ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ, ಗರಿಷ್ಠ ತಾಪಮಾನ ಹೆಚ್ಚಳ, ಸುಡುಬಿಸಿಲು
ಕರ್ನಾಟಕ ಹವಾಮಾನ: ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಉಳಿದೆಡೆ ಒಣಹವೆ ಇರಲಿದ್ದು, ತಾಪಮಾನ ಹೆಚ್ಚಳ ನಿರೀಕ್ಷಿತ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ: ಕರ್ನಾಟಕದಲ್ಲಿ ಇಂದು (ಮೇ 5) ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿನಲ್ಲೂ ಈ ದಿನ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಇರಲಿದ್ದು, ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಹವಾಮಾನ ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು; ಸಾಧಾರಣ ಮಳೆ, ಮೋಡ ಕವಿದ ವಾತಾವರಣ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು, ಕೆಲವು ಕಡೆ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಆದಾಗ್ಯೂ ಗರಿಷ್ಥ ತಾಪಮಾನ ಇಳಿಕೆಯಾಗುವುದಿಲ್ಲ. ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ನಿನ್ನೆ (ಮೇ 4) ಬೆಂಗಳೂರು ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21.7 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್ ಮಣಿಕ್ಕಮ್ ತಿಳಿಸಿದ್ದಾರೆ.
ಕರ್ನಾಟಕದ ಪ್ರಮುಖ ನಗರಗಳ ಗರಿಷ್ಠ ತಾಪಮಾನ, ತೇವಾಂಶ ಇಂದು (ಬೆಳಿಗ್ಗೆ 7.30ಕ್ಕೆ)
ಬೆಂಗಳೂರು ನಗರ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 80
ಮಂಗಳೂರು - ತಾಪಮಾನ 27 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 79
ಚಿತ್ರದುರ್ಗ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 83
ಗದಗ - ತಾಪಮಾನ 22.8 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 83
ಹೊನ್ನಾವರ - ತಾಪಮಾನ 29.6 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 70
ಕಲಬುರಗಿ - ತಾಪಮಾನ 39 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 33
ಬೆಳಗಾವಿ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 78
ಕಾರವಾರ - ತಾಪಮಾನ 34 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 61
ಕರ್ನಾಟಕ ಹವಾಮಾನ ಇಂದು; 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ
ಕರಾವಳಿ ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕದ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡದಲ್ಲಿ ಇಂದು ಅಲ್ಲಲ್ಲಿ ಹಗುರ ಮಳೆಯಾಗಬಹುದು ಅಥವಾ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಇನ್ನುಳಿದಂತೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗಬಹುದು. ಕೆಲವು ಕಡೆ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೂ ಬೀಸಬಹುದು. ಉಳಿದಂತೆ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಸುಡುಬಿಸಿಲು ಕಾಡಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಅಥವಾ ಗುಡುಗು ಮತ್ತು ಗಂಟೆಗೆ 30ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಉಳಿದೆಡೆ ಅಂದರೆ ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.