Karnataka Weather: ದಕ್ಷಿಣ ಕನ್ನಡ, ಉಡುಪಿ ಸೇರಿ 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ದಕ್ಷಿಣ ಕನ್ನಡ, ಉಡುಪಿ ಸೇರಿ 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ

Karnataka Weather: ದಕ್ಷಿಣ ಕನ್ನಡ, ಉಡುಪಿ ಸೇರಿ 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಚಳಿ ಇದ್ದು, ಹಗಲಲ್ಲಿ ಒಣಹವೆ ಮುಂದುವರಿದಿದೆ. ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಕೆಲವಡೆ ಸಾಧಾರಣ ಮಳೆಯ ಮುನ್ಸೂಚನೆ 2024ರ ಮೊದಲ ದಿನ ಇತ್ತು. ಎರಡನೇ ದಿನವಾದ ಇಂದು (ಜ.2) ಕರ್ನಾಟಕದ ಎಷ್ಟು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು? ಹವಾಮಾನ ಇಲಾಖೆ ವರದಿಯ ವಿವರ.

ಕರ್ನಾಟಕ ಹವಾಮಾನ ಮುನ್ಸೂಚನೆ (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮುನ್ಸೂಚನೆ (ಸಾಂಕೇತಿಕ ಚಿತ್ರ) (Pixabay)

ಜನವರಿ ತಿಂಗಳಾದ ಕಾರಣ ಸೀಸನ್ ಪ್ರಕಾರ ಇದು ಚಳಿಗಾಲ. ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಹಗಲು ಹೊತ್ತಿನಲ್ಲಿ ಒಣಹವೆ ಖಾತರಿ. ರಾತ್ರಿ ಹೊತ್ತು ಕೆಲವೆಡೆ ಹೆಚ್ಚು ಚಳಿ ಇದ್ದರೆ ಉಳಿದೆಡೆ ಸಾಮಾನ್ಯ ಚಳಿ ಇದ್ದೇ ಇದೆ. ಕೆಲವು ಜಿಲ್ಲೆಗಳಲ್ಲಿ ನಸುಕಿನ ವೇಳೆ, ಮುಂಜಾನೆ ಹೊತ್ತಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಸ್ವಲ್ಪ ಚಳಿಯೂ ಅನುಭವಕ್ಕೆ ಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹವಾಮಾನ ಇಲಾಖೆ ಜನವರಿ 1ರಂದು ಮಧ್ಯಾಹ್ನ ಪ್ರಕಟಿಸಿರುವ ವರದಿ ಪ್ರಕಾರ, ಇಂದು (ಜ.2) ಬೆಳಗ್ಗೆ 8.30ರಿಂದ ಜನವರಿ 3ರ ಬೆಳಗ್ಗೆ 8.30ರ ತನಕದ ಅವಧಿಒಯಲ್ಲಿ ಕೆಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ನಿರೀಕ್ಷಿಸಬಹುದು.

ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಇರಲಿದ್ದು, ಹವಾಮಾನಕ್ಕೆ ಸಂಬಂಧಿಸಿದ ಯಾವುದೇ ಎಚ್ಚರಿಕೆಯನ್ನು ಇಲಾಖೆ ನೀಡಿಲ್ಲ.

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳನ್ನು ಗಮನಿಸಿದರೆ, ಹಾವೇರಿ ಒಂದು ಜಿಲ್ಲೆಯಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಒಣಹವೆ ಇರಲಿದೆ.

ಇದೇ ರೀತಿ, ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರಗಳಲ್ಲಿ ಒಣಹವೆ ಮುಂದುವರಿಯಲಿದೆ.

ಹೊಸ ಕ್ಯಾಲೆಂಡರ್ ವರ್ಷದ ಮೊದಲ ದಿನವಾದ ಜನವರಿ 1ರಂದು ವಿಜಯಪುರದಲ್ಲಿ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿದೆ. ವಿಜಯಪುರ, ಬೀದರ್, ಕೊಪ್ಪಳ. ಕೋಲಾರ ಭಾಗದಲ್ಲಿ ಚಳಿ ಮುಂದುವರಿಯಲಿದೆ.

ಇನ್ನು ಭೂಕಂಪದ ವಿಚಾರಕ್ಕೆ ಬಂದರೆ, ಭೂತಾನ್ ಭಾಗದಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ಹೊಂದಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

Whats_app_banner