ತುಮಕೂರು, ಹಾಸನ, ಮಂಗಳೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರು ಸೇರಿ ಉಳಿದೆಡೆ ಒಣಹವೆ - ಹೀಗಿರಲಿದೆ ಇಂದಿನ ಕರ್ನಾಟಕ ಹವಾಮಾನ
ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಪ್ರದೇಶದ ತುಮಕೂರು, ಹಾಸನ ಸೇರಿ 5 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 24) ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಕಂಡುಬರಬಹುದು. ಕರ್ನಾಟಕದ ಹವಾಮಾನ ಮುನ್ಸೂಚನೆ ವಿವರ ಹೀಗಿದೆ.

ಕರ್ನಾಟಕ ಹವಾಮಾನ: ಕರ್ನಾಟಕದಲ್ಲಿ ಇಂದು ಬಹುತೇಕ ಮಳೆಯ ವಾತಾವರಣ ಕಡಿಮೆಯಾಗಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದ ತುಮಕೂರು, ಹಾಸನ ಸೇರಿ ಒಟ್ಟು 5 ಜಿಲ್ಲೆಗಳಲ್ಲಿ ಮಾತ್ರವೇ ಹಗುರ ಅಥವಾ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವು ಕಡೆ ತಾಪಮಾನ ಹೆಚ್ಚಳವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು ಹವಾಮಾನ ಇಂದು; ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ಗೆ ಏರಿಕೆ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿಇಂದು (ಏಪ್ರಿಲ್ 24) ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್‌ಗೆ ಏರಿಕೆಯಾಗಬಹುದು. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಶಿಯಸ್ ಇರಬಹುದು. ಬೆಂಗಳೂರು ನಗರದಲ್ಲಿ ನಿನ್ನೆ (ಏಪ್ರಿಲ್ 23) ಗರಿಷ್ಠ ತಾಪಮಾನ 34.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾ 23.9 ಡಿಗ್ರಿ ಸೆಲ್ಶಿಯಸ್ ದಾಖಾಗಿತ್ತು.ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.
ಕರ್ನಾಟಕದ ಪ್ರಮುಖ ನಗರಗಳ ತಾಪಮಾನ, ತೇವಾಂಶ
ಬೆಂಗಳೂರು ನಗರ - ತಾಪಮಾನ 25.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 80
ಮಂಗಳೂರು - ತಾಪಮಾನ 27.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 83
ಚಿತ್ರದುರ್ಗ - ತಾಪಮಾನ 24.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 85
ಗದಗ - ತಾಪಮಾನ 24.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 90
ಹೊನ್ನಾವರ - ತಾಪಮಾನ 32.4 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 64
ಕಲಬುರಗಿ - ತಾಪಮಾನ 36.3 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 14
ಬೆಳಗಾವಿ - ತಾಪಮಾನ 26 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 84
ಕಾರವಾರ - ತಾಪಮಾನ 34.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 65
ಕರ್ನಾಟಕ ಹವಾಮಾನ ಇಂದು; ತುಮಕೂರು, ಹಾಸನ, ಮಂಗಳೂರು ಸೇರಿ 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಳಿದ ಎರಡು ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳ ಪೈಕಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶಗಳ ಪೈಕಿ ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಹಗುರವಾದ ಅಥವಾ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಉಳಿದಂತೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್ ಪುವಿಯರಸನ್ ತಿಳಿಸಿದ್ದಾರೆ.