ಕರ್ನಾಟಕ ಹವಾಮಾನ ಇಂದು: ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಭಾಗಶಃ ಮೋಡ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಇಂದು: ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಭಾಗಶಃ ಮೋಡ

ಕರ್ನಾಟಕ ಹವಾಮಾನ ಇಂದು: ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಭಾಗಶಃ ಮೋಡ

Karnataka Weather Today: ಮಕರ ಸಂಕ್ರಾಂತಿಯ ದಿನವಾದ ಇಂದು (ಜನವರಿ 14) ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು ಎಂದು ಕರ್ನಾಟಕ ಹವಾಮಾನ ಮುನ್ಸೂಚನೆ ವರದಿಯಲ್ಲಿ ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.

ಕರ್ನಾಟಕ ಹವಾಮಾನ ಇಂದು: ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವಣರ ಇರಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಇಂದು: ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವಣರ ಇರಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ. (ಸಾಂಕೇತಿಕ ಚಿತ್ರ) (Pixabay)

Karnataka Weather Today: ಕರ್ನಾಟಕದ ಉದ್ದಗಲಕ್ಕೂ ಇಂದು (ಜನವರಿ 14) ಮಕರ ಸಂಕ್ರಾಂತಿಯ ಸಡಗರ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಆದರೆ ಇದು ಇಡೀ ಜಿಲ್ಲೆಯಲ್ಲಿ ಸುರಿಯಲ್ಲಿ. ಒಂದೆರಡು ಕಡೆ ಹಗುರ ಮಳೆಯಾಗಬಹುದು. ಅದೇ ರೀತಿ, ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಬಹುದು. ಒಟ್ಟಾರೆಯಾಗಿ ರಾಜ್ಯದಲ್ಲಿ ಚಳಿಗಾಲದ ಒಣಹವೆ ಮುಂದುವರಿಯಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಇಂದು; ಭಾಗಶಃ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಜನವರಿ 14) ಭಾಗಶಃ ಮೋಡ ಕವಿದ ವಾತಾವರಣ ಕೆಲವು ಕಡೆಗಳಲ್ಲಿ ಕಂಡುಬರಬಹುದು. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನವರಿ ತಿಂಗಳ ಸರಾಸರಿಗೆ ಹೋಲಿಸಿದರೆ ಕನಿಷ್ಠ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳುತ್ತಿದೆ. ಆದಾಗ್ಯೂ, ಬೆಳಗಿನ ಜಾವದಲ್ಲಿ ಬೆಂಗಳೂರು ನಗರದಲ್ಲಿ ಚಳಿಯ ಪ್ರಭಾವ ಜೋರಿದೆ. ಹೊರಗಡೆ ಹೋಗುವುದು ಅಸಾಧ್ಯ ಎನ್ನುವಷ್ಟು ಶೀತಗಾಳಿ ಬೀಸುತ್ತಿರುತ್ತದೆ.

ಮಕರ ಸಂಕ್ರಾಂತಿ ದಿನದಂದು ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಅತಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯವಾಗಿ ಏರಲು ಪ್ರಾರಂಭಿಸುತ್ತದೆ. ಬೆಂಗಳೂರಿನ ಮಹಾದೇವಪುರ ವಲಯದ ರಾಮಮೂರ್ತಿ ನಗರದಲ್ಲಿ ಸೋಮವಾರ ಮಧ್ಯಾಹ್ನಕ್ಕೆ ಅನ್ವಯಿಸುವಂತೆ ಕಳೆದ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ 17.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕಳೆದ ಎರಡು ಮೂರು ದಿನಗಳಲ್ಲಿ, ಶನಿವಾರದಿಂದ ಆರಂಭಗೊಂಡು, ಬೆಂಗಳೂರು ಸಾಮಾನ್ಯ ಜನವರಿ ಸರಾಸರಿ 15.8 ಡಿಗ್ರಿ ಸೆಲ್ಸಿಯಸ್‌ಗೆ ಹೋಲಿಸಿದರೆ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಭಾನುವಾರದಂದು, ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ, ಇದು ವರ್ಷದ ಈ ಸಮಯದ ಸಾಮಾನ್ಯ ಮಟ್ಟಕ್ಕಿಂತ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಶಿಯಸ್ ಇರಬಹುದು. ಬೆಂಗಳೂರು ನಗರದಲ್ಲಿ ನಿನ್ನೆ (ಜನವರಿ 13) ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು. ಬೆಂಗಳೂರು ಗ್ರಾಮಾಂತರದಲ್ಲಿ ನಿನ್ನೆ (ಜನವರಿ 13) ಗರಿಷ್ಠ ತಾಪಮಾನ 31.1 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 19.7 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜವೇಲ್‌ ಮಣಿಕ್ಕಂ ತಿಳಿಸಿದ್ದಾರೆ.

ಕರ್ನಾಟಕ ಹವಾಮಾನ ಇಂದು; ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇಂದು (ಜನವರಿ 14) ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಕೆಲವು ಕಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದಲ್ಲಿ ಚಳಿ ಕಡಿಮೆಯಾಗಲಿದ್ದು, ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ.

ಮಕರ ಸಂಕ್ರಾಂತಿಗೆ ಮಳೆ ಎಲ್ಲೆಲ್ಲಿ: ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು

ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಕಂಡುಬಂದಿದೆ. ಇದು ಈ ಪ್ರದೇಶದಲ್ಲಿ ಮೋಡ ಕವಿದ ವಾತಾವರಣಕ್ಕೆ ಕಾರಣವಾಗುತ್ತದೆ. ಹೆಚ್ಚುವರಿಯಾಗಿ, ತಾಪಮಾನದ ಮುನ್ಸೂಚನೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕನಿಷ್ಠ ತಾಪಮಾನದ ಏರಿಕೆಯನ್ನು ಸೂಚಿಸುತ್ತದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಪ್ರಕಟಿಸಿದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

Whats_app_banner