ಬೆಂಗಳೂರು, ಬೆಳಗಾವಿ, ಮೈಸೂರು ಸೇರಿ 23 ಜಿಲ್ಲೆಗಳಲ್ಲಿ ವಿವಿಧೆಡೆ ಇಂದು ಕೂಡ ಮಳೆ, ಹೀಗಿದೆ ಕರ್ನಾಟಕ ಹವಾಮಾನ
Karnataka Weather: ಕರಾವಳಿ ಕರ್ನಾಟಕ, ಬೆಂಗಳೂರು, ಬೆಳಗಾವಿ, ಮೈಸೂರು ಸೇರಿ 23 ಜಿಲ್ಲೆಗಳ ವಿವಿಧೆಡೆ ಇಂದು ಮಳೆಯಾಗಲಿದೆ. ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಉಳಿದೆಡೆ ಒಣಹವೆ ಇರಲಿದೆ. ಕರ್ನಾಟಕ ಹವಾಮಾನ ವಿವರ ಹೀಗಿದೆ

Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಪ್ರದೇಶದ ವಿಜಯನಗರ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳು, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು ಸೇರಿ 23 ಜಿಲ್ಲೆಗಳ ವಿವಿಧೆಡೆ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಗಾಳಿ, ಗುಡುಗು ಮತ್ತು ಮಿಂಚು ಕೂಡ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಹವಾಮಾನ ಇಂದು; ಮಳೆಯ ವಾತಾವರಣವಿದ್ದರೂ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು (ಏಪ್ರಿಲ್ 11) ಮಳೆ ಹಾಗೂ ಮೋಡ ಕವಿದ ವಾತಾವರಣ ಇದೆ. ಆದಾಗ್ಯೂ, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಹೇಳಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಗಾಳಿ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಬಹುದು ಎಂದು ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ
ಬೆಂಗಳೂರು ನಗರ - ತಾಪಮಾನ 23.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 82
ಮಂಗಳೂರು - ತಾಪಮಾನ 26 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 87
ಚಿತ್ರದುರ್ಗ - ತಾಪಮಾನ 31.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 53
ಗದಗ - ತಾಪಮಾನ 22.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 71
ಹೊನ್ನಾವರ - ತಾಪಮಾನ 29.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 77
ಕಲಬುರಗಿ - ತಾಪಮಾನ 32 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 71
ಬೆಳಗಾವಿ - ತಾಪಮಾನ 26 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 79
ಕಾರವಾರ - ತಾಪಮಾನ 31.8 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 71
ಕರ್ನಾಟಕ ಹವಾಮಾನ ಇಂದು; 23 ಜಿಲ್ಲೆಗಳಲ್ಲಿ ಮಳೆ, ಒಣಹವೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಿವಿಧೆಡೆ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡು ಪ್ರದೇಶದ ವಿಜಯನಗರ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳು, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು ಸೇರಿ 23 ಜಿಲ್ಲೆಗಳಲ್ಲಿ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಸುಡು ಬಿಸಿಲು, ಒಣಹವೆ ಅನುಭವಕ್ಕೆ ಬರಲಿದೆ.
ಕರಾವಳಿ ಕರ್ನಾಟಕ: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಕೆಲವು ಕಡೆ ಗುಡುಗು ಮಿಂಚು ಹಾಗೂ ಬೀಸುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಮಳೆಯಾಗಬಹುದು.
ಕರ್ನಾಟಕದ ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
