ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನ; ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ, ಕರ್ನಾಟಕ ಹವಾಮಾನ ವಿವರ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನ; ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ, ಕರ್ನಾಟಕ ಹವಾಮಾನ ವಿವರ

ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನ; ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ, ಕರ್ನಾಟಕ ಹವಾಮಾನ ವಿವರ

ಕರ್ನಾಟಕದಲ್ಲಿ ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನವಾಗುವ ಸಾಧ್ಯತೆ ಇದೆ. ದೀಪಾವಳಿ ಮುಗಿದಂತೆ ಮಳೆಯ ತೀವ್ರತೆಯೂ ಕಡಿಮೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅನುಭವಕ್ಕೆ ಬರತೊಡಗಿದೆ. ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ? ಹೇಗಿದೆ ಕರ್ನಾಟಕ ಹವಾಮಾನ? ಇಲ್ಲಿದೆ ಆ ಎಲ್ಲ ವಿವರ.

ಕರ್ನಾಟಕ ಹವಾಮಾನ: ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ ಎಂಬ ಪ್ರಶ್ನೆಗೂ ಉತ್ತರ ಇದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ: ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ ಎಂಬ ಪ್ರಶ್ನೆಗೂ ಉತ್ತರ ಇದೆ. (ಸಾಂಕೇತಿಕ ಚಿತ್ರ) (Pixabay)

ಬೆಂಗಳೂರು: ದೀಪಾವಳಿ ಹಬ್ಬ ಮುಗಿಯುತ್ತಿರುವಂತೆ ಮಳೆಯ ತೀವ್ರತೆಯೂ ಕಡಿಮೆಯಾಗತೊಡಗಿದೆ. ಕರ್ನಾಟಕದಲ್ಲಿ ಇಂದು (ನವೆಂಬರ್ 3) ಮೈಸೂರು ಸೇರಿ 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಿಂಚನವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ (ನವೆಂಬರ್ 2) ಮಧ್ಯಾಹ್ನ 1 ಗಂಟೆಗೆ ಪ್ರಕಟಿಸಿದ ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ. ಹವಾಮಾನದ ಲಕ್ಷಣದ ಪ್ರಕಾರ, ಮನ್ನಾರ್ ಗಲ್ಫ್ ಮತ್ತು ನೆರೆಹೊರೆಯ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಶ್ರೀಲಂಕಾದ ಪಕ್ಕದಲ್ಲಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ವರೆಗೆ ವಿಸ್ತರಿಸಿದೆ. ಅದೇ ರೀತಿ, ಮೇಲಿನ ಚಂಡಮಾರುತದ ಪರಿಚಲನೆಯಿಂದ ಶ್ರೀಲಂಕಾದ ಪಕ್ಕದಲ್ಲಿರುವ ದಕ್ಷಿಣ ತಮಿಳುನಾಡು ಕರಾವಳಿಯಿಂದ ಕರಾವಳಿ ಕರ್ನಾಟಕದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿ ಒಂದು ಟ್ರಫ್‌ ನಿರ್ಮಾಣವಾಗುತ್ತಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್ ಪುವಿಯರಸನ್ ತಿಳಿಸಿದ್ದಾರೆ. ಇನ್ನುಳಿದಂತೆ ಬೆಂಗಳೂರಲ್ಲಿ ಇಂದು ಮಳೆ ಬರುತ್ತಾ ಎಂಬ ಪ್ರಶ್ನೆಗೆ ಉತ್ತರವಾಗಿ ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಕರ್ನಾಟಕ ಹವಾಮಾನ ಮುನ್ಸೂಚನೆಯ ವಿವರ ಇಲ್ಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ಇಂದು (ನವೆಂಬರ್ 3)

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನಿನ್ನೆ (ನವೆಂಬರ್ 2) ಪ್ರಕಟಿಸಿರುವ ಹವಾಮಾನ ಮುನ್ಸೂಚನೆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಲಕ್ಷಣಗಳು ಇವೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅಂದರೆ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿ 16 ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ನಿನ್ನೆ (ನವೆಂಬರ್ 2) ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಶಿಯಸ್‌ ಕಾರವಾರದಲ್ಲಿ ದಾಖಲಾಗಿದೆ. ಅದೇ ರೀತಿ, ಸಮತಟ್ಟು ಪ್ರದೇಶಗಳ ಪೈಕಿ ಅತೀ ಕಡಿಮೆ ಉಷ್ಣಾಂಶ 18.6 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ.

ಬೆಂಗಳೂರು ಹವಾಮಾನ; ಇಂದು ಮಳೆ ಬರುತ್ತಾ?

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನಿನ್ನೆ (ನವೆಂಬರ್ 2) ಪ್ರಕಟಿಸಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಇಂದು (ನವೆಂಬರ್‌ 3) ಬೆಳಗ್ಗಿನ ತನಕ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಗೋಚರಿಸಲಿದೆ. ಅಲ್ಲೋ ಇಲ್ಲೋ ಎಂಬಂತೆ ಕೆಲವು ಕಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಶಿಯಸ್‌ ಮತ್ತು 21 ಡಿಗ್ರಿ ಸೆಲ್ಶಿಯಸ್ ಇರಲಿದೆ.

ಅದೇ ರೀತಿ ನಾಳೆ (ನವೆಂಬರ್ 4) ಬೆಳಗ್ಗೆ ತನಕ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಕೆಲವು ಕಡೆಗೆ ಹಗುರು ಮಳೆಯಾಗಬಹುದು. ಆ ರೀತಿ ಹಗುರ ಮಳೆಯಾಗುವ ಸ್ಥಳಗಳಲ್ಲಿ, ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31ಡಿಗ್ರಿ ಸೆಲ್ಶಿಯಸ್‌ ಮತ್ತು 21 ಡಿಗ್ರಿ ಸೆಲ್ಶಿಯಸ್‌ ಆಗಿರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

Whats_app_banner