ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆ ಬೀಳಲಿದೆ: ಕರಾವಳಿಯಲ್ಲೂ ಮಳೆ ಸಾಧ್ಯತೆ; ಕಲಬುರಗಿಯಲ್ಲಿ ಉರಿ ಬಿಸಿಲು; ಇಂದಿನ ಹವಾಮಾನ ವರದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆ ಬೀಳಲಿದೆ: ಕರಾವಳಿಯಲ್ಲೂ ಮಳೆ ಸಾಧ್ಯತೆ; ಕಲಬುರಗಿಯಲ್ಲಿ ಉರಿ ಬಿಸಿಲು; ಇಂದಿನ ಹವಾಮಾನ ವರದಿ

ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆ ಬೀಳಲಿದೆ: ಕರಾವಳಿಯಲ್ಲೂ ಮಳೆ ಸಾಧ್ಯತೆ; ಕಲಬುರಗಿಯಲ್ಲಿ ಉರಿ ಬಿಸಿಲು; ಇಂದಿನ ಹವಾಮಾನ ವರದಿ

ಕರ್ನಾಟಕದ ಬೆಂಗಳೂರಿನಲ್ಲಿ ಇಂದು (ಮೇ 9) ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಕರ್ನಾಟಕ ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನ ಹವಾಮಾನ ಹೀಗಿರಲಿದೆ.

ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆ ಬೀಳಲಿದೆ
ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆ ಬೀಳಲಿದೆ (Pixabay)

ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 9) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲಿ ಸಂಜೆ ಮಳೆಯಾಗುವ ಸಾಧ್ಯತೆಯಿದೆ. ಮಳೆ ಕಡಿಮೆಯಾದ ಕಡೆಗೆ ತಾಪಮಾನ ಹೆಚ್ಚಳ ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಕಲಬುರಗಿಯಲ್ಲಿ ಹೆಚ್ಚಿನ ಬಿಸಿಲು ಇರಲಿದ್ದು, ಗರಿಷ್ಟ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಬೆಂಗಳೂರು ಹವಾಮಾನ; ಮೋಡ ಕವಿದ ವಾತಾವರಣ, ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 9) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 9) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆ (ಮೇ 8) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಇದೇ ರೀತಿ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

ಪ್ರಮುಖ ನಗರಗಳ ತಾಪಮಾನ ಮತ್ತು ತೇವಾಂಶ ವಿವರ

ಕರ್ನಾಟಕದ ಪ್ರಮುಖ ನಗರಗಳ ಇಂದು (ಮೇ 9) ಬೆಳಿಗ್ಗೆ 6.00ಕ್ಕೆ ದಾಖಲಾಗಿರುವ ತಾಪಮಾನ ಮತ್ತು ತೇವಾಂಶ ವಿವರ ಹೀಗಿದೆ.

ಬೆಂಗಳೂರು ನಗರ - ತಾಪಮಾನ 23.2 ಡಿಗ್ರಿ ಸೆಲ್ಶಿಯಸ್‌, ತೇವಾಂಶ ಶೇ 73

ಮಂಗಳೂರು - ತಾಪಮಾನ 25 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 78

ಚಿತ್ರದುರ್ಗ - ತಾಪಮಾನ 21.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 89

ಗದಗ - ತಾಪಮಾನ 22 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 90

ಹೊನ್ನಾವರ - ತಾಪಮಾನ 32.2 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 58

ಕಲಬುರಗಿ - ತಾಪಮಾನ 36.3 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 14

ಬೆಳಗಾವಿ - ತಾಪಮಾನ 23 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 89

ಕಾರವಾರ - ತಾಪಮಾನ 34.8 ಡಿಗ್ರಿ ಸೆಲ್ಶಿಯಸ್, ತೇವಾಂಶ ಶೇ 55

ಕರ್ನಾಟಕ ಹವಾಮಾನ; 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಕರಾವಳಿ ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕದ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉಳಿದಂತೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಕಡಿಮೆ ಇರಲಿದೆ. ಕೆಲವು ಕಡೆ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಅಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಇನ್ನುಳಿದ ಪ್ರದೇಶಗಳಲ್ಲಿ, ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಸುಡುಬಿಸಿಲು ಕಾಡಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಗುಡುಗು ಸಹಿತ ಮಳೆ ಅಥವಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಂದಿನ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in