ಬೆಂಗಳೂರಿನಲ್ಲಿ ಕಡಿಮೆಯಾಯಿತು ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಗಾಳಿ ಮಳೆ; ಇಂದಿನ ಹವಾಮಾನ ವರದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನಲ್ಲಿ ಕಡಿಮೆಯಾಯಿತು ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಗಾಳಿ ಮಳೆ; ಇಂದಿನ ಹವಾಮಾನ ವರದಿ

ಬೆಂಗಳೂರಿನಲ್ಲಿ ಕಡಿಮೆಯಾಯಿತು ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಗಾಳಿ ಮಳೆ; ಇಂದಿನ ಹವಾಮಾನ ವರದಿ

ಕರ್ನಾಟಕದ ಬೆಂಗಳೂರಿನಲ್ಲಿ ಇಂದು (ಮೇ 27) ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಗಾಳಿ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಕರ್ನಾಟಕ ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನ ಹವಾಮಾನ ಹೀಗಿರಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಗಾಳಿ ಮಳೆ
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಗಾಳಿ ಮಳೆ (HT_PRINT)

ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 27) ವಿವಿಧ ಬಡಾವಣೆ ಮತ್ತು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನಲ್ಲಿ ಇಂದು ಕೂಡ ಗಾಳಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಉತ್ತರ ಕರ್ನಾಟಕದ ವಿವಿಧ ಪ್ರದೇಶ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಮಂಗಳವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕಾರವಾರ, ಹೊನ್ನಾವರ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮಳೆ ಹೆಚ್ಚಾಗಿರುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ಹವಾಮಾನ; ಮೋಡ ಕವಿದ ವಾತಾವರಣ, ಹಗುರ ಮಳೆ ಸಾಧ್ಯತೆ

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮಂಗಳವಾರ (ಮೇ 27) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆಯ ವೇಳೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸೋಮವಾರ ಸಂಜೆ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿತ್ತು.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 27) ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆ (ಮೇ 26) ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಇದೇ ರೀತಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ ವಿವರ

ಕರ್ನಾಟಕದ ಪ್ರಮುಖ ನಗರಗಳ ಇಂದು (ಮೇ 27) ಬೆಳಿಗ್ಗೆ 6.00ಕ್ಕೆ ದಾಖಲಾಗಿರುವ ತಾಪಮಾನ ಮತ್ತು ತೇವಾಂಶ ವಿವರ ಹೀಗಿದೆ.

ಬೆಂಗಳೂರು ನಗರ - ತಾಪಮಾನ 21 ಡಿಗ್ರಿ ಸೆಲ್ಶಿಯಸ್‌, ತೇವಾಂಶ ಶೇ 93

ಮಂಗಳೂರು - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 94

ಚಿತ್ರದುರ್ಗ - ತಾಪಮಾನ 22 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 85

ಗದಗ - ತಾಪಮಾನ 22.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 96

ಹೊನ್ನಾವರ - ತಾಪಮಾನ 28.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 76

ಕಲಬುರಗಿ - ತಾಪಮಾನ 23.8 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 98

ಬೆಳಗಾವಿ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 94

ಕಾರವಾರ - ತಾಪಮಾನ 27.8 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 87

ಕರ್ನಾಟಕ ಹವಾಮಾನ: ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಮೋಡ ಕವಿದ ವಾತಾವರಣ

ಕರಾವಳಿ ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕದ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದ ರೀತಿಯಲ್ಲೇ ಭಾರಿ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉಳಿದಂತೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರವೂ ಕೂಡ ಉತ್ತಮ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಮಳೆ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇರಲಿದೆ. ಕೆಲವು ಕಡೆ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಅಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಇನ್ನುಳಿದ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಗುಡುಗು ಸಹಿತ ಮಳೆ ಅಥವಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಂದಿನ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in