Karnataka Weather: ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ; ಫೆಬ್ರವರಿ 1ಕ್ಕೆ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ; ಫೆಬ್ರವರಿ 1ಕ್ಕೆ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

Karnataka Weather: ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ; ಫೆಬ್ರವರಿ 1ಕ್ಕೆ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

Karnataka Weather: ಬೆಂಗಳೂರು ಹವಾಮಾನ ಕೇಂದ್ರ ದೈನಂದಿನ ವರದಿಯ ಪ್ರಕಾರ, ಫೆಬ್ರವರಿ 1 ರಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜನವರಿ 28ರ ಮಂಗಳವಾರದ ಹವಾಮಾನ ನೋಡುವುದಾದರೆ ಬೆಂಗಳೂರು ಸೇರಿದಂತೆ ಕೆಲವೆಡೆ ಮುಂಜಾನೆಯ ಸಮಯದಲ್ಲಿ ದಟ್ಟ ಮಂಜು ಹಾಗೂ ಮೈ ಕೊರೆಯುವ ಚಳಿಯ ವಾತಾವರಣ ಇದೆ.

Karnataka Weather: ಜನವರಿ 28ರ ಮಂಗಳವಾರ ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ ಇದೆ. ಫೆಬ್ರವರಿ 1ಕ್ಕೆ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಕೇಂದ್ರ ನೀಡಿದೆ.
Karnataka Weather: ಜನವರಿ 28ರ ಮಂಗಳವಾರ ಬೆಂಗಳೂರು ಸೇರಿ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ ಇದೆ. ಫೆಬ್ರವರಿ 1ಕ್ಕೆ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಕೇಂದ್ರ ನೀಡಿದೆ.

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮುಂಜಾನೆಯ ಸಮಯದಲ್ಲಿ ಮೈಕೊರೆಯುವ ಚಳಿಯ ಜೊತೆಗೆ ದಟ್ಟ ಮಂಜಿನ ಪರಿಸ್ಥಿತಿ ಇದ್ದು, ಈ ವಾತಾವರಣ ಇಂದು (ಜನವರಿ 28, ಮಂಗಳವಾರ) ಕೂಡ ಮುಂದುವರಿದಿದೆ. ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ರಾಮನಗರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಮತ್ತು ಮಂಜು ಆವರಿಸಿದೆ. ದಟ್ಟ ಮಂಜಿನಿಂದ ಮಂದ ಬೆಳಕಿನ ಸಮಸ್ಯೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಇರಲಿದೆ. ನಿನ್ನೆ (ಜನವರಿ 27, ಸೋಮವಾರ) ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ. ಒಣ ಹವೆ ಮುಂದುವರಿದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ (ಜವನರಿ 28, ಮಂಗಳವಾರ) ಜನವರಿ 31ರ ಶುಕ್ರವಾರದ ವರೆಗೆ 4 ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಫೆಬ್ರವರಿ 1ರ ಶನಿವಾರ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮುಂದಿನ ಕೆಲವು ದಿನಗಳ ಮಟ್ಟಿಗೆ ಹವಾಮಾನದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ.

ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಿಲ್ಲ. ಆದರೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಮನಾರ್ಹವಾಗಿ ಇಳಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ 10.5 ಡಿಗ್ರಿ ಸೆಲ್ಸಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ದಟ್ಟ ಮಂಜು ಮತ್ತು ತೀವ್ರ ಚಳಿಯ ನಡುವೆ ಜನ ಜೀವನ ಸಾಮಾನ್ಯವಾಗಿದೆ. ಮುಂಜಾನೆಯ ಮಾರುಕಟ್ಟೆಗಳು ಎಂದಿನಂತೆ ನಡೆಯುತ್ತಿವೆ. ತರಕಾರಿ, ಹೂವು ಹಣ್ಣುಗಳನ್ನು ತಂದಿರುವ ರೈತರು ಮಾರಾಟ ಮಾಡುತ್ತಿದ್ದಾರೆ. ವ್ಯಾಪಾರಿಗಳು ಸ್ಥಳದಲ್ಲಿ ನೆರೆದಿದ್ದು ತಮಗೆ ಬೇಕಾದ ಪದಾರ್ಥಗಳನ್ನು ಖರೀದಿಸುತ್ತಿದ್ದಾರೆ. ಮುಂಜಾನೆಯಲ್ಲಿ ವಾಹನ ಸಂಚಾರವು ಸಾಮಾನ್ಯವಾಗಿದೆ. ಚಳಿಯ ನಡುವೆಯೂ ಜನರು ನಿಧಾನವಾಗಿ ರಸ್ತೆಗಿಳಿಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ವಾತಾವರಣವನ್ನು ಗಮನಿಸುವುದಾದರೆ, ಮುಖ್ಯವಾಗಿ ಮೋಡ ಇಲ್ಲದ ಆಕಾಶ ಇರಲಿದೆ, ಕೆಲವು ಪ್ರದೇಶಗಳಲ್ಲಿ ಮಂಜು ಅಥವಾ ದಟ್ಟ ಮಂಜಿನ ಪರಿಸ್ಥಿತಿ ಇರಲಿದೆ. ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 15 ಡಿಗ್ರಿ ಸಲ್ಸಿಯಸ್ ತಾಪಮಾನ ಇರುವ ನಿರೀಕ್ಷೆ ಇದೆ.

Whats_app_banner