Karnataka Weather: ಕರ್ನಾಟಕದಲ್ಲಿ ಶುರುವಾಯ್ತು ದಟ್ಟ ಚಳಿ ಅನುಭವ, ಬೆಂಗಳೂರು ಕೂಲ್‌ ಕೂಲ್‌; ತುಮಕೂರು, ದಾವಣಗೆರೆ, ಬಳ್ಳಾರಿಯಲ್ಲಿಂದು ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕದಲ್ಲಿ ಶುರುವಾಯ್ತು ದಟ್ಟ ಚಳಿ ಅನುಭವ, ಬೆಂಗಳೂರು ಕೂಲ್‌ ಕೂಲ್‌; ತುಮಕೂರು, ದಾವಣಗೆರೆ, ಬಳ್ಳಾರಿಯಲ್ಲಿಂದು ಮಳೆ

Karnataka Weather: ಕರ್ನಾಟಕದಲ್ಲಿ ಶುರುವಾಯ್ತು ದಟ್ಟ ಚಳಿ ಅನುಭವ, ಬೆಂಗಳೂರು ಕೂಲ್‌ ಕೂಲ್‌; ತುಮಕೂರು, ದಾವಣಗೆರೆ, ಬಳ್ಳಾರಿಯಲ್ಲಿಂದು ಮಳೆ

ಕರ್ನಾಟಕದಲ್ಲಿ ಶುಕ್ರವಾರವೂ ಕೆಲವು ಜಿಲ್ಲೆಗಳಲ್ಲಿ ಮಳೆಯಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಕಂಡು ಚಳಿಯ ದಟ್ಟ ಅನುಭವವಾಗುತ್ತಿದೆ. ಬೆಂಗಳೂರಿನಲ್ಲಿ ಈ ಪ್ರಮಾಣ ಅಧಿಕವಾಗಿದೆ.

ಬೆಂಗಳೂರು ನಗರದಲ್ಲಿ ಚಳಿ ಪ್ರಮಾಣ ಅಧಿಕವಾಗಿದೆ. ತುಮಕೂರು ಸಹಿತ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯಿದೆ.
ಬೆಂಗಳೂರು ನಗರದಲ್ಲಿ ಚಳಿ ಪ್ರಮಾಣ ಅಧಿಕವಾಗಿದೆ. ತುಮಕೂರು ಸಹಿತ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯಿದೆ.

ಬೆಂಗಳೂರು: ಕರ್ನಾಟಕದ ಬೆಂಗಳೂರು, ದಾವಣಗೆರೆ, ವಿಜಯಪುರ, ಚಿತ್ರದುರ್ಗ, ಗದಗ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಇದರಿಂದ ಎಲ್ಲೆಡೆ ಚಳಿಯ ವಾತಾವರಣ ಅಧಿಕವಾಗಿದೆ. ರಾತ್ರಿಯಿಂದಲೇ ಶುರುವಾಗುವ ಚಳಿ ಅನುಭವ ಬೆಳಗಿನ ಜಾವ ದಟ್ಟವಾಗುತ್ತಿದೆ. ಕರ್ನಾಟಕದ ಉತ್ತರ, ದಕ್ಷಿಣ ಒಳನಾಡಿನ ಜತೆಗೆ ಮಲೆನಾಡು, ಮಧ್ಯ ಕರ್ನಾಟಕ ಭಾಗದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲಿಯೇ ಅತೀ ಹೆಚ್ಚು ಚಳಿ ಅನುಭವಿಸುತ್ತಿರುವ ಪಟ್ಟಿಯಲ್ಲಿ ಬೆಂಗಳೂರು ನಗರವೇ ಇದೆ. ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ತೀವ್ರಗೊಂಡಿದ್ದ ಮಳೆ ಪ್ರಮಾಣ ತಗ್ಗಿದೆ. ಆದರೂ ತುಮಕೂರು, ಬಳ್ಳಾರಿ, ದಾವಣಗೆರೆ ಜಿಲ್ಲೆ ಸೇರಿ 6 ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉಳಿದ ಭಾಗಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉಷ್ಣಾಂಶದಲ್ಲಿ ಭಾರೀ ಕುಸಿತ

ಉತ್ತರ ಕರ್ನಾಟಕ ಭಾಗದಲ್ಲೂ ಹಲವು ಜಿಲ್ಲೆಗಳ ಉಷ್ಣಾಂಶದಲ್ಲಿ ಗಣನೀಯ ಕುಸಿತ ಕಂಡು ಚಳಿ ಅನುಭವವಾಗುತ್ತಿದೆ. ಗದಗ, ಹಾವೇರಿ, ಕೊಪ್ಪಳ, ಧಾರವಾಡ, ಬೆಳಗಾವಿ ಸಹಿತ ಹಲವೆಡೆ ಉಷ್ಣಾಂಶ ಕುಸಿತ ಕಂಡು ಬಂದಿದೆ.

