ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರ್ನಾಟಕದಲ್ಲಿ ನಾಳೆಯಿಂದ ಎರಡು ದಿನ ಗುಡುಗು ಸಹಿತ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Karnataka Rains: ಕರ್ನಾಟಕದಲ್ಲಿ ನಾಳೆಯಿಂದ ಎರಡು ದಿನ ಗುಡುಗು ಸಹಿತ ಮಳೆ, ಯಲ್ಲೋ ಅಲರ್ಟ್‌ ಘೋಷಣೆ

Weather Updates ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಎರಡುದಿನ ಗುಡುಗು, ಸಿಡಿಲಿನ ಕಾರಣಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಮಳೆಯಿದೆ.
ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಮಳೆಯಿದೆ.

ಬೆಂಗಳೂರು: ಕರ್ನಾಟಕದಲ್ಲಿ ಒಂದು ವಾರದಿಂದಲೂ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಏಪ್ರಿಲ್‌ 18–19ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಹಲವು ಜಿಲ್ಲೆಗಳಲ್ಲು ಗುಡುಗು ಹಾಗೂ ಸಿಡಿಲಿನ ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಈ ಕಾರಣದಿಂದ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಎರಡು ದಿನವೂ ಯಲ್ಲೋ ಅಲರ್ಟ್‌ ಅನ್ನು ಘೋಷಿಸಲಾಗಿದ. ಗುರುವಾರ ಹಾಗೂ ಶುಕ್ರವಾರದಂದು ಗುಡುಗು ಸಿಡಿಲು ಸಹಿತ ಮಳೆ ಇರುವುದರಿಂದ ಜನತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಏಪ್ರಿಲ್‌ 18ರಿಂದ ನಾಲ್ಕು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯು ಗಂಟೆಗೆ ೆ 30-40 ಕಿ.ಮಿ ವೇಗದ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಹಾಗೂ ರಭಸದಿಮದ ಕೂಡಿರುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದಲ್ಲದೇ ಏಪ್ರಿಲ್‌ 19ರ ಶುಕ್ರವಾರದಂದು ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಒಂದೆರಡು ಕಡಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಏಪ್ರಿಲ್‌ 18ರ ಗುರುವಾರ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯ ನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಏಪ್ರಿಲ್‌ 19 ರ ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ. ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರುಮ ರಾಮನರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಬೀದರ್‌, ಗದಗ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇದಲ್ಲದೇ ಏಪ್ರಿಲ್‌ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರುಮ ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು.

ಏಪ್ರಿಲ್‌ 21ರಂದು ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಏಪ್ರಿಲ್‌ 22ರಂದು ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಹಾಗೂ ಏಪ್ರಿಲ್‌ 23ರಂದು ಬಾಗಲಕೋಟೆ,ಬೆಳಗಾವಿ,ಬೀದರ್‌, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು.

IPL_Entry_Point