Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ

Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ

Karnataka Weather January 05: ಕರ್ನಾಟಕದಲ್ಲಿ ಚಳಿ ಹೆಚ್ಚಳವಾಗಿದ್ದು, ಹಲವು ಜಿಲ್ಲೆಗಳಲ್ಲಿ ಶೀತಗಾಳಿ‌ಯ ಮುನ್ಸೂಚನೆ ಇದೆ. ಕಲ್ಯಾಣ ಕರ್ನಾಟಕದಲ್ಲಿ ಚಳಿ ಹೆಚ್ಚಳವಾಗಿದ್ದು, ರಾಜಧಾನಿ ಬೆಂಗಳೂರು ನಗರದಲ್ಲಿ ತಾಪಮಾನ ಭಾರಿ ಕುಸಿತ ಕಂಡಿದೆ. ರಾಜ್ಯದ ಹವಾಮಾನ ವರದಿ ಇಲ್ಲಿದೆ.

ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ
ಕರ್ನಾಟಕದಲ್ಲಿ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಬೆಂಗಳೂರು ತಾಪಮಾನ ಭಾರಿ ಕುಸಿತ

ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು, ಇಂದು (ಜನವರಿ 5, ಭಾನುವಾರ) ಕೂಡಾ ಚಳಿಗಾಲದ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಚಳಿ ಮುಂದುವರಿಯಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ. ಒಳನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುವ ನಿರೀಕ್ಷೆಯಿದೆ ಎಂದುು ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಜಾನೆ ಮತ್ತು ಸಂಜೆಯ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಇಂದು ಕೂಡಾ ರಾಜ್ಯದ ಎಲ್ಲಾ ಭಾಗಗಳಲ್ಲಿ ಚಳಿ ಮುಂದುವರೆಯಲಿದೆ. ಅಲ್ಲಲ್ಲಿ ತಣ್ಣನೆಯ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಬೆಳಗ್ಗೆ ಹಾಗೂ ಸಂಜೆ ಮೇಲೆ ಜನರು ಚಳಿಯಿಂದ ರಕ್ಷಣೆ ಪಡೆಯುವತ್ತ ಗಮನ ಹರಿಸುತ್ತಿದ್ದಾರೆ.

ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗಮನಾರ್ಹ ತಾಪಮಾನ ಬದಲಾವಣೆಯ ನಿರೀಕ್ಷೆ ಇಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಚಳಿ ತುಸು ಹೆಚ್ಚಾಗಿದೆ. ಕಡಿಮೆ ಪ್ರಮಾಣದಲ್ಲಿ ಮಂಜು ಇದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಆಗಿಲ್ಲ. ಸಂಜೆ ಮೇಲೆ ಚಳಿ ಹೆಚ್ಚಾಗಲಿದೆ

ಬೆಂಗಳೂರು ಹವಾಮಾನ

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಕುಸಿದಿದ್ದು, ಮುಂದಿನ ಎರಡು ದಿನಗಳಲ್ಲಿ ಶೀತ ಪರಿಸ್ಥಿತಿಗೆ ಕಾರಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಶನಿವಾರ ಉದ್ಯಾನ ನಗರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 10.2 ಸೆಲ್ಸಿಯಸ್‌ಗೆ ಇಳಿದಿದೆ. ಶೀತಗಾಳಿಯ ಪ್ರಭಾವದಿಂದಾಗಿ ತಾಪಮಾನ ಕುಸಿಯುತ್ತಿದೆ. ಬೆಳಗ್ಗೆ ನಗರದಲ್ಲಿ ದಟ್ಟವಾದ ಮಂಜಿನ ಬಗ್ಗೆಯೂ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಆದರೆ, ಇಂದು ಮುಂಜಾನೆ ಬೆಂಗಳೂರಿನಲ್ಲಿ ದಟ್ಟ ಮಂಜು ಕಾಣಿಸಿಕೊಂಡಿಲ್ಲ. ಸಾಧಾರಣ ಮಂಜಿನ ವಾತಾವರಣವಿದ್ದು, ಚಳಿ ಹೆಚ್ಚಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಡಿಸೆಂಬರ್‌ ಕೊನೆಯ ಭಾಗ ಹಾಗೂ ಜನವರಿ ಆರಂಭದಲ್ಲಿ ತಾಪಮಾನ ಇಳಿಕೆಯಾಗುವುದು ಸಾಮಾನ್ಯ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ತಾಪಮಾನ 14.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಂಗಳೂರಿನಲ್ಲಿ ಗರಿಷ್ಠ 33 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.‌

ಕಲ್ಯಾಣ ಕರ್ನಾಟಕದಲ್ಲಿ ಶೀತಗಾಳಿ

ಅತ್ತ ಕಲ್ಯಾಣ ಕರ್ನಾಟಕದಲ್ಲಿಯೂ ಶೀತಗಾಳಿಯಿಂದಾಗಿ ಚಳಿ ಹೆಚ್ಚಿದೆ. ಶನಿವಾರ ಬೆಳಗ್ಗೆ ಬೀದರ್‌ನಲ್ಲಿ ಕನಿಷ್ಠ 11.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಕೋಲಾರ, ಕಲಬುರಗಿ, ವಿಜಯನಗರ, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲೂ 15 ಡಿಗ್ರಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಇರುವ ಸಾಧ್ಯತೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

Whats_app_banner