ಕನ್ನಡ ಸುದ್ದಿ  /  Karnataka  /  Karnataka Weather Heavy Rain Forecast In Many Parts Of The Karnataka Including Bangalore Today Yellow Alert Rmy

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಮುಂದುವರಿಕೆ

ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಂಗಳೂರು ಮಂದಿಗೆ ಸಮಸ್ಯೆಯಾಗುತ್ತಿದೆ. ಮಧ್ಯಾಹ್ನದ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ ಇದೆ. (HT File)
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ ಇದೆ. (HT File)

ಬೆಂಗಳೂರು: ಕರ್ನಾಟಕದಲ್ಲಿ (Karnataka) ವರುಣ ಅಬ್ಬರಿಸುತ್ತಿದ್ದು, ಇಂದು (ಜೂನ್ 1, ಗುರುವಾರ) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರಿ ಮಳೆಯಾಗುವ (Heavy Rain) ಸಂಭವ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಕೋಲಾರ ಜಿಲ್ಲೆಗಳ ಕೆಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ (Meteorological Department Bangalore) ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.

ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿ ಕೆಲವೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 39.2 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಇಡೀ ಕರ್ನಾಟಕದ ಪೈಕಿ ನಿನ್ನೆ (ಮೇ 31, ಬುಧವಾರ) ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 8 ಸೆಂಟಿ ಮೀಟರ್ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ.

ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ ತಲಾ 5, ಶಿಡ್ಲಘಟ್ಟ, ರಾಮನಗರ ಜಿಲ್ಲೆಯ ಚಂದೂರಾಯನಹಳ್ಳಿ ತಲಾ 4, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ನಗರದ ಗೋಪಾಲ್‌ ನಗರ, ಮದ್ದೂರು, ಕೋಲಾರದಲ್ಲಿ ತಲಾ 3, ಕೋಲಾರ ಜಿಲ್ಲೆಯ ಮಾಲೂರು, ಕೋಲಾರ ನಗರದ ಟಮಕ, ಹಾಸನ ಜಿಲ್ಲೆಯ ಸಿಆರ್ ಪಟ್ಟಣ, ಮದುಗಿರಿ, ಹಾಸನ, ಬೆಳ್ಳೂರು, ತೊಂಡೇಭಾವಿ, ಹರದನಹಳ್ಳಿ, ಗೋಣಿಕೊಪ್ಪಲು ತಲಾ 2, ಉಡುಪಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹೆಸರಘಟ್ಟ, ಬುಕ್ಕಪಟ್ಟಣ, ಕುಣಿಗಲ್ ಮಳವಳ್ಳಿ, ಹಾರಂಗಿ, ಗೌರಿ ಬಿದನೂರು ಹಾಗೂ ಶ್ರವಣಬೆಳಗೊಳದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಕೆಲದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಂಗಳೂರಿನಲ್ಲಿ ಭಾರಿ ಅವಾಂತರೇ ಸೃಷ್ಟಿಯಾಗುತ್ತಿದೆ. ಮಧ್ಯಾಹ್ನದ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಮಂಗಳವಾರ (ಮೇ 30) ಮಧ್ಯಾಹ್ನವೇ ಗುಡುಗು ಹಾಗೂ ಬಿರುಗಾಳಿ ಸರಿತ ಧಾರಾಕಾರ ಮಳೆಯಾಗಿದೆ. ಇದರಿಂದ ಕೆಲವೆಡೆ ಮರಗಳ ರೆಂಬೆ-ಕೊಂಬೆಗಳು ಧರೆಗುರುಳಿವೆ. ಪರಿಣಾಮ ಟ್ರಾಫಿಕ್ ಜಾಮ್ ಕೂಡ ಆಗಿತ್ತು.

ಭಾರಿ ಮಳೆಯಾದಾಗ ರಸ್ತೆಗಳ ಮೇಲೆ ಮಳೆ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಕಳೆದ ವರ್ಷವೂ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಇದರಿಂದ ಜನರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಮಳೆ ನೀರು ಒಳಚರಂಡಿಗಳ ಮೂಲಕ ಸಾರಾಗವಾಗಿ ಹರಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಮಂದಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತಲೇ ಇದ್ದಾರೆ.

ಸದ್ಯ ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರಿಸುತ್ತಿದೆ. ಜೂನ್ 4ಕ್ಕೆ ಮುಂಗಾರು ಕೇರಳ ಪ್ರವೇಶಿಸಲಿದ್ದು, ಜೂನ್ 7ಕ್ಕೆ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ. ರೈತರು ಮುಂಗಾರು ಬಿತ್ತನೆಗಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

IPL_Entry_Point

ವಿಭಾಗ