ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ; ಹಲವೆಡೆ ಮಂಜಿನ ವಾತಾವರಣ, ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ; ಹಲವೆಡೆ ಮಂಜಿನ ವಾತಾವರಣ, ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ; ಹಲವೆಡೆ ಮಂಜಿನ ವಾತಾವರಣ, ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ

ರಾಜ್ಯದಲ್ಲಿ ಡಿಸೆಂಬರ್ 30ರ ಸೋಮವಾರ ಚಳಿಯ ಜೊತೆಗೆ ಮಂಜಿನ ವಾತಾವರಣ ಮುಂದುವರಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ಸ್ ದಾಖಲಾಗಿದೆ. ಮುಂದಿನ 5 ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

ಡಿಸೆಂಬರ್ 30ರ ಸೋಮವಾರ ಕರ್ನಾಟಕದ ಹವಾಮಾನ ವರದಿ ಇಲ್ಲಿದೆ
ಡಿಸೆಂಬರ್ 30ರ ಸೋಮವಾರ ಕರ್ನಾಟಕದ ಹವಾಮಾನ ವರದಿ ಇಲ್ಲಿದೆ

ಕರ್ನಾಟಕದಲ್ಲಿ ಮಳೆಯ ವಾತಾವರಣ ಕಡಿಮೆಯಾಗಿದ್ದು, ಮಂಜು ಮತ್ತು ಚಳಿಯ ಪರಿಸ್ಥಿತಿ ಮುಂದುವರಿದೆ. ಇಂದು (ಡಿಸೆಂಬರ್ 30, ಸೋಮವಾರ) ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುಭ್ರವಾದ ಆಕಾಶವಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಇದ್ದು, ಮಧ್ಯಾಹ್ನದ ವೇಳೆ ಸಾಮಾನ್ಯ ಬಿಸಿಲು ಇರಲಿದೆ. ಡಿಸೆಂಬರ್ 29ರ ಭಾನುವಾರ ಸಂಜೆ ಲಭ್ಯವಾಗಿರುವ ಹವಾಮಾನ ವರದಿಯ ಪ್ರಕಾರ, ರಾಜ್ಯದ ಎಲ್ಲಾ ಕಡೆ ಒಣ ಹವೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಎಲ್ಲೂ ಕೂಡ ಮಳೆಯಾಗಿಲ್ಲ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಚಳಿ ಕಡಿಮೆಯಾಗಿರುವ ಕಾರಣ ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ. ವಾರಂತ್ಯದ ರಜೆ ಮುಗಿಸಿರುವ ಉದ್ಯೋಗಿಗಳು ಚಳಿಯ ನಡುವೆ ಕಚೇರಿಗಳತ್ತ ಮುಖ ಮಾಡಿದ್ದಾರೆ. ಮಂಜು ಇರದ ಕಾರಣ ಮುಂಜಾನೆಯಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಎಂದಿನಂತೆ ಮಾರುಕಟ್ಟೆಗಳಲ್ಲಿ ವ್ಯಾಪಾರ ನಡೆಯುತ್ತಿದೆ.

ಡಿಸೆಂಬರ್ 29ರ ಭಾನುವಾರ ರಾಜ್ಯದಲ್ಲಿ ಅತಿ ಕಡಿಮೆ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳ ಉಷ್ಣಾಂಶದ ಬದಲಾವಣೆಯನ್ನು ನೋಡುವುದಾದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾದ -2.1 ಡಿಗ್ರಿ ಸೆಲ್ಸಿಯಿಂದ -4.0 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆ ಕಂಡಿದೆ. ಆದರೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಆದರೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಾತ್ರ ಉಷ್ಣಾಂಶ ಗಮನಾರ್ಹವಾಗಿ ಅಂದರೆ -2.1 ಡಿಗ್ರಿ ಸೆಲ್ಸಿಯಿಂದ -4.0 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ.

ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ಗಾಳಿಯ ಚಂಜಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್ ಎತ್ತರದಲ್ಲಿದೆ. ಕರ್ನಾಟಕದ ಯಾವುದೇ ಪ್ರದೇಶದ ಮೇಲೆ ಇದರ ಪರಿಣಾಮ ಬೀರದು, 2025ರ ಜನವರಿ 6ರವರಿಗೆ ಅಂದರೆ ಮುಂದಿನ 5 ದಿನಗಳ ಕಾಲ ಒಣ ಹವೆ ಮುಂದುವರಿಯಲಿದೆ. ಆದರೆ ಒಳನಾಡಿನ ಹಲವೆಡೆ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಕೇಂದ್ರ ವರದಿಯಲ್ಲಿ ತಿಳಿಯಿಸಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ವಾತಾವರಣವನ್ನು ನೋಡುವುದಾದರೆ, ಮುಂಜಾನೆಯಿಂದಲೇ ಶುಭ್ರ ಆಕಾಶ ಇದ್ದು, ಅಲ್ಲಲ್ಲಿ ಮಂಜಿನ ವಾತಾವರಣ ಇದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸಲ್ಸಿಯಸ್ ತಾಪಮಾನ ಇರುವ ನಿರೀಕ್ಷೆ ಇದೆ.

---

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. https://kannada.hindustantimes.com/astrology/yearly-horoscope

Whats_app_banner