ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಇಂದು ಉಡುಪಿ, ಮಂಡ್ಯ, ತುಮಕೂರಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಇಂದು ಉಡುಪಿ, ಮಂಡ್ಯ, ತುಮಕೂರಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕಳೆದ ಕೆಲವು ದಿನಗಳಿಂದ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಕೆಲವೆಡೆ ಒಣಹವೆ ಮುಂದುವರೆದಿದೆ. ಜೂನ್‌ 5 ರಂದು ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಜೂನ್‌ 6 ಹಾಗೂ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಯಾವ ಪ್ರದೇಶಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಆಗಲಿದೆ? ಇಲ್ಲಿದೆ ಮಾಹಿತಿ.

ಕರ್ನಾಟಕ ಹವಾಮಾನ
ಕರ್ನಾಟಕ ಹವಾಮಾನ (PC: Canva)

ಲೋಕಸಭೆ ಚುನಾವಣೆ ಕಾವು ಕಡಿಮೆ ಆಗಿದೆ. ಈ ನಡುವೆ ಎಲ್ಲಡೆ ವಾತಾವರಣ ನಿಧಾನವಾಗಿ ತಣ್ಣಗಾಗುತ್ತಿದೆ. ರಾಜ್ಯದ ಕೆಲವೆಡೆ ಇನ್ನೂ ಸೆಕೆ ಮುಂದುವರೆದರೆ ಬಹಳಷ್ಟು ಕಡೆ ಮಳೆಯು, ವಾತಾವರಣವನ್ನು ತಂಪಾಗಿಸುತ್ತಿದೆ. ಜೂನ್‌ 6, ಗುರುವಾರ ರಾಜ್ಯದಲ್ಲಿ ವಾತಾವರಣ ಹೇಗಿದೆ. ಮುಂದಿನ 24 ಗಂಟೆಗಳಲ್ಲಿ ಹವಾಮಾನ ಯಾವ ರೀತಿ ಇರಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯೇನು? ಇಲ್ಲಿದೆ ಮಾಹಿತಿ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಜೂನ್‌ 5 ಬುಧವಾರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ 7 ಸೆ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಸೇಡಬಾಳದಲ್ಲಿ 7 ಸೆ.ಮೀ ಮಳೆ ಆಗಿದೆ. ಜೊತೆಗೆ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ 6 ಸೆಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ 6 ಸೆಮೀ, ಬೆಳಗಾವಿಯ ಚಿಕ್ಕೋಡಿಯಲ್ಲಿ 5 ಸೆಮೀ, ಕೋಲಾರದಲ್ಲಿ 4 ಸೆಮೀ, ಬಾಗಲಕೋಟೆಯ ರಬಕವಿಯಲ್ಲಿ 3 ಸೆಮೀ, ಬೆಳಗಾವಿಯ ಸಂಕೇಶ್ವರದಲ್ಲಿ 3 ಸೆಮೀ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ 2 ಸೆಮೀ, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ 1 ಸೆಮೀ ಮಳೆ ಆಗಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಅತ್ಯಂತ ಗಮನಾಹರ್ವಾಗಿ ಉಷ್ಣಾಂಶ ಇಳಿಕೆ ಆಗಿದೆ. ರಾಜ್ಯದ ಅತಿ ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ ದಾಖಲಾಗಿದೆ.

ಜೂನ್‌ 6ರ ಮಳೆಯ ಮುನ್ಸೂಚನೆ

ಜೂನ್‌ 6, ಗುರುವಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೆೇರ, ಕೊಪ್ಪಳ, ರಾಯಚೂರು ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಹವಾಮಾನ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೆೇಶಗಳಲ್ಲಿ ಸಾಮಾನಯವಾಗಿ ಮೋಡ ಕವಿದ ಆಕಾಶವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32 ° ಸೆ ಹಾಗೂ ಕನಿಷ್ಠ ತಾಪಮಾನ 23 ° ಸೆ ಇರಲಿದೆ. ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32 °ಸೆ ಹಾಗೂ ಕನಿಷ್ಠ ತಾಪಮಾನ 23 ° ಸೆ ಇರಲಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ.

ಟಿ20 ವರ್ಲ್ಡ್‌ಕಪ್ 2024

ವಿಭಾಗ