Karnataka Summer 2025: ಅಬ್ಬಬ್ಬಾ ರಾಯಚೂರಿನಲ್ಲಿ ಈಗ 44 ಡಿಗ್ರಿ ಬಿರುಬಿಸಿಲು, ಈ 15 ಜಿಲ್ಲೆಗಳಲ್ಲಿ ಮತ್ತೆ ಏರಿದ ಉಷ್ಣಾಂಶ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Summer 2025: ಅಬ್ಬಬ್ಬಾ ರಾಯಚೂರಿನಲ್ಲಿ ಈಗ 44 ಡಿಗ್ರಿ ಬಿರುಬಿಸಿಲು, ಈ 15 ಜಿಲ್ಲೆಗಳಲ್ಲಿ ಮತ್ತೆ ಏರಿದ ಉಷ್ಣಾಂಶ

Karnataka Summer 2025: ಅಬ್ಬಬ್ಬಾ ರಾಯಚೂರಿನಲ್ಲಿ ಈಗ 44 ಡಿಗ್ರಿ ಬಿರುಬಿಸಿಲು, ಈ 15 ಜಿಲ್ಲೆಗಳಲ್ಲಿ ಮತ್ತೆ ಏರಿದ ಉಷ್ಣಾಂಶ

Karnataka Summer 2025: ಕರ್ನಾಟಕದಲ್ಲಿ ಎರಡು ವಾರದ ಹಿಂದೆ ಉಷ್ಣಾಂಶದ ಪ್ರಮಾಣ ತಗ್ಗಿ ಬಿಸಿಲು ಕಡಿಮೆಯಾಗಿತ್ತು. ಎರಡು ಮೂರು ದಿನದಿಂದ ಮತ್ತೆ ಉಷ್ಣಾಂಶ ಹೆಚ್ಚಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಉಷ್ಣಾಂಶ ರಾಯಚೂರಿನಲ್ಲಿ ದಾಖಲಾಗಿದೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಉಷ್ಣಾಂಶ ರಾಯಚೂರಿನಲ್ಲಿ ದಾಖಲಾಗಿದೆ.

Karnataka Summer 2025: ಕರ್ನಾಟಕದಲ್ಲಿ ಎರಡು ವಾರದ ಬಳಿಕ ಬಿಸಿಲಿನ ಪ್ರಮಾಣ ಮತ್ತೆ ಏರಿಕೆ ಕಂಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿರುವುದು ಕಂಡು ಬಂದಿದೆ. ಏಪ್ರಿಲ್‌14ರ ಬೆಳಗ್ಗೆ 8.30 ರಿಂದ ಏಪ್ರಿಲ್‌ 15ರ ಬೆಳಗ್ಗೆ 8.30 ರವರೆಗೆ ಕರ್ನಾಟಕದ ಜಿಲ್ಲಾವಾರು ಗರಿಷ್ಟ ಹಾಗೂ ಕನಿಷ್ಠ ತಾಪಮಾನ ದಾಖಲಾದ ವಿವರದಂತೆ ರಾಯಚೂರಿನಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗದಲ್ಲಿ ಉಷ್ಣಾಂಶ ಪ್ರಮಾಣವು 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲೂ ಉಷ್ಣಾಂಶ ಪ್ರಮಾಣ ಹೆಚ್ಚಳವಾಗಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಘಟಕವು ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಕಲಬುರಗಿ ಭಾಗದಲ್ಲಂತೂ ಬಿಸಿಲಿನ ಎರಡು ತಿಂಗಳಿನಿಂದಲೂ ಅಧಿಕವಾಗಿದೆ. ಇದಲ್ಲದೇ ರಾಯಚೂರು, ಕೊಪ್ಪಳ. ಬಾಗಲಕೋಟೆ ಸಹಿತ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕೆಲ ದಿನ ಅಲ್ಲಲ್ಲಿ ಮಳೆಯಾಗಿ ಹವಾಮಾನದಲ್ಲಿ ವ್ಯತ್ಯಾಸ ಆಗಿದ್ದರಿಂದ ಉಷ್ಣಾಂಶ ಕಡಿಮೆಯಾಗಿತ್ತು. ಈಗ ನಿಧಾನವಗಿ ಏರಿಕೆ ಕಂಡಿದೆ.

ಎಲ್ಲೆಲ್ಲಿ ಉಷ್ಣಾಂಶ ಹೇಗಿದೆ.

ಕರ್ನಾಟಕದ ಹಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣ ಹೀಗಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 20. 1 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 19.7 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ರಾಮನಗರದಲ್ಲಿ ಗರಿಷ್ಠ ಉಷ್ಣಾಂಶ 37.7 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 17.6 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ತುಮಕೂರಿನಲ್ಲಿ ಗರಿಷ್ಠ ಉಷ್ಣಾಂಶ 39.7 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 18.8 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಚಿಕ್ಕಬಳ್ಳಾಪುರ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 20.4 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಯಾದಗಿರಿ ಗರಿಷ್ಠ ಉಷ್ಣಾಂಶ 41.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 21.9 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಬಳ್ಳಾರಿ ಗರಿಷ್ಠ ಉಷ್ಣಾಂಶ 42.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 20.8 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ವಿಜಯನಗರದಲ್ಲಿ ಗರಿಷ್ಠ ಉಷ್ಣಾಂಶ 41.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 21,5 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌

ಬೆಳಗಾವಿ ಗರಿಷ್ಠ41.3 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್‌

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌

ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 22.8 ಡಿಗ್ರಿ ಸೆಲ್ಸಿಯಸ್‌

ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 22.7 ಡಿಗ್ರಿ ಸೆಲ್ಸಿಯಸ್‌

ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 42.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್‌

ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಸಿಯಸ್‌

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 43.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ23.1 ಡಿಗ್ರಿ ಸೆಲ್ಸಿಯಸ್‌

ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 22.2 ಡಿಗ್ರಿ ಸೆಲ್ಸಿಯಸ್‌

ಗದಗದಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 23.9 ಡಿಗ್ರಿ ಸೆಲ್ಸಿಯಸ್‌

ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 42.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 22.1 ಡಿಗ್ರಿ ಸೆಲ್ಸಿಯಸ್‌

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 40.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಸಿಯಸ್‌

ಮಂಗಳೂರಲ್ಲಿ ಗರಿಷ್ಠ ಉಷ್ಣಾಂಶ 37.8 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21.5 ಡಿಗ್ರಿ ಸೆಲ್ಸಿಯಸ್‌

ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 37.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19.9 ಡಿಗ್ರಿ ಸೆಲ್ಸಿಯಸ್‌

ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 15.6 ಡಿಗ್ರಿ ಸೆಲ್ಸಿಯಸ್‌

ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 40.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19.3 ಡಿಗ್ರಿ ಸೆಲ್ಸಿಯಸ್‌

ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 39.6 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್‌

ಹಾಸನದಲ್ಲಿ ಗರಿಷ್ಠ ಉಷ್ಣಾಂಶ 38.1 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್‌

ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 38.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್‌

ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌

ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19.7 ಡಿಗ್ರಿ ಸೆಲ್ಸಿಯಸ್‌

ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18.7 ಡಿಗ್ರಿ ಸೆಲ್ಸಿಯಸ್‌

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner