ಕನ್ನಡ ಸುದ್ದಿ  /  ಕರ್ನಾಟಕ  /  ಇಂದು ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಇಂದು ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಸೋಮವಾರ ಉತ್ತರಕನ್ನಡ, ವಿಜಯಪುರ, ಉಡುಪಿ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆ ಆಗಿದೆ. ಇಂದು ( ಮಂಗಳವಾರ) ಶಿವಮೊಗ್ಗ, ದಕ್ಷಿಣ ಕನ್ನಡ, ಧಾರವಾಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಜೊತೆಗೆ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ; ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಇಂದು ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ; ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ತುಂತುರು ಮಳೆಯಾದರೆ, ಇನ್ನೂ ಕೆಲವೆಡೆ ಜಡಿ ಮಳೆ ಜನರನ್ನು ಮನೆಯಿಂದ ಹೊರ ಹೋಗಲು ಬಿಡದಂತೆ ಸುರಿಯುತ್ತಿದೆ. ಕಳೆದ 2 ದಿನಗಳಿಂದ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಯಲ್ಲೋ ಅಲರ್ಟ್‌ ಘೋಷಣೆ ಮಾಡಿತ್ತು. ಮಂಗಳವಾರ ಹಾಗೂ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಸೋಮವಾರ ಹವಾಮಾನ ಹೇಗಿತ್ತು?

ರಾಜ್ಯ‌ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸೋಮವಾರ ಕರಾವಳಿಯ ಬಹುತೆೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 12 ಸೆಮೀ, ವಿಜಯನಗರ ಜಿಲ್ಲೆಯ ಸಿಂದಗಿಯಲ್ಲಿ 12 ಸೆಮೀ ಮಳೆ ದಾಖಲಾಗಿದೆ. ಹಾಗೇ ಉ. ಕನ್ನಡದ ಅಂಕೋಲಾದಲ್ಲಿ 10 ಸೆಮೀ ವಿಜಯಪುರದ ದೇವರಹಿಪ್ಪರಗಿಯಲ್ಲಿ 10 ಸೆಮೀ, ದ. ಕನ್ನಡ ಮಂಗಳೂರಿನಲ್ಲಿ 9 ಸೆಮೀ, ಉಡುಪಿಯ ಕೋಟಾದಲ್ಲಿ 8 ಸೆಮೀ, ಆಗುಂಬೆಯಲ್ಲಿ 8ಸೆಮೀ ಮಳೆ ಆಗಿದೆ. ಇದರೊಂದಿಗೆ ಉಪ್ಪಿನಂಗಡಿ, ಬೆಳ್ತಂಗಡಿ, ಹೊನ್ನಾವರ, ಮೂಲ್ಕಿ, ಜೇವರ್ಗಿ, ಗೋಕರ್ಣ, ಇಂಡಿ, ಸಿದ್ದಾಪುರ, ಕೊಟ್ಟಿಗೆಹಾರ, ಧರ್ಮಸ್ಥಳ, ಯಲ್ಲಾಪುರ, ಭಾಗಮಂಡಲ, ಗಂಗಾವತಿ, ಶೆಂಭಾವಿ, ಇಳಕಲ್‌, ರೋಣ, ಸವಣೂರು, ಸೋಮವಾರ ಪೇಟೆ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆ ವರದಿ ಆಗಿದೆ.

ಇಂದು ಎಲ್ಲೆಲ್ಲಿ ಮಳೆ ಆಗಲಿದೆ?

ಇಂದು ಉತ್ತರ ಕನ್ನಡಾದ್ಯಂತ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚು. ಜೊತೆಗೆ ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಅನೇಕ ಕಡೆ ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಜೂನ್‌ 12, ಬುಧವಾರ ಕೂಡಾ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ವಿಜಯಪುರ , ಬಾಗಲಕೋಟೆ, ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಬಳ್ಳಾರಿಯ ಅನೇಕ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಹವಾಮಾನ ಗಂಟೆಗೆ 35-45 ಕಿಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಕರ್ನಾಟಕದ ಕರಾವಳಿ ಉದ್ದಕ್ಕೂ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು, ಸುತ್ತಮುತ್ತಲಿನ ಹವಾಮಾನ

ಇಂದು ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ/ ಗುಡುಗುಸಹಿತ ಮಳೆ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮುಂದಿನ 48 ಗಂಟೆಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

 

ಟಿ20 ವರ್ಲ್ಡ್‌ಕಪ್ 2024

ವಿಭಾಗ