ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ, ಜಮೀರ್‌ ಅಹ್ಮದ್‌ ವಿರುದ್ಧ ಕ್ರಮಕ್ಕೆ ಪರೋಕ್ಷವಾಗಿ ಸೂಚಿಸಿದ ಜಿ ಪರಮೇಶ್ವರ್
ಕನ್ನಡ ಸುದ್ದಿ  /  ಕರ್ನಾಟಕ  /  ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ, ಜಮೀರ್‌ ಅಹ್ಮದ್‌ ವಿರುದ್ಧ ಕ್ರಮಕ್ಕೆ ಪರೋಕ್ಷವಾಗಿ ಸೂಚಿಸಿದ ಜಿ ಪರಮೇಶ್ವರ್

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ, ಜಮೀರ್‌ ಅಹ್ಮದ್‌ ವಿರುದ್ಧ ಕ್ರಮಕ್ಕೆ ಪರೋಕ್ಷವಾಗಿ ಸೂಚಿಸಿದ ಜಿ ಪರಮೇಶ್ವರ್

ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಜಮೀರ್‌ ಅಹ್ಮದ್‌ ವಿರುದ್ಧ ಪಕ್ಷದ ಶಿಸ್ತು ಪಾಲನಾ ಸಮಿತಿ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಮೈಸೂರಿನಲ್ಲಿ ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.

ಹೆಚ್‌ಡಿಕೆ ವಿರುದ್ಧದ ಹೇಳಿಕೆಗೆ ಜಮೀರ್‌ ಅಹ್ಮದ್‌ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಪರೋಕ್ಷವಾಗಿ ಸೂಚಿಸಿದ ಗೃಹ ಸಚಿವ ಜಿ. ಪರಮೇಶ್ವರ್
ಹೆಚ್‌ಡಿಕೆ ವಿರುದ್ಧದ ಹೇಳಿಕೆಗೆ ಜಮೀರ್‌ ಅಹ್ಮದ್‌ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಪರೋಕ್ಷವಾಗಿ ಸೂಚಿಸಿದ ಗೃಹ ಸಚಿವ ಜಿ. ಪರಮೇಶ್ವರ್

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ಸಮಯದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ಜಮೀರ್‌ ಅಹ್ಮದ್‌ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ ಪರಮೇಶ್ವರ್

ಮೈಸೂರಿನಲ್ಲಿ ಮಾತನಾಡಿದ ಜಿ ಪರಮೇಶ್ವರ್‌, ಜಮೀರ್‌ ಅಹ್ಮದ್‌ ಅವರ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಬೇಕಾದರೆ ಪಕ್ಷದ ಶಿಸ್ತು ಪಾಲನಾ ಸಮಿತಿಗೆ ವರದಿ ಕೊಟ್ಟರೆ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು. ನಾನು ಈ ಹಿಂದೆ ಎಐಸಿಸಿ ಶಿಸ್ತು ಪಾಲನಾ ಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನು ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೆವು. ಅಗತ್ಯ ಬಿದ್ದರೆ ಸಸ್ಪೆಂಡ್ ಕೂಡ ಮಾಡುತ್ತಿದ್ದೆವು‌. ಈಗಲೂ ಕೆ‌ಪಿಸಿಸಿ ಅಧ್ಯಕ್ಷರು ಶಿಸ್ತು ಪಾಲನಾ ಸಮಿತಿ ಗಮನಕ್ಕೆ ಈ ವಿಚಾರ ತರಬಹುದು. ಜಮೀರ್ ಅಹಮದ್ ಹೇಳಿಕೆಯಿಂದ ಚುನಾವಣೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪಕ್ಷದ ನಾಯಕರೇ ಹೇಳಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

40% ಕಮಿಷನ್ ಆರೋಪಕ್ಕೆ ದಾಖಲೆ ಇಲ್ಲವೆಂದು ಲೋಕಾಯುಕ್ತ ತನಿಖಾ ವರದಿಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿ ಪರಮೇಶ್ವರ್‌, ನಾವು ಕೆಂಪಣ್ಣ ಬರೆದ ಪತ್ರದ ಆಧಾರದ ಮೇಲೆ ಹೋರಾಟ ಮಾಡಿದ್ದೆವು, ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎಂದಿದ್ದಾರೆ ಎಂಬುದನ್ನು ನಾವು ನೋಡಬೇಕಿದೆ. ಅಗತ್ಯವಿದ್ದರೆ ಮತ್ತೆ ಅದನ್ನು ಮರು ತನಿಖೆಗೆ ಒಳಪಡಿಸಲು ನಾವು ಸಿದ್ದ. ಮೊದಲು ನಾವು ಲೋಕಾಯುಕ್ತ ವರದಿ ಓದುತ್ತೇನೆ. ನಂತರ ಅದರ ಬಗ್ಗೆ ತೀರ್ಮಾನ‌ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.‌

