ಹವಾಮಾನ ವರದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಬೆಂಗಳೂರಿನ ವಾತಾವರಣ ಹೇಗಿರಲಿದೆ ನೋಡಿ
ಕನ್ನಡ ಸುದ್ದಿ  /  ಕರ್ನಾಟಕ  /  ಹವಾಮಾನ ವರದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಬೆಂಗಳೂರಿನ ವಾತಾವರಣ ಹೇಗಿರಲಿದೆ ನೋಡಿ

ಹವಾಮಾನ ವರದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಬೆಂಗಳೂರಿನ ವಾತಾವರಣ ಹೇಗಿರಲಿದೆ ನೋಡಿ

ಹವಾಮಾನ ವರದಿಯ ಪ್ರಕಾರ ಇಂದು ಏಪ್ರಿಲ್ 16ರಂದು ವಾತಾವರಣ ಹೇಗಿರಲಿದೆ ಎಂದು ತಿಳಿದುಕೊಳ್ಳಿ. ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇರಲಿದ್ದು, ಬೆಂಗಳೂರಿನಲ್ಲಿ ಮೋದ ಕವಿದ ವಾತಾವರಣ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ (ಸಂಗ್ರಹ ಚಿತ್ರ - PTI)

ಹವಾಮಾನ ವರದಿಯ ಪ್ರಕಾರ ಇಂದು ಏಪ್ರಿಲ್ 16ರಂದು ವಾತಾವರಣ ಹೇಗಿರಲಿದೆ ಎಂಬುದನ್ನು ನಾವಿಲ್ಲಿ ನೀಡಿದ್ದೇವೆ. ಇಂದು ಏಪ್ರಿಲ್ 16ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಏಪ್ರಿಲ್ 16: ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 23 ಡಿಗ್ರಿ ಸೆಲ್ಸಿಯಸ್ ಮತ್ತು 32 ಡಿಗ್ರಿ ಸೆಲ್ಸಿಯಸ್ ಇರುವ ಮೋಡ ಕವಿದ ವಾತಾವರಣವಿರಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಕರಾವಳಿಯಲ್ಲಿ ಹೇಗಿರಲಿದೆ ವಾತಾವರಣ?

ಕರಾವಳಿಯಲ್ಲಿ ಮಳೆ ಕಾಣಿಸಿಕೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹಗುರ ಮಳೆ ಬೀಳಲಿದೆ. ಇದರ ಜತೆಗೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ತೀವ್ರ ಶಾಖದ ಅಲೆಯೂ ಇರಲಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆ ಬರುವ ಮುನ್ಸೂಚನೆ ಇದೆ. ಆದರೆ ಉಳಿದ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ ಈ ಎಲ್ಲಾ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಎಲ್ಲೆಡೆಯೂ ಹಗುರ ಮಳೆಯಾಗಲಿದೆ.

Suma Gaonkar

eMail
Whats_app_banner