ಕರ್ನಾಟಕ ಹವಾಮಾನ: ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka Weather: ಬೆಂಗಳೂರು, ಮೈಸೂರು, ಮಂಡ್ಯ, ಶಿವಮೊಗ್ಗ ಸೇರಿದಂತೆ ಇಂದು ( ಜೂ. 7) ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಗುರುವಾರ ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ಕಲಬುರ್ಗಿಯಲ್ಲಿ ದಾಖಲಾಗಿದ್ದು ನಂತರ ಜಿಲ್ಲೆಯಲ್ಲಿ 7 ಸೆಮೀ ಮಳೆ ಆಗಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ? ಇಲ್ಲಿದೆ ವಿವರ.
ರಾಜ್ಯಾದ್ಯಂತ ಮಳೆ ಆಗುತ್ತಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದ್ದ ಕಲಬುರಗಿಯಲ್ಲಿ ಜೂನ್ 6, ಗುರುವಾರದಂದು 7 ಸೆಮೀನಷ್ಟು ಮಳೆ ಆಗಿದೆ. ವಿವಿಧ ಜಿಲ್ಲೆಗಳಲ್ಲಿ ವಾತಾವಣ ಹೇಗಿದೆ? ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆ ಆಗಿದೆ? ಜೂನ್ 8 ಹಾಗೂ ಮುಂದಿನ 48 ದಿನಗಳಲ್ಲಿ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ.
ಎಲ್ಲೆಲ್ಲಿ ಮಳೆ ಆಯ್ತು?
ಕಲಬುರಗಿಯಲ್ಲಿ 7 ಸೆಮೀ ಮಳೆ ಆದರೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ 6 ಸೆಮೀ, ಬೀದರ್ ಜಿಲ್ಲೆಯ ಮಂಠಾಳದಲ್ಲಿ 5 ಸೆಮೀ, ಕೋಲಾರ ಜಿಲ್ಲೆಯ ರಾಯಲ್ಪಾಡುವಿನಲ್ಲಿ 5 ಸೆಮೀ, ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ 4 ಸೆಮೀ, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ 4 ಸೆಮೀ, ಮಂಡ್ಯದ ಬೆಳ್ಳೂರಿನಲ್ಲಿ 4 ಸೆಮೀ, ದಕ್ಷಿಣ ಕನ್ನಡದ ಮಣಿಯಲ್ಲಿ 3, ಯಾದಗಿರಿಯ ನಾರಾಯಣಪುರದಲ್ಲಿ 3, ಹಾಸನದಲ್ಲಿ 3, ಉತ್ತರ ಕನ್ನಡದ ಅಂಕೋಲಾದಲ್ಲಿ 2, ಗದಗ ಜಿಲ್ಲೆಯ ರೋಣದಲ್ಲಿ 2, ದಾವಣಗೆರೆ, ಬೇಲೂರು ಹಾಗೂ ಇತರೆಡೆ 1 ಸೆಮೀ ಮಳೆ ಆಗಿದೆ.
ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಅತ್ಯಂತ ಗಮನಾರ್ಹವಾಗಿ ಇಳಿಕೆ ಕಂಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಉತ್ತರ ಒಳನಾಡಿನ ಕೆಲವೆಡೆ ಗಮನಾರ್ಹವಾಗಿ ಏರಿಕೆ ಆಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 35.3 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಇಂದು ಹಾಗೂ ನಾಳೆ ಎಲ್ಲೆಲ್ಲಿ ಮಳೆ ಆಗಲಿದೆ?
ಇಂದು ( ಜೂ.7) ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ , ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆ ಆಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ , ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್ 8, ಶನಿವಾರದಂದು ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು , ಸುತ್ತಮುತ್ತಲಿನ ವಾತಾವರಣ
ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಸಾಧಾರಣ/ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ° ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಆಗಿರಬಹುದು. ಮುಂದಿನ 48 ಗಂಟೆಗಳಲ್ಲಿ ಕೂಡಾ ಇದೇ ವಾತಾವರಣ ಮುಂದುವರೆಯಲಿದೆ.
ರಾಜ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