ಬಿಪಿಎಲ್‌‌ ಕಾರ್ಡ್‌ ಪರಿಷ್ಕರಣೆ ಮಾಡೇ ತೀರುತ್ತೇವೆ

ಬಿಪಿಎಲ್ ಕಾರ್ಡ್‌ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡ ಜಿ ಪರಮೇಶ್ವರ್‌. ನಮ್ಮ ಗ್ಯಾರಂಟಿಗಳೇ ಬೇರೆ ವಿಚಾರ.ಇದಕ್ಕೂ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಸಂಬಂಧ ಇಲ್ಲ. ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರ್ಡ್‌ ಹೊಂದಿರುವವರು, ತೆರಿಗೆ ಕಟ್ಟುತ್ತಿರುವವವರು, 3 ಹೆಕ್ಟೇರ್ ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಬಳಸುತ್ತಿದ್ದಾರೆ. ಅಂತಹವರು ತಾವೇ ಕಾರ್ಡ್ ವಾಪಸ್‌ ಮಾಡಬೇಕಾಗಿತ್ತು. ಈಗ ನಾವು ಅದನ್ನು ಪರಿಷ್ಕರಣೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ಕೆಲಸವನ್ನು ಮೊದಲೇ ಮಾಡಬೇಕಾಗಿತ್ತು. ಈಗ ತಡವಾದರೂ ಪರವಾಗಿಲ್ಲ, ಮಾಡುತ್ತೇವೆ ಎಂದರು.

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ವಿಚಾರ‌ದ ಬಗ್ಗೆ ಪ್ರತಿಕ್ರಿಯಿಸಿದ ಜಿ ಪರಮೇಶ್ವರ್‌, ಆನೇಕಲ್ ಭಾಗದಲ್ಲಿ ಪೊಲೀಸರು ಹೆಚ್ಚು ರೈಡ್ ಮಾಡುತ್ತಿದ್ದಾರೆ.ಬೇರೆ ರಾಜ್ಯದಿಂದ ರಾಜ್ಯಕ್ಕೆ ಡ್ರಗ್ಸ್ ಬರುತ್ತಿದ್ದುದನ್ನು ಪೊಲೀಸರು ಹಿಡಿದಿದ್ದಾರೆ. ಮೆಡಿಕಲ್ ಶಾಪ್‌ಗಳ ಮೇಲೆ ಪೊಲೀಸರು ಸರ್ಚ್ ಮಾಡುತ್ತಿದ್ದಾರೆ. ಡ್ರಗ್ಸ್ ಮೇಲೆ ವಾರ್ ಡಿಕ್ಲೇರ್ ಮಾಡಿದ್ದೇವೆ‌. ಬಹಳಷ್ಟು ಜನರ ಮೇಲೆ ಕೇಸ್ ಹಾಕಿದ್ದೇವೆ. ಹೊರ ದೇಶದಿಂದ ಬರುವವರ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಡ್ರಗ್ಸ್‌ ಜಾಲದ ವಿರುದ್ಧ ಕಠಿಣ ಶಿಸ್ತುಕ್ರಮ

ಹಲವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ. ಹೊರ ದೇಶದಿಂದ ಬಂದು ಡ್ರಗ್ಸ್ ಮಾರಾಟ ಮಾಡುವವರ ಮಾಹಿತಿಯನ್ನು ಹೈ ಕಮಿಷನ್ ಹಾಗೂ ರಾಯಭಾರಿಗಳಿಗೆ ನೀಡಲಾಗಿದೆ. ಡ್ರಗ್ಸ್ ಮೇಲೆ ರಿಲ್ಯಾಕ್ಸ್ ಮಾಡುವ ಪ್ರಶ್ನೆಯೇ ಇಲ್ಲ. ಇಡೀ ದೇಶದಲ್ಲಿ ಡ್ರಗ್ಸ್ ಮಾರಾಟ ಇದೆ. ಮಹಾರಾಷ್ಟ್ರದಲ್ಲಿ ಬಂದರುಗಳ ಮೂಲಕ ಡ್ರಗ್ಸ್‌ ಬರುತ್ತಿದ್ದು ಪ್ರತಿನಿತ್ಯ ರೈಡ್ ನಡೆಯುತ್ತಿದೆ. ಯಾವುದೋ ರೂಪದಲ್ಲಿ ಡ್ರಗ್ಸ್‌ ಒಳಬರುತ್ತಿದೆ. ಏರ್‌ಪೋರ್ಟ್‌ನಲ್ಲಿ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Whats_app_banner