ಬೆಳಗಾವಿ ನಗರದಲ್ಲಿ ಗರಿಷ್ಣ ಉಷ್ಣಾಂಶ 26.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 21.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೀದರ್‌ನಲ್ಲಿ ಗರಿಷ್ಣ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ವಿಜಯಪುರ ನಗರದಲ್ಲಿ ಗರಿಷ್ಣ ಉಷ್ಣಾಂಶ 27.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬಾಗಲಕೋಟೆ ನಗರದಲ್ಲಿ ಗರಿಷ್ಣ ಉಷ್ಣಾಂಶ 29.1 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಧಾರವಾಡ ನಗರದಲ್ಲಿ ಗರಿಷ್ಣ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಗದಗ ನಗರದಲ್ಲಿ ಗರಿಷ್ಣ ಉಷ್ಣಾಂಶ 25.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕಲಬುರಗಿ ನಗರದಲ್ಲಿ ಗರಿಷ್ಣ ಉಷ್ಣಾಂಶ 30.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಹಾವೇರಿ ನಗರದಲ್ಲಿ ಗರಿಷ್ಣ ಉಷ್ಣಾಂಶ 25.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕೊಪ್ಪಳ ನಗರದಲ್ಲಿ ಗರಿಷ್ಣ ಉಷ್ಣಾಂಶ 25.2 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 23.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಯಚೂರು ನಗರದಲ್ಲಿ ಗರಿಷ್ಣ ಉಷ್ಣಾಂಶ 28.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಾಮರಾಜನಗರದಲ್ಲಿ ಗರಿಷ್ಣ ಉಷ್ಣಾಂಶ 27.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಿಕ್ಕಮಗಳೂರು ನಗರದಲ್ಲಿ ಗರಿಷ್ಣ ಉಷ್ಣಾಂಶ 24.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಿತ್ರದುರ್ಗ ನಗರದಲ್ಲಿ ಗರಿಷ್ಣ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 19.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ದಾವಣಗೆರೆ ನಗರದಲ್ಲಿ ಗರಿಷ್ಣ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಹಾಸನ ನಗರದಲ್ಲಿ ಗರಿಷ್ಣ ಉಷ್ಣಾಂಶ 31.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಚಿಂತಾಮಣಿ ನಗರದಲ್ಲಿ ಗರಿಷ್ಣ ಉಷ್ಣಾಂಶ 24.1 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 18.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಂಡ್ಯ ನಗರದಲ್ಲಿ ಗರಿಷ್ಣ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಡಿಕೇರಿ ನಗರದಲ್ಲಿ ಗರಿಷ್ಣ ಉಷ್ಣಾಂಶ 25.9 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮೈಸೂರು ನಗರದಲ್ಲಿ ಗರಿಷ್ಣ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಶಿವಮೊಗ್ಗ ನಗರದಲ್ಲಿ ಗರಿಷ್ಣ ಉಷ್ಣಾಂಶ 26.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಣ ಉಷ್ಣಾಂಶ 30.3 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಶಿರಾಲಿಯಲ್ಲಿ ಗರಿಷ್ಣ ಉಷ್ಣಾಂಶ 31.2 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 16.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕಾರವಾರ ನಗರದಲ್ಲಿ ಗರಿಷ್ಣ ಉಷ್ಣಾಂಶ 31.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 23.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಂಗಳೂರು ನಗರದಲ್ಲಿ ಗರಿಷ್ಣ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಣ ಉಷ್ಣಾಂಶ 29.8 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 22.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ

ಶುಕ್ರವಾರದಂದು ಕರ್ನಾಟಕದ ಕೆಲವು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಬಳ್ಳಾರಿ. ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಗುಡುಗು ಸಹಿತ ಮಳೆಯಾಗಲಿದ್ದು,ಈ ಆರೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಅನ್ನು ಘೋಷಿಸಲಾಗಿದೆ.

ಕರಾವಳಿ ಭಾಗದ ಮೂರು ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸೂಚನೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಗುಡುಗಿನ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಲಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ. ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯೂ ಆಗಲಿದೆ. ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯೂ ಆಗಬಹುದು. ಬೆಂಗಳೂರಿನ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಗರಿಷ್ಠ ಉಷ್ಣಾಂಶವು 27 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದರಿಂದ ಚಳಿಯ ಅನುಭವವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಎಚ್‌ಎಎಲ್‌ ಭಾಗದಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 22.5 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರು ನಗರ ಭಾಗದಲ್ಲಿ ಗರಿಷ್ಠ ಉಷ್ಣಾಂಶ 22.1 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರು ನಗರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾಗದಲ್ಲಿ ಗರಿಷ್ಠ ಉಷ್ಣಾಂಶ 24.6 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರು ನಗರ ಜಿಕೆವಿಕೆ ಭಾಗದಲ್ಲಿ ಗರಿಷ್ಠ ಉಷ್ಣಾಂಶ 24.2 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Whats_app_banner