ಕರ್ನಾಟಕ ಹವಾಮಾನ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ತಾಪಮಾನ ಕುಸಿತ; ಡಿಸೆಂಬರ್ 13ರ ವರದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ತಾಪಮಾನ ಕುಸಿತ; ಡಿಸೆಂಬರ್ 13ರ ವರದಿ

ಕರ್ನಾಟಕ ಹವಾಮಾನ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ತಾಪಮಾನ ಕುಸಿತ; ಡಿಸೆಂಬರ್ 13ರ ವರದಿ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 13) ಕೂಡ ಮಳೆಯ ಪ್ರಭಾವ ಜೋರಿರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿದಿದೆ.

ಕರ್ನಾಟಕ ಹವಾಮಾನ ಡಿಸೆಂಬರ್ 13
ಕರ್ನಾಟಕ ಹವಾಮಾನ ಡಿಸೆಂಬರ್ 13

Karnataka Weather: ಕರ್ನಾಟಕದಲ್ಲಿ ವಿಚಿತ್ರ ವಾತಾವರಣವಿದೆ. ಕೆಲವು ಕಡೆ ಜೋರು ಮಳೆ, ಇನ್ನೂ ಕೆಲವು ಕಡೆ ಚಳಿ ಹಾಗೂ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಜೋರಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು (ಡಿಸೆಂಬರ್ 13) ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಚಳಿಯ ಪ್ರಭಾವವೂ ಜೋರಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಇನ್ನೂ 3 ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಹಾಗೂ ಮಡಿಕೇರಿಯಲ್ಲಿ ತಾಪಮಾನ ಭಾರಿ ಕುಸಿದಿದ್ದು, ಚಳಿ ಜೋರಿರಲಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಚಳಿಗಿಂತ ಬಿಸಿಲಿನ ಪ್ರತಾಪ ಜೋರಿದೆ. ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಒಣಹವೆ

ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ತಾಪಮಾನ ಕುಸಿದಿದ್ದು, ಚಳಿ ಪ್ರತಾಪ ಜೋರಿರಲಿದೆ. ಹವಾಮಾನ ವರದಿಯ ಪ್ರಕಾರ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರಾವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.

ದಕ್ಷಿಣ ಒಳನಾಡಿನಲ್ಲಿ ಇಂದೂ ಮಳೆ

ಬೆಂಗಳೂರಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಾಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿಯೂ ಮಳೆಯೂ

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇದರಿಂದಾಗಿ ಚಳಿಯೂ ಜೋರಿರಲಿದ್ದು, ಸಂಜೆ ಹಾಗೂ ಬೆಳಗಿನ ಹೊತ್ತು ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇಂದು ಕೂಡ ಹೊರ ಹೋಗುವಾಗ ನಿಮ್ಮ ಜೊತೆ ಛತ್ರಿ ತೆಗೆದುಕೊಂಡು ಹೋಗುವುದನ್ನು ಮರೆಯದಿರಿ.

Whats_app_banner