ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜೂನ್‌ 24: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಕರ್ನಾಟಕ ಹವಾಮಾನ ಜೂನ್‌ 24: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಇಂದು ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಸೇರಿ ಒಟ್ಟು 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂಬ ವಿವರಕ್ಕಾಗಿ ಮುಂದೆ ಓದಿ.

ಕರ್ನಾಟಕ ಹವಾಮಾನ ಜೂನ್‌ 24: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಜೂನ್‌ 24: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಾದ್ಯಂತ ಮಳೆ ಬಿರುಸು ಪಡೆದುಕೊಂಡಿದೆ. ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಜೋರಿದ್ದು ಇಂದು ಕೂಡ ಬಹುತೇಕ ಕಡೆ ಉತ್ತಮ ಮಳೆಯಾಗಲಿದೆ. ಆದರೂ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿಸಿದಂತೆ ಮಳೆ ಬರುತ್ತಿಲ್ಲ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆ ಬರುವುದು ಅಪರೂಪವಾಗಿದೆ. ಕರಾವಳಿ ಭಾಗಗಳಲ್ಲಿ ಆಗಾಗ ಉತ್ತಮ ಮಳೆ ಸುರಿಯುತ್ತಿದೆ. ಜೂನ್‌ 23ರಂದು ರಾಜ್ಯದ ಕೆಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದು ಎಲ್ಲೆಲ್ಲಿ ರೆಡ್‌ ಅಲರ್ಟ್‌

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ರೆಡ್‌ ಅಲರ್ಟ್‌ ಫೋಷಿಸಿದೆ. ಜೂನ್‌ 27ರವರೆಗೂ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತೆ?

ಇಂದು ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಫೋಷಿಸಲಾಗಿದೆ. ಬೆಳಗಾವಿ ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಫೋಷಿಸಿಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಇಂದು ಕೆಲವೆಡೆ ಮಳೆಯಾಗುವ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಇದ್ದರೆ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬರಲಿದೆ.

ರಾಜ್ಯದ ಪ್ರಮುಖ ನಗರಗಳ ಹವಾಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 23) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನದ ವಿವರ ಹೀಗಿದೆ.

ಬೆಂಗಳೂರು: ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ - ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌

ಮಂಗಳೂರು: 24 ಡಿಗ್ರಿ ಸೆಲ್ಸಿಯಸ್‌ - 27 ಡಿಗ್ರಿ ಸೆಲ್ಸಿಯಸ್‌

ಶಿವಮೊಗ್ಗ - 22 ಡಿಗ್ರಿ ಸೆಲ್ಸಿಯಸ್‌ - 26 ಡಿಗ್ರಿ ಸೆಲ್ಸಿಯಸ್‌

ಬೆಳಗಾವಿ - 21 ಡಿಗ್ರಿ ಸೆಲ್ಸಿಯಸ್‌ - 26 ಡಿಗ್ರಿ ಸೆಲ್ಸಿಯಸ್‌

ಮೈಸೂರು - 21 ಡಿಗ್ರಿ ಸೆಲ್ಸಿಯಸ್‌ - 28 ಡಿಗ್ರಿ ಸೆಲ್ಸಿಯಸ್‌

ದಾವಣಗೆರೆ - 22 ಡಿಗ್ರಿ ಸೆಲ್ಸಿಯಸ್‌ - 28 ಡಿಗ್ರಿ ಸೆಲ್ಸಿಯಸ್‌