ಕರ್ನಾಟಕ ಯುಜಿ ಸಿಇಟಿ ಫಲಿತಾಂಶ ಪ್ರಕಟ; ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಪ್ರಥಮ
ಕರ್ನಾಟಕ ಯುಜಿ ಸಿಇಟಿ ಫಲಿತಾಂಶ ಇಂದು (ಮೇ 24) ಪ್ರಕಟವಾಗಿದೆ. ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಸಿಬಿಎಸ್‌ಇ ಶಾಲೆಯ ಭವೇಶ್ ಜಯಂತಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಪ್ರಿಲ್ 15,16 ಹಾಗೂ 17 ರಂದು ನಡೆಸಿರುವ ಕರ್ನಾಟಕ ಯುಜಿ ಸಿಟಿಇ ಪರೀಕ್ಷೆಯ ಫಲಿತಾಂಶ ಇಂದು (ಮೇ 24) ಪ್ರಕಟವಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಈ ಪರೀಕ್ಷೆಯನ್ನು ನಡೆಸುತ್ತದೆ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಫಲಿತಾಂಶ ಪ್ರಕಟಿಸಿದ್ದಾರೆ.
ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿಯ ಚೈತನ್ಯ ಶಾಲೆಯ ಭುವೇಶ್ ಜಯಂತಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಶೇ 98.67 ಅಂಕ ಗಳಿಸಿದ್ದಾರೆ.
ಈ ಬಾರಿ ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಎಂ.ಸಿ.ಸುಧಾಕರ್ ಯುಜಿಸಿಇಟಿ-2025 ಫಲಿತಾಂಶ ಪ್ರಕಟಿಸಿದ್ದು, ಸಿಇಟಿಯಲ್ಲಿ ಭವೇಶ್ ಜಯಂತಿಗೆ ಮೊದಲ ಸ್ಥಾನ(99.06%) ಪಡೆದುಕೊಂಡಿದ್ದಾರೆ.
ಏಪ್ರಿಲ್ 16 ಮತ್ತು 17 ರಂದು ಪರೀಕ್ಷೆ ನಡೆದಿತ್ತು. cetonline.karnataka.gov.in ಅಥವಾ kea.kar.nic.in ನಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶವನ್ನು ನೋಡಬಹುದಾಗಿದೆ.
ಪರಿಸ್ಕತ ಸರಿ ಉತ್ತರಗಳನ್ನು ಆಧರಿಸಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗಿದೆ. ಪರಿಸ್ಕೃತ ಸರಿ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಒಟ್ಟು ಸಿಇಟಿ ಬರೆದ 3,30,787 ಅಭ್ಯರ್ಥಿಗಳಲ್ಲಿ, 3,11,690 ಮಂದಿ ಭೌತಶಾಸ್ತ್ರ, 3,11690 ರಸಾಯನ ಶಾಸ್ತ್ರ, 3,04,170 ಗಣಿತ ಹಾಗೂ 2,39,459 ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯದ ಪರೀಕ್ಷೆ ಬರೆದಿದ್ದಾರೆ.