಮಾಡಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಅವರ ಅಂತ್ಯಸಂಸ್ಕಾರ ನಡೆಯಲಿದೆ.

ದಲಿತ ಸಂಘರ್ಷ ಸಮಿತಿಯ ಸಾಮಾನ್ಯ ಕಾರ್ಯಕರ್ತನಾಗಿ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ಅವರು ತಾಲ್ಲೂಕು ಘಟಕ ಸೇರಿ ರಾಜ್ಯ ಘಟಕದ ಪದಾಧಿಕಾರಿವರೆಗೆ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿದವರಾಗಿದ್ದರು.

ದಲಿತ ಸಮುದಾಯಕ್ಕಾಗಿ ಶ್ರಮಿಸಿದವರು

ವಿದ್ಯಾರ್ಥಿಯಾಗಿದ್ದಾಗಿನಿಂದಲೇ ಲಕ್ಷ್ಮೀನಾರಾಯಣ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ದಲಿತ ಚಳವಳಿ ಸಂಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪ, ಸಿದ್ದಲಿಂಗಯ್ಯ, ದೇವನೂರು ಮಹಾದೇವ ಅವರ ಮಾರ್ಗದರ್ಶನದಲ್ಲಿ ಮುನ್ನಡೆದಿದ್ದರು. ಒಡೆದು ಹೋಗಿದ್ದ ದಲಿತ ಸಂಘರ್ಷ ಸಮಿತಿಯನ್ನು ಒಗ್ಗೂಡಿಸಲು ಪ್ರಯತ್ನಪಟ್ಟಿದ್ದರು. ಈ ನಿಟ್ಟಿನಲ್ಲಿ ಶ್ರಮವಹಿಸಿದ್ದರು. ಸಾಕಷ್ಟು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ದಲಿತ ಸಮುದಾಯವನ್ನು ಬಲಪಡಿಸಲು ರಾಜ್ಯದ ವಿವಿಧೆಡೆ ಅಧ್ಯಯನ ಶಿಬಿರಗಳನ್ನೂ ನಡೆಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

"ನಾಡಿನ‌ ಜನಪ್ರಿಯ ದಲಿತ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದಲಿತ ಸಮುದಾಯವನ್ನೇ ತನ್ನ ಕುಟುಂಬವನ್ನಾಗಿಸಿಕೊಂಡಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಸಂಘಟನೆ ಮತ್ತು ಹೋರಾಟದ ಮೂಲಕ ದನಿ ಇಲ್ಲದ ದಮನಿತ ಸಮುದಾಯಕ್ಕೆ ದನಿಯಾಗಿದ್ದವರು. ರಾಜ್ಯದ ಯಾವ ಮೂಲೆಯಲ್ಲಿಯೂ ದಲಿತರ ಮೇಲೆ ಅನ್ಯಾಯ-ದೌರ್ಜನ್ಯ ನಡೆದರೂ ಅಲ್ಲಿಗೆ ಧಾವಿಸಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು, ಇಡೀ ರಾಜ್ಯ ಸುತ್ತಾಡಿ ದಲಿತ‌ ಸಂಘರ್ಷ ಸಮಿತಿಯನ್ನು ಕಟ್ಟಿ ಬೆಳೆಸಿದವರು‌.

ಹೆಚ್ಚು ಕಡಿಮೆ ಮೂರು ದಶಕಗಳಿಂದ ನನ್ನ ಜೊತೆ ಒಡನಾಟ ಹೊಂದಿದ್ದ ಲಕ್ಷ್ಮಿನಾರಾಯಣ ನಾಗವಾರರ ನಿಧನದಿಂದ ನಾನೂ ಒಬ್ಬ ಆತ್ಮೀಯ ಸಂಗಾತಿಯನ್ನು ಕಳೆದುಕೊಂಡಿದ್ದೇನೆ.ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. kannada.hindustantimes.com/astrology/yearly-horoscope

Whats_app_banner