ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಟ್ಟ ಮಂಜು, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ಡಿ. 17 ರಿಂದ ಮತ್ತೆ ಮಳೆ ಸಾಧ್ಯತೆ
Karnataka Weather Today: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಬಹುತೇಕ ಕಡೆ ಮಳೆಯಾಗುತ್ತಿದೆ. ಜೊತೆಗೆ ದಟ್ಟ ಮಂಜು ಆವರಿಸಿದ್ದು ಚಳಿ ಕೂಡಾ ಹೆಚ್ಚಾಗಿದೆ. ವಿಜಯಪುರದಲ್ಲಿ ಶುಕ್ರವಾರ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು ಡಿಸೆಂಬರ್ 17 ರಿಂದ ರಾಜ್ಯಾದ್ಯಂತ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಚಳಿ ಆವರಿಸಿದೆ, ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೂಡಾ ಶುರುವಾಗಿದೆ. ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಇಂದು ಬೆಳಗ್ಗೆ 06:33ಕ್ಕೆ ಸೂರ್ಯೋದಯವಾಗಿದ್ದು 05:55ಕ್ಕೆ ಸೂರ್ಯಾಸ್ತವಾಗಲಿದೆ. ಶುಕ್ರವಾರ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 13.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ. ಇಂದು ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಾಂಶ 20 ಡಿ.ಸೆ ದಾಖಲಾಗಿದೆ. ಡಿಸೆಂಬರ್ 14, ಶನಿವಾರ ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ? ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ ನೋಡೋಣ.
ಎಲ್ಲೆಲ್ಲಿ ಮಳೆಯಾಗಿದೆ?
ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿದ್ದು,ಕೆಲವೊಂದು ಸ್ಥಳಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕ ಉತ್ತರ ಒಳನಾಡಿನಲ್ಲಿ ಒಣ ಹವಾಮಾನವಿದೆ. ಶುಕ್ರವಾರ ಕೋಲಾರದ ಪಿಡಬ್ಲ್ಯೂಡಿಯಲ್ಲಿ 2 ಸೆಮೀ, ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ 2 ಸೆಮೀ, ಕೋಲಾರದ ರಾಯಲ್ಪಾಡು, ಚಿಕ್ಕಬಳ್ಳಾಪುರದ ಚಿಂತಾಮಣಿ, ಬೆಂಗಳೂರಿನ ಹೆಸರಘಟ್ಟದಲ್ಲಿ ತಲಾ 1 ಸೆಮೀನಷ್ಟು ಮಳೆಯಾಗಿದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದ ವಿವಿಧ ಕಡೆ ಲಘು ಮಳೆಯಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 13 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ. ಇಂದು ದಕ್ಷಿಣ ಒಳ ಕರ್ನಾಟಕದಲ್ಲಿ ದಟ್ಟ ಮಂಜು ಆವರಿಸಲಿದ್ದು ಚಳಿ ಇನ್ನಷ್ಟು ಹೆಚ್ಚಾಗಲಿದೆ. ಭಾನುವಾರ ಕೂಡಾ ಇದೇ ವಾತಾವರಣ ಮುಂದುವರೆಯಲಿದೆ.
ಡಿಸೆಂಬರ್ 17 ರಂದು ಕೊಡುಗು, ಮೈಸೂರು, ಚಾಮರಾಜನಗರ, ಮಂಡ್ಯ , ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಹಾಸನದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು, ಅವಳಿ ನಗರ, ಮೈಸೂರು ನಗರಗಳ ವಾತಾವರಣ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 25 ಡಿ.ಸೆ ಹಾಗೂ 18 ಡಿ.ಸೆ ಆಗಿರಬಹುದು. ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಹಾಗೂ ಕನಿಷ್ಠ 16 ಡಿ.ಸೆ, ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಹಾಗೂ ಕನಿಷ್ಠ 17 ಡಿ.ಸೆ ಇರಲಿದೆ.
ರಾಜ್ಯದ ಇತರ ನಗರಗಳ ಇಂದಿನ ಗರಿಷ್ಠ, ಕನಿಷ್ಠ ತಾಪಮಾನ
ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್. ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಹಾಸನದಲ್ಲಿ ಗರಿಷ್ಠ ತಾಪಮಾನ 26, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 25, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಕೋಲಾರದಲ್ಲಿ ಗರಿಷ್ಠ ತಾಪಮಾನ 25, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ತುಮಕೂರಿನಲ್ಲಿ ಗರಿಷ್ಠ ತಾಪಮಾನ 26, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಉಡುಪಿಯಲ್ಲಿ ಗರಿಷ್ಠ ತಾಪಮಾನ 33, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 24, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಗರಿಷ್ಠ ತಾಪಮಾನ 27, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 29, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 28, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ಇರಲಿದೆ.