HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು 6ನೇ ಬಾರಿಗೆ ವಿಸ್ತರಣೆ, ಡಿಸೆಂಬರ್‌ 31 ನೋಂದಣಿಗೆ ಕಡೆ ದಿನ
ಕನ್ನಡ ಸುದ್ದಿ  /  ಕರ್ನಾಟಕ  /  Hsrp Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು 6ನೇ ಬಾರಿಗೆ ವಿಸ್ತರಣೆ, ಡಿಸೆಂಬರ್‌ 31 ನೋಂದಣಿಗೆ ಕಡೆ ದಿನ

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು 6ನೇ ಬಾರಿಗೆ ವಿಸ್ತರಣೆ, ಡಿಸೆಂಬರ್‌ 31 ನೋಂದಣಿಗೆ ಕಡೆ ದಿನ

HSRP Number Plate Deadline: ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಕರ್ನಾಟಕ ಸಾರಿಗೆ ಇಲಾಖೆಯ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆಯ ಅಂತಿಮ ಗಡುವು ಒಂದು ತಿಂಗಳು ಮುಂದೆ ಹೋಗಿದೆ. ಅದರ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

HSRP Number Plate Deadline: ಕರ್ನಾಟಕದಲ್ಲಿ ವಾಹನಗಳ ಸುರಕ್ಷತೆ ಹಾಗೂ ಏಕರೂಪದ ಫಲಕದ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯದ ಸೂಚನೆ ಮೇರೆಗೆ ಜಾರಿಗೆ ತಂದಿರುವ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ( HSRP) ಅಳವಡಿಸಿಕೊಳ್ಳಬೇಕಾದ ಅಂತಿಮ ಗಡುವು ಮುಂದೆ ಹೋಗುತ್ತಲೇ ಇದೆ. ಈಗಾಗಲೇ ಐದು ಬಾರಿ ಗಡುವು ವಿಸ್ತರಣೆ ಮಾಡಿರುವ ಕರ್ನಾಟಕ ಸಾರಿಗೆ ಇಲಾಖೆಯು ಮತ್ತೊಮ್ಮೆ ಗಡುವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹೊಸ ಆದೇಶದ ಪ್ರಕಾರ 2024 ರ ಡಿಸೆಂಬರ್‌ 31ರ ಒಳಗೆ ಎಚ್‌ಎಸ್ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಅವಕಾಶವಿದೆ. ಹೊಸ ವರ್ಷದಲ್ಲಿ ಗಡುವು ವಿಸ್ತರಣೆಯಾಗಲಿದೆಯಾ ಅಥವಾ ಅಂತ್ಯಗೊಳಿಸಲಾಗುತ್ತದೆಯೇ ಎನ್ನುವುದಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಾಗುತ್ತದೆ.

ಎಚ್‌ಎಸ್ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳುವ ಆದೇಶದ ಕುರಿತು ಕರ್ನಾಟಕದ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿವೆ. ಅವುಗಳನ್ನು ಒಟ್ಟುಗೂಡಿಸಿ ವಿಚಾರಣೆಯೂ ನಡೆದಿದೆ. ಇದರ ನಡುವೆ ಕೋರ್ಟ್‌ ಸೂಚನೆ ಮೇರೆಗೆ ಕರ್ನಾಟಕ ಸಾರಿಗೆ ಇಲಾಖೆಯೂ ಈಗಾಗಲೇ ಬಾರಿ ನೋಂದಣಿ ಅಂತಿಮ ದಿನಾಂಕ ವಿಸ್ತರಿಸಿದೆ. ಕೋರ್ಟ್‌ ಡಿಸೆಂಬರ್‌ 4ವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಕಳೆದ ತಿಂಗಳ ನಿರ್ದೇಶನ ನೀಡಿದೆ.

ವಿಸ್ತರಣೆ ಎಲ್ಲಿವರೆಗೆ

2019 ರ ಏಪ್ರಿಲ್‌ 01ಹಿಂದಿನ ಎಲ್ಲಾ ವಾಹನಗಳು ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಬದಲಾಗಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ ಆದೇಶ ಹೊರಡಿಸಿದೆ. ಎರಡು ವರ್ಷದ ಅವಧಿಯಲ್ಲಿ ನೋಂದಣಿಯೂ ಆಗಿದೆ.

ಇನ್ನೂ ಕೆಲವರು ನೋಂದಣಿ ಮಾಡಿಸಿಲ್ಲ. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಐದು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್​ಪಿ​ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ (ಡಿಸೆಂಬರ್ 31) ದಿನದ ವರೆಗೆ ಗಡುವು ನೀಡಿದೆ.

ಅಳವಡಿಕೆ ಏಕೆ

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂಬುದು ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ನೀಡಿರುವ ಕಾರಣ.

ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, 65 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ. ಇನ್ನೂ ಮೂರು ಪಟ್ಟು ನೋಂದಣಿ ಬಾಕಿ ಇದೆ. ಹೊಸ ಪ್ಲೇಟ್‌ ಅಳವಡಿಸಿಕೊಳ್ಳದೇ ಇದ್ದರೆ ದಂಡ ವಿಧಿಸುವಾಗಿ ಕರ್ನಾಟಕ ಸಾರಿಗೆ ಇಲಾಖೆ ಹೇಳಿತ್ತಾದರೂ ಅದು ಜಾರಿಗೊಂಡಿಲ್ಲ.

ನಂಬರ್ ಪ್ಲೇಟ್ ಪಡೆಯುವುದು ಹೇಗೆ?

* https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. ಇಲ್ಲಿ Book HSRP ಕ್ಲಿಕ್ ಮಾಡಿ.

* ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.

* ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.

* ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ.

* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ.

* ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ.

* ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ

Whats_app_banner