ಕರ್ನಾಟಕ ಹವಾಮಾನ; ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು

ಕರ್ನಾಟಕ ಹವಾಮಾನ; ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು

ಕರ್ನಾಟಕ ಹವಾಮಾನ; ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಮೇ 12) ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದಲ್ಲಿ ತುಸು ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಕರ್ನಾಟಕ ಹವಾಮಾನ ಮೇ 12: ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು ಕಾಣಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.  (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 12: ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು ಕಾಣಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ: ಮರಾಠವಾಡದಿಂದ ಮನ್ನಾರ್ ಕೊಲ್ಲಿ ತನಕ ವಾಯಭಾರ ಕುಸಿತ ಉಂಟಾಗಿರುವ ಕಾರಣ, ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಅಲ್ಲಲ್ಲಿ ಗುಡುಗು ಮಿಂಚು, ಸಿಡಿಲು, ಗಾಳಿ ಸಹಿತ ಮಳೆಯಾಗಬಹುದು. ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಸೇರಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಸಾಧ್ಯತೆ, ಕರಾವಳಿಯಲ್ಲಿ ಮಳೆ ತುಸು ಹೆಚ್ಚು ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕರ್ನಾಟಕದಲ್ಲಿ ಇಂದಿನ ಹವಾಮಾನ

ಕರ್ನಾಟಕದ ಮೂವತ್ತು ಜಿಲ್ಲೆಗಳ ಇಂದಿನ ಹವಾಮಾನ ಗಮನಿಸುವುದಾದರೆ, ಬಹುತೇಕ ಮಳೆಯ ವಾತಾವರಣ. ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದ ಮಳೆಯಾಗಬಹುದು. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಗುಡುಗು ಮಿಂಚು, ಸಿಡಿಲು, ಗಾಳಿ ಸಹಿತ ಮಳೆಯಾಗಬಹುದು. ಇದಲ್ಲದೆ, ಉಳಿದೆಡೆ ಒಣಹವೆ ಮುಂದುವರಿಯಲಿದ್ದು, ತಾಪಮಾನ ಹೆಚ್ಚಳವಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.

ಕರಾವಳಿ ಕರ್ನಾಟಕ ಹವಾಮಾನ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಮಧ್ಯಮ ಪ್ರಮಾಣದ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿ ಸಹಿತ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆ ಸಾಧ್ಯತೆ ಇದೆ. ಅಥವಾ ಗುಡುಗು ಸಹಿತ ಮಳೆಯಾಗಬಹುದು. ಇದಲ್ಲದೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಬೆಂಗಳೂರು ಹವಾಮಾನ ಇಂದು

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಗುಡುಗು ಸಹಿತ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ವಿವರಿಸಿದೆ.

ನಾಳೆಯ ಹವಾಮಾನ

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ, ನಾಳೆಯೂ ಇದೇ ರೀತಿ ಹವಾಮಾನ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾದರೆ, ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.