ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ; ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಒಕ್ಕೊರಲ ಆಗ್ರಹ-karnataka state retired government employees protest against government demanding various demands hsm ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ; ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಒಕ್ಕೊರಲ ಆಗ್ರಹ

ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ; ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಒಕ್ಕೊರಲ ಆಗ್ರಹ

Protest News: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

ಮಂಗಳೂರು: ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರ್ಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ... ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಆಗ್ರಹವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಆಗ್ರಹಿಸಿದ್ದಾರೆ.

ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಜುಲೈ 1, 2022ರಿಂದ ಜುಲೈ 31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿಸಿಆರ್​ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರ್ಕಾರಿ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರಿ ನೌಕರರು ಈಗಾಗಲೇ ನಮ್ಮ ಬೇಡಿಕೆಗಳನ್ನು ತಹಸೀಲ್ದಾರ್​ ಮೂಲಕ ಆರ್ಥಿಕ ಇಲಾಖೆಯವರೆಗೂ ಗಮನ ಸೆಳೆಯುವ ಕೆಲಸ ಮಾಡಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯ ವ್ಯಾಪಿ ಇಂದು ಹಿರಿಯ ನಿವೃತ್ತ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣ ಮಾಡಿದೆ. ಇದು ಮುಂದುವರಿಯದೇ ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.

ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರ್ಕಾರಿ ನೌಕರರ ಬೀದಿಗೆ ಇಳಿದು ಪ್ರತಿಭಟನೆ ಮಾಡುವಂತದ್ದು ವಿಷಾದನೀಯ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು. ನಿವೃತ್ತ ಹಿರಿಯ ಸರ್ಕಾರಿ ನೌಕರರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷಗಳು ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನೆ ಇರಲು ಸಾಧವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.

ಜಿಲ್ಲಾ ಸಂಚಾಲಕ ನಾರಾಯಣ ಪೂಜಾರಿ ಮಾತನಾಡಿ, ಸರ್ಕಾರಕ್ಕೆ ಇದು ಶೋಭೆ ತರುವ ಕೆಲಸವಲ್ಲ. ನವೇನೂ ಹೆಚ್ಚುವರಿ ಬೇಕು ಅನ್ನುತ್ತಿಲ್ಲ. ಹಕ್ಕಿನಲ್ಲಿ ಇರುವ ಸವಲತ್ತನ್ನು ನ್ಯಾಯಯುತವಾಗಿ ನೀಡಿ ಎನ್ನುವುದು ನಮ್ಮ ಮನವಿ. ಸರಕಾರದ ಯೋಜನೆಗಳನ್ನು ಜಾರಿಗೊಳಿಸುವ ಬಹಳಷ್ಟು ಕೆಲಸಗಳಲ್ಲಿ ನಮ್ಮ ಪಾತ್ರವಿದೆ ಆದರೆ ನಮ್ಮನ್ನು ಕಡೆಗಣಿಸುವುದು ಸರಿಯಲ್ಲ. ಸಮಸ್ಯೆಗೆ ಪರಿಹಾರ ನೀಡಲು ತಕ್ಷಣವೇ ಆದೇಶ ಮಾಡಬೇಕು. ಸಂಧ್ಯಾ ಕಾಲದಲ್ಲಿ ನಮಗೆ ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ ಎಂದರು.

ರಾಜ್ಯವ್ಯಾಪಿ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಿವೃತ್ತ ಸರ್ಕಾರಿ ನೌಕರರ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಿವೃತ್ತ ಸರ್ಕಾರಿ ನೌಕರರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನ ಸೌಧ ತನಕ ಪಾದಯಾತ್ರೆ ಹಾಗೂ ಇಲ್ಲೂ ಸರ್ಕಾರ ಸರಿಯಾದ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳುತ್ತಾರೆ.

ಪ್ರತಿಭಟನೆಯ ಬಳಿಕ ಸಂಚಾಲಕರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರ್ಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.

mysore-dasara_Entry_Point