Kannada News  /  Karnataka  /  Karnataka Weather Report: What Is The Current Climate In Karnataka Rain In Karnataka Rain In Bengaluru
ಮಳೆ (ಸಾಂದರ್ಭಿಕ ಚಿತ್ರ)
ಮಳೆ (ಸಾಂದರ್ಭಿಕ ಚಿತ್ರ) (PTI)

Karnataka Weather Report: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಮುಂದಿನ ವಾರ ಹಿಂಗಾರು ಪ್ರವೇಶ

06 October 2022, 11:10 ISTHT Kannada Desk
06 October 2022, 11:10 IST

Karnataka Rain: ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ (Bangalore Rains), ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.

ಕರ್ನಾಟಕ (Karnataka Rain) ದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ (Bangalore Rains) , ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಮಳೆ ಇರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದಿನಿಂದ ಅಕ್ಟೋಬರ್ 8ರವರೆಗೆ ಭಾರೀ ಮಳೆಯಾಗಲಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್​​ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗುಜರಾತ್, ಕೊಂಕಣ, ಗೋವಾ ಮತ್ತು ರಾಯಲಸೀಮಾದಲ್ಲಿ ಕೂಡ ಹೆಚ್ಚು ಮಳೆ ಹಾಗೂ ಮಿಂಚಿನ ಸಾಧ್ಯತೆಯಿದೆ. ಲಡಾಖ್​ನಲ್ಲಿ ಹಿಮ ಬೀಳುವ ಸಾಧ್ಯತೆ ಇದೆ. ಉತ್ತರ ಹಿಮಾಲಯ ಪ್ರದೇಶದಲ್ಲಿ ಮುಂಜಾನೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಬಹುದು ಎಂದು ಇಲಾಖೆ ವಿವರಿಸಿದೆ.

ಬಂಗಾಳ ಕೊಲ್ಲಿ (Bay of Bengal) ಯಲ್ಲಿ ಸುಳಿಗಾಳಿ

ಬಂಗಾಳಕೊಲ್ಲಿಯ ಮೇಲ್ಮೈನಲ್ಲಿ ಉಂಟಾಗಿರುವ ಸುಳಿಗಾಳಿ ಹಿನ್ನೆಲೆ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ. ಆಂಧ್ರ ಪ್ರದೇಶ, ತಮಿಳುನಾಡು ಕರಾವಳಿಯಲ್ಲಿ ಕೊಂಚ ಅಧಿಕವಾಗಿ ಮಳೆಯಾಗಲಿದೆ. ಇನ್ನು ಕರ್ನಾಟಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದೆ. ಹಗುರವಾದ ಮಳೆ ಬಿದ್ದರೂ ಬೀಳಬಹುದು. ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡು ಭಾಗದಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಿಂಗಾರು ಮಳೆ ಮುಂದಿನ ವಾರ

ಕರ್ನಾಟಕ ಸೇರಿ ಭಾರತದಲ್ಲಿ ಹಿಂಗಾರು ಮಳೆ ಅಕ್ಟೋಬರ್ 2ನೇ ವಾರದಲ್ಲಿ ಪ್ರವೇಶಿಸುವ ಸಾಧ್ಯತೆ ಗೋಚರಿಸಿದೆ. ಅಲ್ಲಿಯವರೆಗೆ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಜಿಲ್ಲಾವಾರು ಹವಾಮಾನ ವರದಿ: (ಡಿಗ್ರಿ ಸೆಲ್ಸಿಯಸ್​ಗಳಲ್ಲಿ ಗರಿಷ್ಠ ಮತ್ತು ಕನಿಷ್ಠ) ಬೆಂಗಳೂರು: 27-19, ಶಿವಮೊಗ್ಗ: 28-21, ಮಂಗಳೂರು: 28-24, ಬೆಂಗಳೂರು ಗ್ರಾಮಾಂತರ: 27-19, ಕಾರವಾರ: 29-24, ಚಿಕ್ಕಬಳ್ಳಾಪುರ: 24-18, ಕೋಲಾರ: 27-20, ಮೈಸೂರು: 28-19, ದಾವಣಗೆರೆ: 29-21, ಚಿತ್ರದುರ್ಗ: 28-20, ಹಾವೇರಿ: 29-21, ಚಾಮರಾಜನಗರ: 29-20, ಬೆಳಗಾವಿ: 27-20, ಚಿಕ್ಕಮಗಳೂರು: 26-18, ಬಳ್ಳಾರಿ: 28-22, ಗದಗ: 29-21, ತುಮಕೂರು: 27-19, ಉಡುಪಿ: 28-24, ರಾಯಚೂರು: 28-23 ಕೊಪ್ಪಳ: 29-22, ವಿಜಯಪುರ: 29-22, ಮಡಿಕೇರಿ: 23-16, ರಾಮನಗರ: 28-19, ಹಾಸನ: 27-18, ಕಲಬುರಗಿ: 28-22, ಮಂಡ್ಯ: 30-20, ಯಾದಗಿರಿ: 28-23 ಮತ್ತು ಬಾಗಲಕೋಟೆ: 30-22, ಬೀದರ್: 25-21 ತಾಪಮಾನ ದಾಖಲಾಗಿದೆ.