ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ, ತೀವ್ರ ಚಳಿಗೆ ಜನ ತತ್ತರ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ, ತೀವ್ರ ಚಳಿಗೆ ಜನ ತತ್ತರ

ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ, ತೀವ್ರ ಚಳಿಗೆ ಜನ ತತ್ತರ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರ ಶುಕ್ರವಾರ ಮುಂಜಾನೆ ದಟ್ಟ ಮಂಜು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ತೀವ್ರ ಚಳಿಯಿಂದಾಗಿ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಹವಾಮಾನದ ವರದಿ ಇಲ್ಲಿದೆ.

ಜನವರಿ 3ರ ಕರ್ನಾಟಕ ಹವಾಮಾನ ವರದಿ
ಜನವರಿ 3ರ ಕರ್ನಾಟಕ ಹವಾಮಾನ ವರದಿ

ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿ ಇಂದು (ಜನವರಿ 3, ಶುಕ್ರವಾರ) ಮುಂಜಾನೆಯಿಂದಲೇ ದಟ್ಟ ಮಂಜು ಆವರಿಸಿದ್ದು, ತೀವ್ರ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಶೂನ್ಯ ಗೋಚರತೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಹೆಚ್ಚಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಯ ನಡುವೆ ನಗರದ ಮಾರುಕಟ್ಟೆಗಳಲ್ಲಿ ತರಕಾರಿ, ಹೂವು, ಹಣ್ಣಿನ ಮುಂಜಾನೆಯ ವ್ಯಾಪಾರ ವಹಿವಾಟು ಮುಂದುವರಿದಿವೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹಾಗೂ ಇತರೆ ಚಟುವಟಿಕೆಗಳಿಗೂ ಮಂಜು ಅಡ್ಡಿ ಪಡಿಸಿದೆ. ಕೆಲವೆಡೆ ಜನರು ಚಳಿಯಿಂದ ಪಾರಾಗಲು ಫೈಯರ್ ಕ್ಯಾಂಪ್ ಗಳ ಮೊರೆ ಹೋಗಿದ್ದಾರೆ. ಇನ್ನೂ ಕೆಲವರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ.

ಜನವರಿ 2ರ ಗುರುವಾರವು ದಟ್ಟ ಮಂಜಿನ ಪರಿಸ್ಥಿತಿ ಇತ್ತು. ಬೆಳಗ್ಗೆ 8 ಗಂಟೆ ವರೆಗೆ ಇದೇ ವಾತಾವರಣ ಇತ್ತು. ಆದರೆ ಇಡೀ ದಿನ ಚಳಿ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೆಂಗಳೂರು ಹವಾಮಾನ ಕೇಂದ್ರದ ದೈನಂದಿನ ವರದಿಯ ಪ್ರಕಾರ, ನಿನ್ನೆ (ಡಿಸೆಂಬರ್ 2, ಗುರುವಾರ) ರಾಜ್ಯದಲ್ಲಿ ಅತಿ ಕಡಿಮೆ ಉಷ್ಣಾಂಶ 12.5 ಡಿಗ್ರೆ ಸೆಲ್ಸಿಯಸ್ ಬೀದರ್ ನಲ್ಲಿ ದಾಖಲಾಗಿದೆ. ಮುಂದಿನ 5 ದಿನ ಅಂದರೆ ಜನವರಿ 3 ರಿಂದ 7 ರವರೆಗೆ ಮಂಜು ಮತ್ತು ಚಳಿಯ ವಾತಾವರಣ ಇರಲಿದೆ. ಕರ್ನಾಟಕದ ಯಾವುದೇ ಭಾಗದಲ್ಲಿ ಮಳೆ ಬೀಳುವ ಮುನ್ಸೂಚನೆ ಇಲ್ಲ. ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಬೆಂಗಳೂರು ಹವಾಮಾನ

ಶುಕ್ರವಾರ (ಡಿಸೆಂಬರ್ 3) ಬೆಂಗಳೂರಿನಲ್ಲಿ ಬೆಳಿಗ್ಗೆ ದಟ್ಟ ಮಂಜಿನ ಪರಿಸ್ಥಿತಿಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಆರ್ ಪುರಂ, ಬೆನ್ನಿಗಾನಹಳ್ಳಿ ಇಂದಿರಾ ನಗರ, ಆರ್ ಟಿ ನಗರ, ಹೆಬ್ಬಾಳ, ಸುಲ್ತಾನ್ ಪಾಳ್ಯ, ಮುನಿರೆಡ್ಡಿ ಪಾಳ್ಯ, ರಾಜರಾಜೇಶ್ವರಿ ನಗರ, ಕೋರಮಂಗಲ ಮತ್ತು ಎಂ.ಜಿ.ರಸ್ತೆ ಪ್ರದೇಶಗಳಲ್ಲಿ ದಟ್ಟವಾದ ಮಂಜು ಇದೆ. ವಾಹನ ಸವಾರರು ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸುತ್ತಿದ್ದ ದೃಶ್ಯಗಳು ಕಂಡ ಬಂದವು. ಇದು ಪ್ರಯಾಣಿಕರ ಕೆಲಸ ಕಾರ್ಯಗಳನ್ನು ನಿಧಾನಗೊಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ವಾತಾವರಣವನ್ನು ನೋಡುವುದಾದರೆ, ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳವರೆಗೆ ಸಾಮಾನ್ಯ ತಾಪಮಾನಕ್ಕಿಂತ ಕನಿಷ್ಠ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ. ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 15 ಡಿಗ್ರಿ ಸಲ್ಸಿಯಸ್ ತಾಪಮಾನ ಇರುವ ನಿರೀಕ್ಷೆ ಇದೆ.

---

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ.
kannada.hindustantimes.com/astrology/yearly-horoscope

Whats_app_banner