ಕರ್ನಾಟಕ ಹವಾಮಾನ ಜೂನ್‌ 30: ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಉಡುಪಿ, ದ.ಕ ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜೂನ್‌ 30: ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಉಡುಪಿ, ದ.ಕ ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕ ಹವಾಮಾನ ಜೂನ್‌ 30: ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ಉಡುಪಿ, ದ.ಕ ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ದೇಶದಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಬಹುತೇಕ ರಾಜ್ಯಗಳಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ದೆಹಲಿಯಲ್ಲಿ ಭಾರಿ ಮಳೆಗೆ ಹಲವರು ಸಾವನ್ನಪ್ಪಿದ್ದಾರೆ. ಇಂದು (ಜೂನ್‌ 30) ರಾಜ್ಯದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಫೋಷಿಸಲಾಗಿದೆ. ಭಾನುವಾರ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ನೋಡಿ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ; ರಾಜ್ಯದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಮುಂಗಾರು ಮಳೆ ಸುರಿಯಲು ಆರಂಭವಾಗಿ ಒಂದು ತಿಂಗಳು ಕಳೆದಿದೆ. ಕರಾವಳಿ ಹಾಗೂ ಮಲೆನಾಡು ಭಾಗವನ್ನು ಹೊರತು ಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದೆ. ಉತ್ತರದ ಭಾಗದಲ್ಲಿ ತೀವ್ರ ಬಿಸಿಲಿನ ವಾತಾವರಣವಿದಿದ್ದು, ಇದೀಗ ಮಳೆ ಸುರಿಯಲು ಆರಂಭವಾಗಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯಲ್ಲಿ ರಣಮಳೆಗೆ 11 ಮಂದಿ ಸಾವನ್ನಪ್ಪಿದ್ದಾರೆ. ಜೂನ್‌ 30 ರಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಿದೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ 5 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗುಡುಗು ಮಿಂಚಿನ ಜೊತೆಗೆ ಬಿರುಗಾಳಿ ಕೂಡ ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇಂದು ಎಲ್ಲೆಲ್ಲಿ ಯೆಲ್ಲೋ ಅಲರ್ಟ್‌

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಕೊಡಗು ಹಾಗೂ ಶಿವಮೊಗ್ಗದಲ್ಲೂ ಉತ್ತಮ ಮಳೆಯಾಗುವ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ ಹವಾಮಾನ ಇಲಾಖೆ. ಇದರೊಂದಿಗೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗವು ಹೆಚ್ಚಿರಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮಿಂಚು ಸಹಿತ ಗುಡುಗು ಕೂಡ ಇರಲಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು ಮೋಡ ಮುಸುಕಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಹನಿಯಾಗುವ ನಿರೀಕ್ಷೆ ಇದೆ. ಭಾನುವಾರ ಹೊರಗಡೆ ಹೋಗುವ ಪ್ಲಾನ್‌ ಇದ್ರೆ ಛತ್ರಿ ಹಿಡಿದುಕೊಂಡು ಹೋಗಲು ಮರೆಯಬೇಡಿ.

ರಾಜ್ಯದ ಪ್ರಮುಖ ನಗರಗಳ ಹವಾಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 30) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನದ ವಿವರ ಹೀಗಿದೆ.

ಬೆಂಗಳೂರು: ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌- ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌

ಮಂಗಳೂರು: 24 ಡಿಗ್ರಿ ಸೆಲ್ಸಿಯಸ್‌- 28 ಡಿಗ್ರಿ ಸೆಲ್ಸಿಯಸ್‌

ಶಿವಮೊಗ್ಗ: 22 ಡಿಗ್ರಿ ಸೆಲ್ಸಿಯಸ್‌ -28 ಡಿಗ್ರಿ ಸೆಲ್ಸಿಯಸ್‌

ಬೆಳಗಾವಿ - 22 ಡಿಗ್ರಿ ಸೆಲ್ಸಿಯಸ್‌-26 ಡಿಗ್ರಿ ಸೆಲ್ಸಿಯಸ್‌

ಮೈಸೂರು: 29 ಡಿಗ್ರಿ ಸೆಲ್ಸಿಯಸ್‌ -22 ಡಿಗ್ರಿ ಸೆಲ್ಸಿಯಸ್‌

ಮಂಡ್ಯ: 22 ಡಿಗ್ರಿ ಸೆಲ್ಸಿಯಸ್‌- 30 ಡಿಗ್ರಿ ಸೆಲ್ಸಿಯಸ್‌

ಹಾಸನ: 20 ಡಿಗ್ರಿ ಸೆಲ್ಸಿಯಸ್‌-26 ಡಿಗ್ರಿ ಸೆಲ್ಸಿಯಸ್‌

ಉಡುಪಿ: 24 ಡಿಗ್ರಿ ಸೆಲ್ಸಿಯಸ್‌- 26 ಡಿಗ್ರಿ ಸೆಲ್ಸಿಯಸ್‌

Whats_app_banner