ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಇಂದು ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Karnataka Weather: ಇಂದು ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Karnataka Weather: ರಾಜ್ಯದ ಹಲವೆಡೆ ಇಂದು ಸಾಧಾರಣ/ಗುಡುಗು ಸಹಿತ ಮಳೆ ಆಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಇಂದು ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರ್ನಾಟಕ ಹವಾಮಾನ ಜೂನ್‌ 21: ಇಂದು ಬೆಳಗ್ಗೆ 05:55ಕ್ಕೆ ಸೂರ್ಯೂದಯವಾಗಿದ್ದು ಸಂಜೆ 6:48 ಕ್ಕೆ ಸೂರ್ಯಾಸ್ತವಾಗಲಿದೆ. 5:22 ಕ್ಕೆ ಚಂದ್ರೋಯವಾಗಲಿದ್ದು 04:02ಕ್ಕೆ ಚಂದ್ರ ಮುಳುಗಲಿದ್ದಾನೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ರಾಜ್ಯ ರಾಜಧಾನಿ ಬೆಂಗಳೂರಿನ ವಾತಾವರಣ 22ಡಿಗ್ರಿ ಸೆಲ್ಸಿಯಸ್‌ ಇರಲಿದೆ. ನಿನ್ನೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಆಗಿದ್ದು, ಇಂದು ಯಾವ ಯಾವ ಸ್ಥಳಗಳಲ್ಲಿ ಮಳೆ ಆಗಲಿದೆ ನೋಡೋಣ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆ ಆಯ್ತು?

ನಿನ್ನೆ ಕೊಟ್ಟಿಗೆಹಾರದಲ್ಲಿ 5 ಸೆಮೀ ಮಳೆ ಆಗಿದೆ.ಕೋಟ, ಕುಂದಾಪುರ, ಗೋರ್ಸೊಪ್ಪ, ಧರ್ಮಸ್ಥಳದಲ್ಲಿ ತಲಾ 4 ಸೆಮೀ, ಆಗುಂಬೆ, ಕಮ್ಮರಡಿ, ಕಾರ್ಕಳದಲ್ಲಿ ತಲಾ 3 ಸೆಮೀ, ಕೊಲ್ಲೂರು, ಸಿದ್ದಾಪುರ, ಕಾರವಾರ, ಹೊನ್ನಾವರ, ಬೆಳ್ತಂಗಡಿ, ಮೂಡಿಗೆರೆ, ಶೃಂಗೇರಿ, ಕೃಷ್ಣರಾಜಸಾಗರ, ಭಾಗಮಂಡಲ, ತಿಪಟೂರಿಲ್ಲಿ ತಲಾ 2 ಸೆಮೀ, ಮಣಿ, ಮೂಲ್ಕಿ, ಉಪ್ಪಿನಂಗಡಿ, ಕೊಪ್ಪ, ಜಯಪುರ, ನಾಪೋಕ್ಲು, ಕಳಸ, ಅಜ್ಜಂಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಮೀ ಮಳೆ ಆಗಿದೆ.

ಟ್ರೆಂಡಿಂಗ್​ ಸುದ್ದಿ

ಇಂದು ಎಲ್ಲಿ ಮಳೆ ಆಗಲಿದೆ, ಯಾವ ಸ್ಥಳದಲ್ಲಿ ಎಚ್ಚರಿಕೆ ಅಗತ್ಯ?

ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ಮೈಸೂರು ಜಿಲ್ಲೆಯ ಹಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಅಲರ್ಟ್‌

ಹವಾಮಾನ ಇಲಾಖೆಯು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಚಂಡಮಾರುತದ ಹವಾಮಾನವು ಗಂಟೆಗೆ 35 ರಿಂದ 45 ಕಿಮೀ ವೆೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನ ವಾತಾವರಣ

ಸಾಮಾನ್ಯವಾಗಿ ಮೋಡ ಕವಿದ ಆಕಾಶವಿದ್ದು ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 31°ಸೆ ಮ್ತುು 22°ಸೆ ಆಗಿರಬಹುದು. ಮುಂದಿನ 48 ಗಂಟೆ ಕೂಡಾ ಇದೇ ವಾತಾವರಣ ಮುಂದುವರೆಯಲಿದೆ.

ಇಂದು ಪ್ರಮುಖ ನಗರಗಳ ವಾತಾವರಣ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 21) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನ ವಿವರ.

ಬೆಂಗಳೂರು - 23.4°ಸೆ.

ಮಂಗಳೂರು- 23°ಸೆ.

ಚಿತ್ರದುರ್ಗ- 23°ಸೆ.

ಗದಗ- 22.6°ಸೆ.

ಹೊನ್ನಾವರ- 26.4°ಸೆ.

ಕಲಬುರ್ಗಿ- 24.6°ಸೆ.

ಬೆಳಗಾವಿ- 22°ಸೆ.

ಕಾರವಾರ- 30.6°ಸೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