ಕರ್ನಾಟಕ ಹವಾಮಾನ; ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ; ಮೈಸೂರು ದಸರಾ ಸಂಭ್ರಮಕ್ಕೂ ವರುಣನ ಅಡ್ಡಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ; ಮೈಸೂರು ದಸರಾ ಸಂಭ್ರಮಕ್ಕೂ ವರುಣನ ಅಡ್ಡಿ

ಕರ್ನಾಟಕ ಹವಾಮಾನ; ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ; ಮೈಸೂರು ದಸರಾ ಸಂಭ್ರಮಕ್ಕೂ ವರುಣನ ಅಡ್ಡಿ

ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್‌ 7ರ ಸೋಮವಾರ ಮಳೆಯಾಗಿದೆ. ಸಂಭ್ರಮದ ಮೈಸೂರು ದಸಾರಗೂ ವರುಣ ಅಡ್ಡಿಯಾಗಿದ್ದಾನೆ. ಮಂಗಳವಾರವೂ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮುನ್ಸೂಚನೆ ಇದೆ. ಕರ್ನಾಟಕ ಹವಾಮಾನ ವರದಿ ಹೀಗಿದೆ.

ಕರ್ನಾಟಕ ಹವಾಮಾನ; ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ, ಮೈಸೂರು ದಸರಾಗೂ ಅಡ್ಡಿ ಸಾಧ್ಯತೆ
ಕರ್ನಾಟಕ ಹವಾಮಾನ; ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ, ಮೈಸೂರು ದಸರಾಗೂ ಅಡ್ಡಿ ಸಾಧ್ಯತೆ

ಅಕ್ಟೋಬರ್‌ 8ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather forecast) ಮುನ್ಸೂಚನೆ ನೀಡಿದೆ. ಅತ್ತ ದಸರಾ ಸಂಭ್ರಮದಲ್ಲಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗುಡುಗು ಸಹಿತ ಮಳೆರಾಯನ ಅಬ್ಬರವಿರಲಿದೆ. ಇದೇ ವೇಳೆ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವೆದರ್‌ ಫೋರ್‌ಕಾಸ್ಟ್‌ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅತ್ತ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ಸುತ್ತ ಮುತ್ತ ಅಕ್ಟೋಬರ್‌ 9ರವರೆಗೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 30 ಡಿಗ್ರಿಯಾದರೆ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಅಂದಾಜಿಸಲಾಗಿದೆ.

ರಾಜ್ಯದ ಹಲವೆಡೆ ಮಳೆ, ಪುತ್ತೂರಿನಲ್ಲಿ ಅಧಿಕ

ಸೋಮವಾರ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದೆ. ನೆೈಋತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿಯೂ ಮಾನ್ಸೂನ್‌ ಸಕ್ರಿಯವಾಗಿದ್ದರೆ, ಉತ್ತರ ಒಳನಾಡು ಭಾಗದಲ್ಲಿ ದುರ್ಬಲವಾಗಿತ್ತು. ಸೋಮವಾರ ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 11 ಸೆಂಟಿ ಮೀಟರ್‌ ಮಳೆಯಾಗಿದ್ದು. ಕೊಡಗಿನ ನಾಪೊಕ್ಲುವಿನಲ್ಲಿ 9 ಸೆಂಟಿ ಮೀಟರ್‌ ಮಳೆಯಾಗಿದೆ.‌ ಇವು ರಾಜ್ಯದಲ್ಲಿ ಸೋಮವಾರ ಹೆಚ್ಚು ಮಳೆಗೆ ಸಾಕ್ಷಿಯಾದ ಸ್ಥಳಗಳು. ಉಳಿದಂತೆ ದಕ್ಷಿಣ ಕನ್ನಡದ ಉಪ್ಪಿನಂಗಡಿ, ಪಣಂಬೂರು, ಮಾಣಿ, ಮಂಡ್ಯದ ಕೃಷ್ಣರಾಜಪೇಟೆ, ಕನಕಪುರ, ತಿಪಟೂರು ಸೇರಿದಂತೆ ಹಲವು ಭಾಗಗಳಲ್ಲಿ ವರುಣನ ಆಗಮನವಾಗಿದೆ.

Whats_app_banner