ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ

ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ

Karnataka Weather: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 14) ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರನಾಡಿನ ಕೆಲವು ಜಿಲ್ಲೆಗಳಿಗೂ ವರುಣಾಗಮನವಾಗಲಿದೆ. ಇನ್ನೂ ಮೂರ್ನ್ಕಾಲು ದಿನ ರಾಜ್ಯದಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆಯ ವರದಿ.

ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ
ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ

Karnataka Weather: ಕಳೆದ ಮೂರ್ನ್ಕಾಲು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಕಾದು ಬೆಂಡಾದ ಭೂಮಿ ಕೊಂಚ ತಂಪಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟ ಜನರಿಗೆ ಮಳೆ ಖುಷಿ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಮೂರ್ನ್ಕಾಲು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕೆಲವಡೆ ಈಗಾಗಲೇ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ನಿರಂತರವಾಗಿ ಕೆಲವು ದಿನಗಳ ಕಾಲ ಮಳೆ ಬಂದರೆ ನೀರಿನ ಕೊರತೆ ನೀಗಬಹುದು ಎಂಬ ಆಶಾಕಿರಣ ಉಂಟಾಗಿದೆ. ಆದರೆ ಮಳೆ ಜೊತೆ ಗುಡುಗು ಹಾಗೂ ಸಿಡಿಲು ಕೂಡ ಜಾಸ್ತಿ ಇರಲಿದ್ದು ರಾಜ್ಯದ ಜನತೆ ಎಚ್ಚರ ವಹಿಸಬೇಕಾಗಿದೆ. ಇಂದು (ಏಪ್ರಿಲ್ 14) ಮಳೆಯೊಂದಿಗೆ ಪ್ರಬಲ ಗಾಳಿಯೂ ಬೀಸಲಿದೆ. ನೀವಿರುವ ಜಿಲ್ಲೆಯಲ್ಲೂ ಇವತ್ತು ಮಳೆ ಬರುತ್ತಾ ನೋಡಿ.

ಕರಾವಳಿಯಲ್ಲಿಂದೂ ಜೋರು ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಗಾಳಿಯು ಪ್ರಬಲವಾಗಿ ಬೀಸಲಿದೆ. ಕರಾವಳಿ ಭಾಗದಲ್ಲಿ ಈ ವರ್ಷ ಬಿಸಿಲಿನ ತಾಪ ಎಂದಿಗಿಂತ ಜೋರಾಗಿದ್ದು, ಏಪ್ರಿಲ್‌ನಲ್ಲಿ ಮಳೆ ಬಂದಿರುವುದು ಜನರಿಗೆ ಖುಷಿ ನೀಡಿದೆ. ಆದರೆ ಕರಾವಳಿ ಗುಡುಗು ಹಾಗೂ ಮಿಂಚಿನ ಪ್ರಭಾವ ಹೆಚ್ಚಿರಲಿದ್ದು ಆದಷ್ಟು ಎಚ್ಚರಿಕೆಯಿಂದ ಇರಬೇಕು. 

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ ಬರುವ ಮುನ್ಸೂಚನೆ

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆ ಬರುವ ಮುನ್ಸೂಚನೆ ಇದೆ. ಆದರೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬರಲಿದೆ. ಇದನ್ನು ಹೊರತು ಪಡಿಸಿ ಬಾಗಲಕೋಟೆ, ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನಾದ್ಯಂತ ಇಂದು ಸುರಿಯಲಿದೆ ಮಳೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಜೊತೆ ಗುಡುಗು, ಮಿಂಚು ಕೂಡ ಇರಲಿದೆ. ಜೊತೆಗೆ ಗಾಳಿಯ ಪ್ರಭಾವವು ಹೆಚ್ಚರಲಿದೆ.

ಬೆಂಗಳೂರಲ್ಲೂ ಇವತ್ತು ಮಳೆ ಬರುತ್ತೆ

ಕಳೆದ 2 ದಿನಗಳಿಂದ ಬೆಂಗಳೂರಿನ ವಾತಾವರಣ ಕೊಂಚ ತಂಪಾಗಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆ ಬೀಳುವ ಮುನ್ಸೂಚನೆಯನ್ನು ನೀಡಿದ ಹವಾಮಾನ ಇಲಾಖೆಯ ವರದಿ. ಇಂದು ಮನೆಯಿಂದ ಹೊರ ಹೋಗುವ ಮುನ್ನ ಛತ್ರಿ ಹಿಡಿದು ಹೋಗಲು ಮರಿಬೇಡಿ.

 

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner