ಕನ್ನಡ ಸುದ್ದಿ  /  Karnataka  /  Karnataka Weather Heavy Rain Forecast Today In Many Parts Of State Including Chikkamagaluru Kodagu Hassan Shivamogga Rmy

Karnataka Weather: ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ ರಾಜ್ಯದ ಹಲವು ಕಡೆ ಇಂದು ಭಾರಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಮುರ್ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಇಂದು ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರಿ ಮಳೆಯ ಸಂಭವ ಇದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ ಇದೆ (HT)
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ ಇದೆ (HT)

ಬೆಂಗಳೂರು: ಪೂರ್ವ ಮುಂಗಾರು ಕರ್ನಾಟಕದಲ್ಲಿ ಅಬ್ಬರಿಸುತ್ತಿದ್ದು, ಇಂದು (ಜೂನ್ 2, ಶುಕ್ರವಾರ) ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Bengaluru Rain) ಸಂಭವ ಇದೆ. ಕಳೆದ ಕೆಲವು ದಿನಗಳಿಂದ ಸುರಿದ ಮಳೆ ನಗರ ಹಲವೆಡೆ ಭಾರಿ ಅವಾಂತರಗಳನ್ನೇ ಸೃಷ್ಟಿ ಮಾಡಿದ್ದು, ಕೆಲವೆಡೆ ಮರದ ಕೊಂಬೆಗಳು ಧರೆಗುರುಳಿ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಕೆಲವು ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ನಿನ್ನೆ (ಜೂನ್ 1, ಗುರುವಾರ) ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿತ್ತು, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ. ಇನ್ನುಳಿದಂತೆ ಉತ್ತರ ಕನ್ನಡದ ಜಗಲಬೆಟ್‌ನಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದೆ.

ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಯಗಟಿ, ಬಾಳೆಹೊನ್ನೂರು, ಚಿಕ್ಕಮಗಳೂರು, ಸುತ್ತೂರು ತಲಾ 3, ಉಡುಪಿ, ರಾಯಚೂರು, ಹಂಗಲ್, ಗುತ್ತಲ್, ಭದ್ರಾವತಿ, ಆನವಟ್ಟಿ, ಮಳವಳ್ಳಿ, ಬುಕ್ಕಪಟ್ಟಣ ತಲಾ 2, ಬನವಾಸಿ, ಹಳಿಯಾಳ, ಸಿದ್ದಾಪುರ, ಲೋಕಾಪುರ, ಇಳಕಲ್, ಗದಗ, ಸಂಕೇಶ್ವರ, ಲಕ್ಷ್ಮೇಶ್ವರ, ಧಾರವಾಡ, ಕಲಘಟಗಿ, ಹುಬ್ಬಳ್ಳಿ, ಕೆಂಭಾವಿ, ಮುದಗಲ್, ಚಾಮರಾಜನಗರ, ಚನ್ನಪಟ್ಟಣ, ಬಿ ದುರ್ಗ, ಚನ್ನಗರಿ, ಸಲಕೇಶಪುರ, ಶ್ರವಣಬೆಳಗೊಳದಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ದಾಖಲಾಗಿದೆ.

ಕಳೆದೊಂದು ವಾರದಿಂದ ಕೆಲವೆಡೆ ಭಾರಿ ಮಳೆಯಾಗುತ್ತಿದೆ. ಜೂನ್‌ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಅಂದು ರಾಜ್ಯದ ಕರಾವಳಿ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ, ಮೈಸೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಸಂಭವ ಇದೆ.

ಜೂನ್ 7 ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ. ಹೀಗಾಗಿ ರೈತರು ಕೂಡ ಬಿತ್ತನೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಒಟ್ಟು 8.91 ಲಕ್ಷ ಹೆಕ್ಟೇರು ನಿವ್ವಳ ಬಿತ್ತನೆ ಕ್ಷೇತ್ರ ಹೊಂದಿದ್ದು, ಮುಂಗಾರು ಹಂಗಾಮಿನಲ್ಲಿ 8.87 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಕೈಗೊಳ್ಳುವ ಗುರಿ ಹೊಂದಲಾಗಿದೆ.

ವಿಭಾಗ