ದಕ್ಷಿಣ ಕನ್ನಡ, ಮೈಸೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ದಿನದ ನಂತರ ಮತ್ತೆ ಮಳೆ ಮುನ್ಸೂಚನೆ: ಕಲಬುರಗಿ, ಗದಗದಲ್ಲಿ ಬಿರು ಬಿಸಿಲು
Karnataka Weather: ಕರ್ನಾಟಕದ ಕೆಲವು ಭಾಗಗಳಲ್ಲಿ ಮೂರು ದಿನ ಮಳೆಯಾಗಿ ತಂಪೆರೆದಿದೆ. ಮತ್ತೆ ಎರಡು ದಿನಗಳ ಬಳಿಕ ಭಾನುವಾರ ಮಳೆಯಾಗುವ ಮುನ್ಸೂಚನೆಯಿದೆ.

Karnataka Weather: ಕರ್ನಾಟಕದ ಕರಾವಳಿ ಭಾಗ,ಮಲೆನಾಡು ಹಾಗೂ ಹಳೆ ಮೈಸೂರು ಭಾಗದ ಜತೆಗೆ ಬೆಂಗಳೂರಿನಲ್ಲೂ ಬೇಸಿಗೆ ಮೊದಲ ಮಳೆಯಾಗಿದ್ದು. ಕೆಲವೆಡೆ ಮೂರು ದಿನ ಮಳೆಯಾಗಿದೆ. ಮತ್ತೆ ಎರಡು ದಿನಗಳ ನಂತರ ಅಂದರೆ ಮಾರ್ಚ್ 16ರಂದು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು. ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾನುವಾರ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯಿದೆ. ಇದರ ನಡುವೆ ಗುರುವಾರವೂ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗಿದ್ದು, ಬಿಸಿಲಿನಿಂದ ಬಳಲುತ್ತಿದ್ದವರಿಗೆ ನಿರಾಳತೆ ತಂದಿದೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಗದಗ, ಬಾಗಲಕೋಟೆ ಸಹಿತ ಹಲವು ಭಾಗಗಳ ಗರಿಷ್ಠ ಉಷ್ಣಾಂಶ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ಹೋಳಿ ಹಬ್ಬದ ಮೂರ್ನಾಲ್ಕು ದಿನ ಬಿಸಿಲ ಝಳ ಜೋರಾಗಿಯೇ ಇರಲಿದೆ.
ಬುಧವಾರ ಹಾಗೂ ಗುರುವಾರದಂದು ಕೆಲವು ಭಾಗಗಳಲ್ಲಿ ಮಳೆ ಚೆನ್ನಾಗಿಯೇ ಆಗಿದೆ. ಧರ್ಮಸ್ಥಳದಲ್ಲಿ ಐದು ಸೆ.ಮೀ, ದಕ್ಷಿಣ ಕನ್ನಡದ ಪಣಂಬೂರು, ಮಂಗಳೂರು, ಮಾಣಿಯಲ್ಲಿ ತಲಾ ನಾಲ್ಕು ಸೆ.ಮೀ, ಕೊಡಗಿನ ಸೋಮವಾರಪೇಟೆಯಲ್ಲಿ ಮೂರು ಸೆ.ಮೀ. ದಕ್ಷಿಣ ಕನ್ನಡದ ಪುತ್ತೂರು, ಹಾಸನದ ಅರಕಲಗೂಡು, ಬೇಲೂರು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗಿರುವ ವರದಿಯಾಗಿದೆ,
ಗುರುವಾರವೂ ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾದರೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಿತು.
ಹೇಗಿರಲಿದೆ ಹವಾಮಾನ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳ ಆಗಲಿದೆ. ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲೂ ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಭಾರೀ ವ್ಯತ್ಯಾಸವೇನೂ ಆಗದು. ಅದೇ ರೀತಿ ಕನಿಷ್ಠ ಉಷ್ಣಾಂಶದಲ್ಲೂ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಆದರೆ ಮಾರ್ಚ್ ಮೂರನೇ ವಾರದಲ್ಲಿ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರವಾಗಿ ಮಳೆಯಾಗಲಿದೆ. ಕೆಲವು ಭಾಗದಲ್ಲಿ ಗುಡುಗು ಕೂಡ ಇರಲಿದೆ ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶುಭ್ರ ಆಕಾಶ ಇರಲಿದ್ದು, ಸಂಜೆ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಬೆಂಗಳೂರಿನ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರಬಹುದು.
ಎಲ್ಲೆಲ್ಲಿ ಉಷ್ಣಾಂಶ ಹೇಗಿದೆ.
ಕರ್ನಾಟಕದ ಹಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣ ಹೀಗಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20.0 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್
ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 32.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20.4 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್
ಬೆಳಗಾವಿ ನಗರದಲ್ಲಿ ಗರಿಷ್ಠ35 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ36.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 37.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.7 ಡಿಗ್ರಿ ಸೆಲ್ಸಿಯಸ್
ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 36.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.8 ಡಿಗ್ರಿ ಸೆಲ್ಸಿಯಸ್
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಸಿಯಸ್
ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 35.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಗದಗದಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.9 ಡಿಗ್ರಿ ಸೆಲ್ಸಿಯಸ್
ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.1 ಡಿಗ್ರಿ ಸೆಲ್ಸಿಯಸ್
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23.1 ಡಿಗ್ರಿ ಸೆಲ್ಸಿಯಸ್
ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24.9 ಡಿಗ್ರಿ ಸೆಲ್ಸಿಯಸ್
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 35.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಸಿಯಸ್
ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 36.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದ ಆಗುಂಬೆಯಲ್ಲಿ ಗರಿಷ್ಠ ಉಷ್ಣಾಂಶ 36.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.7 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18.7 ಡಿಗ್ರಿ ಸೆಲ್ಸಿಯಸ್
ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 35.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.9 ಡಿಗ್ರಿ ಸೆಲ್ಸಿಯಸ್
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಹಾಸನದಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್
ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.8 ಡಿಗ್ರಿ ಸೆಲ್ಸಿಯಸ್
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್
ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 32.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.1 ಡಿಗ್ರಿ ಸೆಲ್ಸಿಯಸ್
ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15.5 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಸಿಯಸ್
