ಕರ್ನಾಟಕ ಹವಾಮಾನ ಜೂನ್ 17: ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ, ಪ್ರಮುಖ ಜಿಲ್ಲೆಗಳ ಮಳೆ ವರದಿ ಹೀಗಿದೆ
Karnataka Weather June 17th: ರಾಜ್ಯದಲ್ಲಿ ಕಳೆದ ಮೂರ್ನ್ಕಾಲು ದಿನಗಳಿಂದ ಮಳೆರಾಯ ಮುನಿಸಿಕೊಂಡಿದ್ದಾನೆ. ಮೂರು ದಿನಗಳಿಂದ ಬಿಸಿಲು ಸಹಿತ ಮೋಡ ಕವಿದ ವಾತಾವರಣವಿದ್ದು ಒಂದು ಕೂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬರುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಬಹುತೇಕ ಹದಿನೈದು ದಿನಗಳು ಕಳೆದಿವೆ. ಆರಂಭದಲ್ಲಿ ರಾಜ್ಯದಾದ್ಯಂತ ವರುಣನ ಅರ್ಭಟ ಜೋರಾಗಿತ್ತು. ಈ ಬಾರಿಯಾದರೂ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷೆ ಜನರಲ್ಲಿತ್ತು. ಆದರೆ ಕಳೆದ ಮೂರು ದಿನಗಳಿಂದ ವರುಣ ರಾಜ್ಯದ ಜನತೆಯ ಮೇಲೆ ಮುನಿಸಿಕೊಂಡಿದ್ದಾನೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಇಂದು(ಜೂನ್ 17) ಕೂಡ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ.
ಜೂನ್ 20ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ನೀಡಿದೆ ಹವಾಮಾನ ಇಲಾಖೆ.
ಇಂದು ಎಲ್ಲೆಲ್ಲೆ ಮಳೆ ಆಗಲಿದೆ?
ಜೂನ್ 17ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಇನ್ನೂ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದ್ದು, ಕೆಲವಡೆ ಮೋಡ ಮುಸುಕಿದ ವಾತಾವರಣ ಇರಲಿದೆ. ಇನ್ನೂ ಕೆಲವೆಡೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಪ್ರಮಾಣ ಹೆಚ್ಚಿರಲಿದೆ ಎಂದು ವರದಿ ತಿಳಿಸಿದೆ. ಯಾವ ಜಿಲೆಗಳಿಗೂ ಮಳೆಯ ಅಲರ್ಟ್ ನೀಡಲಾಗಿಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಂತೆಯೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾಸನ ಮುಂತಾದ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲೂ ಇಂದು ಮಳೆ ಸಾಧ್ಯತೆ ಕಡಿಮೆ ಇದ್ದು, ಕೆಲವೆಡೆ ಸಾಧಾರಣ ಮಳೆ ಬೀಳಲಿದೆ. ಮಹಾನಗರಿಯಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಾಳೆಯು ಬೆಂಗಳೂರಿನಲ್ಲಿ ಬಹುತೇಕ ಇದೇ ವಾತಾವರಣ ಮುಂದುವರಿಯಲಿದೆ.
ರಾಜ್ಯದ ಪ್ರಮುಖ ನಗರಗಳ ಹವಾಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 17) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನದ ವಿವರ ಹೀಗಿದೆ.
ಬೆಂಗಳೂರು - ಗರಿಷ್ಠ 30- ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಮಂಗಳೂರು - 28-24 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗ - 27-22 ಡಿಗ್ರಿ ಸೆಲ್ಸಿಯಸ್
ಬೆಳಗಾವಿ - 22-22 ಡಿಗ್ರಿ ಸೆಲ್ಸಿಯಸ್
ಮೈಸೂರು - 30-22 ಡಿಗ್ರಿ ಸೆಲ್ಸಿಯಸ್
ಮಡಿಕೇರಿ - 29-19 ಡಿಗ್ರಿ ಸೆಲ್ಸಿಯಸ್
ಹಾಸನ - 27-20 ಡಿಗ್ರಿ ಸೆಲ್ಸಿಯಸ್
ಉಡುಪಿ - 29-24 ಡಿಗ್ರಿ ಸೆಲ್ಸಿಯಸ್
ದಾವಣಗೆರೆ - 29-22 ಡಿಗ್ರಿ ಸೆಲ್ಸಿಯಸ್
ಬಳ್ಳಾರಿ - 33-24 ಡಿಗ್ರಿ ಸೆಲ್ಸಿಯಸ್