ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ-karnataka weather rain in bengaluru and near districts heatwave conditions in parts of karnataka rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡಿನ ಉತ್ತರ ಒಳನಾಡು, ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ದಕ್ಷಿಣ ರಾಯಲಸೀಮಾದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಆದರೆ ಕರ್ನಾಟಕ ಉತ್ತರ ಒಳನಾಡಿನಲ್ಲಿ ಮತ್ತಷ್ಟು ತಾಪಮಾನದ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಸುತ್ತ ಮುತ್ತ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಿದ್ದರೆ ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರು, ಸುತ್ತ ಮುತ್ತ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಿದ್ದರೆ ಕರಾವಳಿ, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ.

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು (Karnataka Weather Update), ತಮಿಳುನಾಡಿನ ಉತ್ತರ ಒಳನಾಡು, ಆಂಧ್ರಪ್ರದೇಶದ ಉತ್ತರ ಕರಾವಳಿ ಹಾಗೂ ದಕ್ಷಿಣ ರಾಯಲಸೀಮಾದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮೇ 7ರ ಮಂಗಳವಾರ ಕರ್ನಾಟಕದ ಉತ್ತರ ಒಳನಾಡಿನ ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಮೇ 6ರ ಸೋಮವಾರ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಬಿಸಿಗಾಳಿಯ ವಾತಾವರಣ ಇರಲಿದೆ ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಅನೇಕ ಭಾಗಗಳು ಪ್ರಸ್ತುತ ತೀವ್ರ ಶಾಖದ (Heatwave) ಪರಿಸ್ಥಿತಿ ಇದೆ. ಮುಂದಿನ ಎರಡು ದಿನಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ಬಿಸಿಗಾಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಭಾನುವಾರ (ಮೇ 5) ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇದೇ ರೀತಿಯ ಪರಿಸ್ಥಿತಿ ನಿರೀಕ್ಷಿಸಲಾಗಿದೆ.

ಕರ್ನಾಟಕದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.

ಶಾಖಾಘಾತದಿಂದ ಪಾರಾಗಲು ಮಧ್ಯಾಹ್ನ 12.00 ರಿಂದ 3.00 ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಆಗಾಗ್ಗೆ ನೀರು ಕುಡಿಯುವ ಮೂಲಕ ಹೈಡ್ರೇಟ್ ಆಗಿರಬೇಕು. ಹಗುರವಾದ ತಿಳಿ ಬಣ್ಣದ, ಸಡಿಲವಾದ ಹಾಗೂ ಹತ್ತಿ ಬಟ್ಟೆಗಳನ್ನು ಧರಿಸುವುದು, ಹೊರಾಂಗಣದಲ್ಲಿದ್ದಾಗ ರಕ್ಷಣಾತ್ಮಕ ಕಣ್ಣಿನ ಉಡುಪು, ಛತ್ರಿ / ಟೋಪಿ, ಪಾದರಕ್ಷೆಗಳನ್ನು ಬಳಸುವುದು ಹಾಗೂ ನಿರ್ಜಲೀಕರಣಕ್ಕೆ ಕಾರಣವಾಗುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ತಪ್ಪಿಸುವುದು ಮುಂತಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಐಎಂಡಿ ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದೆ.

ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

ಮೇ 3ರ ಶುಕ್ರವಾರ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ನಗರದಲ್ಲಿ (Bengaluru Rain) ಶುಕ್ರವಾರ (ಮೇ 3) ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಸುಡುವ ಶಾಖ ಮತ್ತು ಹೆಚ್ಚಿನ ತಾಪಮಾನದಿಂದ ಕಂಗಾಲಾಗಿದ್ದ ನಗರದ ಜನ ಮಳೆ ಸಂತಸಗೊಂಡರು. ಸಾಮಾಜಿಕ ಜಾಲತಾಣಗಳಲ್ಲಿ ಮಳೆಯ ವಿಡಿಯೊಗಳನ್ನು ಹಂಚಿಕೊಂಡು ಸಂಭ್ರಮಿಸಿದರು.

ಕೆಲವರು ಮಳೆಯಲ್ಲಿ ನಿಂತು ಖುಷಿ ಪಟ್ಟಿದ್ದಾರೆ. ದಿಢೀರ್ ಅಂತ ಬಂದ ಮಳೆಯಿಂದ ವಾಹನ ಸವಾರರು ಪದಾಡುವಂತಾಯಿತು. "6 ತಿಂಗಳ ನಿರೀಕ್ಷೆಯ ನಂತರ, ಬೆಂಗಳೂರಿನಲ್ಲಿ ಅಂತಿಮವಾಗಿ ವರುಣ ದೇವ ಕೃಪೆ ತೋರಿದ. ಇದು ಸುಡುವ ಬೇಸಿಗೆಯ ಶಾಖದಿಂದ ಪರಿಹಾರವನ್ನು ತಂದಿದೆ. ಕ್ಯಾಂಪಸ್‌ನಲ್ಲಿದ್ದ ನಮ್ಮ ಸ್ವಯಂಸೇವಕರು ತಮ್ಮ ಸಂತೋಷವನ್ನು ತಡೆಯಲಾಗದೆ ಮಳೆಯನ್ನು ಅಪ್ಪಿಕೊಂಡರು, ಉಲ್ಲಾಸದಾಯಕ ಮಳೆಯನ್ನು ಆನಂದಿಸಿದರು. ಇದು ವಿಶ್ರಾಂತಿ ಮತ್ತು ಭರವಸೆಯ ಹೃದಯಸ್ಪರ್ಶಿ ಕ್ಷಣವಾಗಿತ್ತು, ಇದು ಪ್ರಕೃತಿಯ ನವೀಕರಣ ಮತ್ತು ಮುಂದಿನ ತಂಪಾದ ದಿನಗಳ ಭರವಸೆಯನ್ನು ಸಂಕೇತಿಸುತ್ತದೆ " ಎಂದು ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಸೆಂಟರ್ ಸ್ವಯಂಸೇವಕರು ಮಳೆಯಲ್ಲಿ ನೆನೆಯುತ್ತಿರುವ ವಿಡಿಯೊವನ್ನು ಹಂಚಿಕೊಂಡು ಮಾಹಿತಿ ನೀಡಿದರು.