ಕರ್ನಾಟಕ ಹವಾಮಾನ; ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ, ಉಳಿದೆಡೆ ಬಿಸಿಲು, ಮಳೆಯಾಟ, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ, ಉಳಿದೆಡೆ ಬಿಸಿಲು, ಮಳೆಯಾಟ, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಕರ್ನಾಟಕ ಹವಾಮಾನ; ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ, ಉಳಿದೆಡೆ ಬಿಸಿಲು, ಮಳೆಯಾಟ, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಇಂದಿನ ಹವಾಮಾನ: ಉತ್ತರ ಕನ್ನಡದಲ್ಲಿ ಇಂದು (ಮೇ 23) ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಕರ್ನಾಟಕದ ಉಳಿದೆಡೆ ಬಿಸಿಲು ಮತ್ತು ಮಳೆಯಾಟ ನಡೆಯುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರ್ನಾಟಕ ಹವಾಮಾನ ಇಂದು ಹೀಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

 ಕರ್ನಾಟಕ ಹವಾಮಾನ ಮೇ 23: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ, ಉತ್ತರ ಕನ್ನಡದಲ್ಲಿ ಭಾರಿ ಮಳೆ, ಉಳಿದೆಡೆ ಬಿಸಿಲು ಮತ್ತು ಮಳೆಯಾಟ ಸಾಧ್ಯತೆ ಎಂದು ಕರ್ನಾಟಹ ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.
ಕರ್ನಾಟಕ ಹವಾಮಾನ ಮೇ 23: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ, ಉತ್ತರ ಕನ್ನಡದಲ್ಲಿ ಭಾರಿ ಮಳೆ, ಉಳಿದೆಡೆ ಬಿಸಿಲು ಮತ್ತು ಮಳೆಯಾಟ ಸಾಧ್ಯತೆ ಎಂದು ಕರ್ನಾಟಹ ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಇಂದಿನ ಹವಾಮಾನ: ಕರ್ನಾಟಕದ ಬಹುಭಾಗದಲ್ಲಿ ಇಂದು ಕೂಡ ಮಳೆಯ ದಿನ. ಆದಾಗ್ಯೂ ಕೆಲವು ಪ್ರದೇಶಗಳಲ್ಲಿ ಬಿಸಿಲು ಮತ್ತು ಮಳೆ ಕಾಡಲಿದೆ. ಕರಾವಳಿ ಜಿಲ್ಲೆಯಲ್ಲಿ ಮಳೆಯ ವಾತಾವರಣ ಇದ್ದರೂ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದ್ದು, ಅಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ- ಇಂದಿನ ಹವಾಮಾನ

ಬೆಂಗಳೂರು ನಗರದಲ್ಲಿ ವಸಂತ ಮಳೆ ಬಿದ್ದಾಗ ಮೂಲಸೌಕರ್ಯ ಕೊರತೆಯ ಕಾರಣ ಭಾರಿ ತೊಂದರೆ ಉಂಟಾಗಿತ್ತು. ಹೀಗಾಗಿ ಬೆಂಗಳೂರಿಗರು ಇಂದು ಮಳೆ ಬರುತ್ತಾ, ನಾಳೆ ಮಳೆ ಇದೆಯಾ ಎಂದು ಮುನ್ಸೂಚನೆ ಗಮನಿಸುವ ಪರಿಸ್ಥಿತಿ ಉಂಟಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು (ಮೇ 23) ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಬಹುದು. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಇರಬಹುದು.

ಸದ್ಯದ ಪರಿಸ್ಥಿತಿಯಲ್ಲಿ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ.

ಕರ್ನಾಟಕ ಹವಾಮಾನ ಇಂದು

ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು (ಮೇ 23) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ, ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳ ಪೈಕಿ ಬೆಳಗಾವಿ, ಧಾರವಾಡ, ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶಗಳ ಪೈಕಿ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಕರ್ನಾಟಕದಲ್ಲಿ ಮೇ 26ರವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಆಗಾಗ್ಗೆ ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಗಾಗ ಮೋಡ ಮುಸುಕಿದ ವಾತಾವರಣವಿರಲಿದ್ದು, ಚೆದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿಎಸ್ ಪಾಟೀಲ್‌ ಹೇಳಿದ್ದಾರೆ.

ನಿನ್ನೆ (ಮೇ 22) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗದಗ, ಚಿಕ್ಕಮಗ ಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಿದೆ. ಕಲಬುರಗಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೊಡಗು, ಮಂಡ್ಯ ರಾಮನಗರ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಅರಬ್ಬಿ ಸಮುದ್ರದ ಗೋವಾ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಪರಿಣಾಮ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿಎಸ್ ಪಾಟೀಲ್‌ ತಿಳಿಸಿದ್ದಾರೆ.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.