Karnataka Weather: ಉತ್ತರ ಕರ್ನಾಟಕದಲ್ಲಿ ಆಗಲೇ ಶುರುವಾಯ್ತು ಬಿರುಬಿಸಿಲು; ಗದಗ, ಕಲಬುರಗಿ, ದಾವಣಗೆರೆ, ರಾಯಚೂರು ಉಷ್ಣಾಂಶದಲ್ಲಿ ಏರಿಕೆ
Karnataka Weather: ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆಕಾಲದ ಅನುಭವ ಶುರುವಾಗಿದೆ. ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡು ಬಂದಿದೆ.

Karnataka Weather: ಸಂಕ್ರಾಂತಿ ಮುಗಿದ ನಂತರ ಕರ್ನಾಟಕದಲ್ಲಿ ನಿಧಾನವಾಗಿ ಬೇಸಿಗೆಯ ಅನುಭವ ಶುರುವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರದಲ್ಲಿಯೇ ಬಿರುಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ಹಲವು ಜಿಲ್ಲೆಗಳಲ್ಲಿ ಈಗಲೇ ಗರಿಷ್ಠ ಉಷ್ಣಾಂಶದ ಪ್ರಮಾಣ 33 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆ ಹಾಗೂ ಕಿತ್ತೂರು ಕರ್ನಾಟಕ ಪ್ರದೇಶದ ಗದಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಯಚೂರು, ದಾವಣಗೆರೆಯಲ್ಲೂ ಬಿಸಿಲಿನ ಝಳ ಆಗಲೇ ಹೆಚ್ಚತೊಡಗಿದೆ. ಮಲೆನಾಡಿನ ಶಿವಮೊಗ್ಗದಲ್ಲಿ ಕಡಿಮೆ ಉಷ್ಣಾಂಶ ಬೆಳಗಿನ ವೇಳೆ ದಾಖಲಾಗಿದೆ. ಚಿಕ್ಕಮಗಳೂರಿನಲ್ಲೂ ಚಳಿಯ ಹವಾಮಾನ ಮುಂದುವರಿದಿದೆ. ಬೆಂಗಳೂರಿನಲ್ಲೂ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಉತ್ತರ ಕರ್ನಾಟಕದ ಉಷ್ಣಾಂಶ ಪ್ರಮಾಣ
ಉತ್ತರ ಕರ್ನಾಟಕದಲ್ಲಿ ಶಿವರಾತ್ರಿ ವೇಳೆ ಬಿಸಿಲ ಪ್ರಮಾಣ ಗಣನೀಯ ಏರಿಕೆ ಕಂಡು ಬರುತ್ತದೆ. ಈ ಬಾರಿ ಫೆಬ್ರವರಿ ಮೊದಲ ವಾರದಲ್ಲಿಯೇ ಕೆಲವು ಭಾಗದಲ್ಲಿ ಬಿಸಿಲು ಹೆಚ್ಚಿದೆ. ವಿಶೇಷವಾಗಿ ಕಲಬುರಗಿ, ರಾಯಚೂರು, ಗದಗ ಜಿಲ್ಲೆಗಳಲ್ಲಿ ಹೆಚ್ಚಳವಾಗಿರುವುದು ಕಂಡು ಬಂದಿದೆ.
ಕಲಬುರಗಿಯಲ್ಲಿ ಅತ್ಯಧಿಕ 35.6 ಡಿಗ್ರಿ ಸೆಲ್ಸಿಯಸ್
ಗದಗದಲ್ಲಿ 35.2 ಡಿಗ್ರಿ ಸೆಲ್ಸಿಯಸ್
ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್
ವಿಜಯಪುರದಲ್ಲಿ 33.8 ಡಿಗ್ರಿ ಸೆಲ್ಸಿಯಸ್
ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್
ಬೆಳಗಾವಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್
ಬೀದರ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್
ಧಾರವಾಡದಲ್ಲಿ 33.2ಡಿಗ್ರಿ ಸೆಲ್ಸಿಯಸ್
ಹಾವೇರಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್
ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ದಕ್ಷಿಣ ಕರ್ನಾಟದಲ್ಲಿ ಹೇಗೆ
ದಕ್ಷಿಣ ಕರ್ನಾಟಕ ಭಾಗದಲ್ಲೂ ಬಿಸಿಲಿನ ಪ್ರಮಾಣ ನಿಧಾನವಾಗಿ ಏರಿಕೆ ಕಾಣುತ್ತಿದೆ. ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ ಸಹಿತ ಹಲವು ಕಡೆ ಉಷ್ಣಾಂಶದಲ್ಲಿ ಹೆಚ್ಚಳವಾಗಿದೆ.
ದಾವಣಗೆರೆಯಲ್ಲಿ 34. ಡಿಗ್ರಿ ಸೆಲ್ಸಿಯಸ್
ಚಾಮರಾಜನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದಲ್ಲಿ 34 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗದಲ್ಲಿ 33.5 ಡಿಗ್ರಿ ಸೆಲ್ಸಿಯಸ್
ಮಂಡ್ಯದಲ್ಲಿ 32.8 ಡಿಗ್ರಿ ಸೆಲ್ಸಿಯಸ್
ಮೈಸೂರಲ್ಲಿ 32.8 ಡಿಗ್ರಿ ಸೆಲ್ಸಿಯಸ್
ಮಡಿಕೇರಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್
ಹಾಸನದಲ್ಲಿ 31.7 ಡಿಗ್ರಿ ಸೆಲ್ಸಿಯಸ್
ಚಿಕ್ಕಮಗಳೂರಲ್ಲಿ 29.4 ಡಿಗ್ರಿ ಸೆಲ್ಸಿಯಸ್
ಚಿಂತಾಮಣಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರಾವಳಿಯಲ್ಲಿ ಹೇಗಿದೆ
ಕರಾವಳಿ ಭಾಗದಲ್ಲೂ ಗರಿಷ್ಠ ಉಷ್ಣಾಂಶ ಪ್ರಮಾಣ ಹೆಚ್ಚಿದೆ. ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಮಂಗಳೂರಿನ ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಇತ್ತು.ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್ ಇದ್ದರೆ ಕನಿಷ್ಠ ಉಷ್ಣಾಂಶದ ಪ್ರಮಾಣವು 19 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಪ್ರದೇಶದಲ್ಲಿ ಶನಿವಾರದಂದು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ಪ್ರದೇಶದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಹಾಗೂ ಜಿಕೆವಿಕೆ ಪ್ರದೇಶದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಕಂಡು ಬಂದಿತು.
