ಕನ್ನಡ ಸುದ್ದಿ  /  Karnataka  /  Karnataka Weather Rain Will Occur May 28 In Some Parts Of South Interior Karnataka Including Bangalore And Coastal Rmy

Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಕರಾವಳಿಯ ಕೆಲವು ಕಡೆ ಇಂದು ಗುಡುಗು ಸಹಿತ ಮಳೆ ಸಂಭವ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಕರ್ನಾಟಕದಲ್ಲಿ (Karnataka Rain) ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ವರುಣ ಅಬ್ಬರಿಸುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು (Bangalore) ಸೇರಿದಂತೆ ದಕ್ಷಿಣ ಒಳನಾಡು (South Interior Karnataka) ಹಾಗೂ ಕರಾವಳಿಯ (Coastal) ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ನಗರದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರೆಡು ಕಡೆಗಳಲ್ಲಿ ನಿನ್ನೆ (ಮೇ 27, ಶನಿವಾರ) ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ವಿಜಯಪು ಜಿಲ್ಲೆಯ ದೇವರಹಿಪ್ಪರಿಗೆಯಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಉಡುಪಿಯ ಕೂಟದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬಿಸಿ ಕಡಿಮೆಯಾಗುತ್ತಿದ್ದು, ಉಷ್ಣಾಂಶದಲ್ಲಿ ಕೊಂಚ ತಗ್ಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅಂದರೆ ಮೈನಸ್ 1.5 ರಿಂದ -3ಕ್ಕೆ ಕಡಿಮೆಯಾಗಿದೆ. ಉಳಿದಂತೆ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿಯೇ ಇದೆ. ಈಭಾಗದಲ್ಲಿ ಮೈನಸ್ 1.5ರಲ್ಲಿ ಇದೆ. ಆದರೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಗಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ರಾಯಚೂರಿನಲ್ಲಿ ಗರಿಷ್ಠ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ನಾಳೆ (ಮೇ 29, ಸೋಮವಾರ) ವರೆಗೆ ವರುಣ ಅಬ್ಬರಿಸಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶವು ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಅಂತ ಹೇಳಿದೆ.

ನಾಳೆ ಬೆಂಗಳೂರಿನ ವಾತಾವರಣ ಹೇಗಿದೆ?

ಬೆಂಗಳೂರು ನಗರದಲ್ಲಿ ನಾಳೆ ಕೂಡ (ಮೇ 29, ಸೋಮವಾರ) ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ನಗರದ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಬವ ಇದೆ. ಉದ್ಯಾನ ನಗರಿಯಲ್ಲಿ ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯನಸ್ ದಾಖಲಾಗುವ ಸಾದ್ಯತೆ ಇದೆ ಎಂದು ಹೇಳಿದೆ.

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಅಂದರೆ ಮೇ 30 ರಿಂದ 31ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

IPL_Entry_Point

ವಿಭಾಗ